< Psalmi 36 >

1 Zborovođi. Od sluge Jahvina Davida. Grešan je naum u srcu zlotvora, straha Božjega nema on pred očima.
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆಹೋವನ ಸೇವಕನಾದ ದಾವೀದನ ಕೀರ್ತನೆ. ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.
2 Sam sebi on laska suviše, grijeha svog ne vidi i ne mrzi.
ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ.
3 Riječi usta njegovih prijevara su i zlodjelo, za razumnost i dobro on više ne mari.
ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.
4 Bezakonje smišlja na postelji svojoj, na opaku ostaje putu, od zla ne odustaje.
ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.
5 Do neba je, Jahve, dobrota tvoja, do oblaka vjernost tvoja.
ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.
6 Pravednost je tvoja k'o Božji vrhunci, a sudovi tvoji k'o duboko more: ljude i stoku ti, Jahve, spasavaš.
ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.
7 Kako li je dragocjena, Bože, dobrota tvoja, pod sjenu krila tvojih ljudi se sklanjaju;
ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.
8 site se pretilinom Doma tvojega, potocima svojih slasti ti ih napajaš.
ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.
9 U tebi je izvor životni, tvojom svjetlošću mi svjetlost vidimo.
ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.
10 Zakrili dobrotom sve koji te štuju i pravednošću svojom sve koji su srca čestita.
೧೦ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.
11 Neka me ne zgazi noga ohola, i ruka grešnika neka me ne goni.
೧೧ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ; ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು.
12 Gle, padoše koji čine bezakonje: oboreni su da više ne ustanu.
೧೨ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ.

< Psalmi 36 >