< 2 Kronická 17 >
1 I kraloval Jozafat syn jeho místo něho, a zmocnil se Izraele.
೧ಆಸನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು. ಅವನು ಇಸ್ರಾಯೇಲರೆದುರು ಪ್ರಬಲನಾಗಿದ್ದನು.
2 I osadil lidem válečným všecka města hrazená v Judstvu, a postavil stráž v zemi Judské a v městech Efraim, kteráž byl zdobýval Aza otec jeho.
೨ಅವನು ಯೆಹೂದದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ರ ಪಟ್ಟಣಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿದನು.
3 A byl Hospodin s Jozafatem; nebo chodil po cestách Davida otce svého prvních, aniž hledal modl.
೩ಇವನು ಬಾಳ್ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು.
4 Ale Boha otce svého hledal, a v přikázaních jeho chodil, aniž následoval skutků lidu Izraelského.
೪ಇವನು ಇಸ್ರಾಯೇಲರಂತೆ ನಡೆಯದೆ, ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.
5 I utvrdil Hospodin království v ruce jeho, a dal všecken lid Judský dary Jozafatovi, tak že měl bohatství a slávy hojně.
೫ಆದುದರಿಂದ ಯೆಹೋವನು ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದನು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನ ಘನತೆಗಳು ಹೆಚ್ಚಾದವು.
6 A nabyv udatného srdce k cestám Hospodinovým, zkazil přesto také i výsosti a háje v Judstvu.
೬ಇವನು ಯೆಹೋವನ ಮಾರ್ಗದಲ್ಲಿ ನಡೆದು ಧೈರ್ಯಗೊಂಡನು; ಇದಲ್ಲದೆ ಯೆಹೂದ ದೇಶದಲ್ಲಿದ್ದ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದು ಹಾಕಿಸಿದನು.
7 Léta pak třetího království svého poslal knížata svá: Benchaile, Abdiáše, Zachariáše, Natanaele a Micheáše, aby učili v městech Judských.
೭ಇವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಅಧಿಕಾರಿಗಳಾದ ಬೆನ್ಹೈಲ್, ಓಬದ್ಯ, ಜೆಕರ್ಯ ನೆತನೇಲ್, ಮಿಕಾಯ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವುದಕ್ಕೋಸ್ಕರ ಯೆಹೂದ ದೇಶದ ಪಟ್ಟಣಗಳಿಗೆ ಕಳುಹಿಸಿದನು.
8 A s nimi Levíty: Semaiáše, Netaniáše, Zebadiáše, Azaele, Semiramota, Jonatana, Adoniáše, Tobiáše a Tobadoniáše, Levíty, a s nimi Elisama a Jehorama, kněží,
೮ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರು ಇದ್ದರು. ಎಲೀಷಾಮಾ, ಯೆಹೋರಾಮ್,
9 Kteříž učili v Judstvu, majíce s sebou knihu zákona Hospodinova. Chodili pak vůkol po všech městech Judských, vyučujíce lid.
೯ಇವರು ಯೆಹೋವನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಯೆಹೂದ ದೇಶದ ಪಟ್ಟಣದಲ್ಲೆಲ್ಲಾ ಸಂಚಾರ ಮಾಡಿ ಜನರಿಗೆ ಬೋಧಿಸಿದರು.
10 I byl strach Hospodinův na všech královstvích zemí, kteréž byly vůkol Judstva, tak že nebojovali proti Jozafatovi.
೧೦ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರೆಗೆ ಯೆಹೋವನ ಭಯವಿದ್ದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.
11 Nýbrž i Filistinští přinášeli Jozafatovi dary a berni uloženou. Arabští také přiháněli jemu dobytky, skopců po sedmi tisících a sedmi stech, též kozlů po sedmi tisících a sedmi stech.
೧೧ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ, ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಪ್ರಾಣಿಗಳ ಹಿಂಡುಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಆಡುಗಳನ್ನೂ ಕೊಡುತ್ತಿದ್ದರು.
12 I prospíval Jozafat, a rostl až na nejvyšší, a vystavěl v Judstvu zámky a města k skladům.
೧೨ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದ ದೇಶದಲ್ಲಿ ಕೋಟೆಗಳನ್ನೂ ಮತ್ತು ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
13 A práci mnohou vedl při městech Judských, muže pak válečné a slovoutné měl v Jeruzalémě.
೧೩ಯೆಹೂದದ ಪಟ್ಟಣಗಳಲ್ಲಿ ದವಸಧಾನ್ಯಗಳ ದೊಡ್ಡ ಮಳಿಗೆಗಳಿದ್ದವು. ಯೆರೂಸಲೇಮಿನಲ್ಲಿ ಯುದ್ಧವೀರರಾದ ಭಟರೂ ಇದ್ದರು.
14 A tento jest počet jich po domích otců jejich: Z Judy knížata nad tisíci: Adna kníže, a s ním udatných rytířů třikrát sto tisíc.
೧೪ಪೂರ್ವಿಕರ ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಗೋತ್ರ ಪ್ರಧಾನರು ಯಾರೆಂದರೆ: ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ಯುದ್ಧವೀರರ ಅಧಿಪತಿಯಾದ ಅದ್ನ;
15 A po něm Jochanan kníže, a s ním dvě stě a osmdesát tisíc.
೧೫ಇವನ ತರುವಾಯ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಯುದ್ಧವೀರರ ಅಧಿಪತಿಯಾದ ಯೆಹೋಹಾನಾನ್;
16 Po něm Amaziáš syn Zichrův, kterýž se dobrovolně byl oddal Hospodinu, a při něm dvakrát sto tisíc mužů udatných.
೧೬ತರುವಾಯ ಎರಡು ಲಕ್ಷ ಮಂದಿ ಯುದ್ಧವೀರರೊಡನೆ ಸ್ವಇಚ್ಛೆಯಿಂದ ತನ್ನನ್ನೇ ಯೆಹೋವನಿಗೆ ಪ್ರತಿಷ್ಠಿಸಿಕೊಂಡ ಜಿಕ್ರಿಯನ ಮಗನಾದ ಅಮಸ್ಯ;
17 Z Beniamina pak muž udatný Eliada, a s ním lidu zbrojného s lučišti a pavézami dvakrát sto tisíc.
೧೭ಬೆನ್ಯಾಮೀನ್ಯರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಯುದ್ಧವೀರರ ಅಧಿಪತಿಯಾದ ಎಲ್ಯಾದ;
18 A po něm Jozabad, a s ním sto a osmdesát tisíc způsobných k boji.
೧೮ಒಂದು ಲಕ್ಷದ ಎಂಭತ್ತುಸಾವಿರ ಮಂದಿ ಯುದ್ಧಸನ್ನದ್ಧ ಸೈನಿಕರ ನಾಯಕನಾದ ಯೆಹೋಜಾಬಾದ್ ಎಂಬುವವರು.
19 Ti sloužili králi, kromě těch, kteréž byl osadil král po městech hrazených po všem Judstvu.
೧೯ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದ ಈ ಯೋಧರಲ್ಲದೆ, ಕೋಟೆ ಕೊತ್ತಲಗಳುಳ್ಳ ಯೆಹೂದ ಪಟ್ಟಣಗಳಲ್ಲಿಯೂ ಸೈನಿಕರಿದ್ದರು.