< Psalmi 148 >

1 Aleluja! Hvalite Jahvu s nebesa, hvalite ga u visinama!
ಯೆಹೋವನಿಗೆ ಸ್ತೋತ್ರ! ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ, ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ.
2 Hvalite ga, svi anđeli njegovi, hvalite ga, sve vojske njegove!
ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ, ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ.
3 Hvalite ga, sunce i mjeseče, hvalite ga, sve zvijezde svjetlosne!
ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ, ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.
4 Hvalite ga, nebesa nebeska, i vode nad svodom nebeskim!
ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ.
5 Neka hvale ime Jahvino jer on zapovjedi i postadoše.
ಅವು ಯೆಹೋವನ ನಾಮವನ್ನು ಸ್ತುತಿಸಲಿ, ಆತನು ಅಪ್ಪಣೆಕೊಡಲು ಅವು ಉಂಟಾದವು.
6 Postavi ih zauvijek i dovijeka po zakonu koji neće proći.
ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ, ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ.
7 Hvalite Jahvu sa zemlje, nemani morske i svi bezdani!
ಭೂಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ. ತಿಮಿಂಗಿಲಗಳು, ಆದಿಸಾಗರಗಳು
8 Ognju i grÓade, sniježe i maglo, olujni vjetre, što riječ njegovu izvršavaš!
ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳು, ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು,
9 Gore i svi brežuljci, plodonosna stabla i svi cedrovi!
ಬೆಟ್ಟಗಳು, ಎಲ್ಲಾ ಗುಡ್ಡಗಳು, ಹಣ್ಣಿನ ಮರಗಳು, ಎಲ್ಲಾ ತುರಾಯಿ ಮರಗಳು,
10 Zvijeri i sve životinje, gmizavci i ptice krilate!
೧೦ಎಲ್ಲಾ ಮೃಗ, ಪಶು, ಪಕ್ಷಿ, ಕ್ರಿಮಿಕೀಟಗಳು,
11 Zemaljski kraljevi i svi narodi, knezovi i suci zemaljski!
೧೧ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು,
12 Mladići i djevojke, starci s djecom zajedno:
೧೨ಪ್ರಾಯಸ್ಥರಾದ ಸ್ತ್ರೀಪುರುಷರು, ಮುದುಕರು, ಹುಡುಗರು
13 nek' svi hvale ime Jahvino, jer jedino je njegovo ime uzvišeno! Njegovo veličanstvo zemlju i nebo nadvisuje,
೧೩ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.
14 on podiže snagu svom narodu, on proslavlja svete svoje, sinove Izraelove - narod njemu blizak. Aleluja!
೧೪ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ. ಆದುದರಿಂದ ಆತನ ಎಲ್ಲಾ ಭಕ್ತರು, ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ. ಯೆಹೋವನಿಗೆ ಸ್ತೋತ್ರ!

< Psalmi 148 >