< Titu 3 >
1 Podsjećaj ih da se podlažu poglavarstvima, vlastima, da slušaju, da budu spremni na svako dobro djelo,
೧ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,
2 nikoga da ne pogrđuju, da budu neratoborni, popustljivi, da očituju svaku blagost prema svim ljudima.
೨ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.
3 Jer i mi nekoć bijasmo nerazumni, nepokorni, lutalice, robovi raznih požuda i naslada, živjeli smo u zlu i zavisti, odvratni bili, mrzili jedni druge.
೩ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.
4 Ali kad se pojavila dobrostivost i čovjekoljublje Spasitelja našega, Boga,
೪ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,
5 on nas spasi ne po djelima što ih u pravednosti mi učinismo, nego po svojem milosrđu: kupelji novoga rođenja i obnavljanja po Duhu Svetom
೫ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.
6 koga bogato izli na nas po Isusu Kristu, Spasitelju našemu,
೬ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗೆ ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ ಸುರಿಸಿದನು. (aiōnios )
7 da opravdani njegovom milošću budemo, po nadi, baštinici života vječnoga. (aiōnios )
೭
8 Vjerodostojna je ovo riječ i hoću da to uporno tvrdiš te da oni koji su povjerovali Bogu uznastoje prednjačiti dobrim djelima. To je dobro i korisno ljudima.
೮ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.
9 A ludih se raspra, i rodoslovlja, i svađa, i sukoba zakonskih kloni: beskorisni su i isprazni.
೯ಆದರೆ ಬುದ್ಧಿಯಿಲ್ಲದ ತರ್ಕಗಳಿಂದಲೂ, ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.
10 S krivovjercem nakon prvoga i drugog upozorenja prekini
೧೦ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;
11 znajući da je izopačen i da griješi: on sam sebe osuđuje.
೧೧ಅಂಥವನು ಸನ್ಮಾರ್ಗದಿಂದ ದೂರವಾದವನೂ ಪಾಪಮಾಡುವವನೂ ಆಗಿದ್ದಾನೆ; ತಾನು ಶಿಕ್ಷೆಗೆ ಅರ್ಹನೆಂದು ಅವನ ಮನಸ್ಸೇ ನಿರ್ಣಯ ಮಾಡುತ್ತದೆ.
12 Kad pošaljem k tebi Artemu ili Tihika, požuri se k meni u Nikopol jer sam odlučio ondje prezimiti.
೧೨ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು.
13 Zenu, pravnika, i Apolona brižljivo opremi da im ništa ne ponestane.
೧೩ನ್ಯಾಯಶಾಸ್ತ್ರಿಯಾದ ಜೇನನನ್ನೂ ಮತ್ತು ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಕಳುಹಿಸಿಕೊಡು; ಅವರಿಗೇನೂ ಕೊರತೆಯಾಗಬಾರದು.
14 A i naši neka se uče prednjačiti dobrim djelima u životnim potrebama da ne budu neplodni.
೧೪ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.
15 Pozdravljaju te svi koji su sa mnom. Pozdravi one koji nas ljube u vjeri. Milost sa svima vama!
೧೫ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆಯುಳ್ಳವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಸಲ್ಲಿಸು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.