< Psalmi 46 >

1 Zborovođi. Sinova Korahovih. Po napjevu “Djevice”. Pjesma. Bog nam je zaklon i utvrda, pomoćnik spreman u nevolji.
ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು. ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
2 Stoga, ne bojmo se kad se ljulja zemlja, kad se bregovi ruše u more.
ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ.
3 Nek' buče i bjesne valovi morski, nek' bregovi dršću od žestine njihove: s nama je Jahve nad Vojskama, naša je utvrda Bog Jakovljev!
ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? (ಸೆಲಾ)
4 Rijeka i rukavci njezini vesele Grad Božji, presveti šator Višnjega.
ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.
5 Bog je sred njega, poljuljat se neće, od rane zore Bog mu pomaže.
ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.
6 Ma bješnjeli puci, rušila se carstva, kad glas njegov zagrmi, zemlja se rastopi:
ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.
7 s nama je Jahve nad Vojskama, naša je utvrda Bog Jakovljev!
ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. (ಸೆಲಾ)
8 Dođite, gledajte djela Jahvina, strahote koje on na zemlji učini.
ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.
9 Do nakraj zemlje on ratove prekida, lukove krši i lomi koplja, štitove ognjem sažiže.
ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.
10 Prestanite i znajte da sam ja Bog, uzvišen nad pucima, nad svom zemljom uzvišen!
೧೦“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.
11 S nama je Jahve nad Vojskama, naša je utvrda Bog Jakovljev!
೧೧ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. (ಸೆಲಾ)

< Psalmi 46 >