< Psalmi 130 >
1 Hodočasnička pjesma. Iz dubine, Jahve, vapijem tebi:
೧ಯಾತ್ರಾಗೀತೆ. ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.
2 Gospodine, čuj glas moj! Neka pazi uho tvoje na glas moga vapaja!
೨ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ.
3 Ako se, Jahve, grijeha budeš spominjao, Gospodine, tko će opstati?
೩ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?
4 Al' u tebe je praštanje, da bi te se bojali.
೪ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.
5 U Jahvu ja se uzdam, duša se moja u njegovu uzda riječ.
೫ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.
6 Duša moja čeka Gospodina više no zoru straža noćna; više no zoru straža noćna
೬ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.
7 nek' Izrael čeka Jahvu. Jer je u Jahve milosrđe i obilno je u njega otkupljenje;
೭ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.
8 on će otkupiti Izraela od svih grijeha njegovih.
೮ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.