< Ezechiel 35 >
1 Opět stalo se slovo Hospodinovo ke mně, řkoucí:
೧ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2 Synu člověčí, obrať tvář svou proti hoře Seir, a prorokuj proti ní.
೨“ನರಪುತ್ರನೇ, ನೀನು ಸೇಯೀರ್ ಬೆಟ್ಟದ ಸೀಮೆಯ ವಿರುದ್ಧವಾಗಿ ಅದಕ್ಕೆ ಈ ಪ್ರವಾದನೆಯನ್ನು ನುಡಿ,
3 A rci jí: Takto praví Panovník Hospodin: Aj, já jsem proti tobě, horo Seir, a vztáhnu ruku svou na tebe, a obrátím tě v hroznou poušť.
೩ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಸೇಯೀರ್ ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳು ಮಾಡುವೆನು.
4 Města tvá v poušť obrátím, a ty budeš pustinou, i zvíš, že já jsem Hospodin,
೪ನಾನು ನಿನ್ನ ಪಟ್ಟಣಗಳನ್ನು ನಾಶಪಡಿಸಲು ನೀನು ಹಾಳಾಗುವಿ; ಆಗ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿ.
5 Proto že máš nepřátelství věčné, a rozptyluješ syny Izraelské mečem v čas bídy jejich, v čas dokonání nepravosti.
೫“‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ.
6 Protož živť jsem já, praví Panovník Hospodin, že k zabití připravím tě, a krev tě stihati bude. Poněvadž krve vylévání v nenávisti nemáš, také tě krev stihati bude.
೬ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು’” ಇದು ಕರ್ತನಾದ ಯೆಹೋವನ ನುಡಿ.
7 Obrátím, pravím, horu Seir v hroznou poušť, a vypléním z ní jdoucího přes ni i vracujícího se.
೭“ಸೇಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಮಾಡಿ, ಅದರೊಳಗೆ ಹೋಗುವವರನ್ನೂ, ಬರುವವರನ್ನೂ ಕಡಿದುಹಾಕುವೆನು.
8 A naplním hory její zbitými jejími; na pahrbcích tvých i v údolích tvých, i při všech potocích tvých zbití mečem padati budou.
೮ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವೆನು; ಖಡ್ಗದಿಂದ ಹತರಾದವರು ನಿನ್ನ ಗುಡ್ಡಗಳಲ್ಲಿ, ಕಣಿವೆಗಳಲ್ಲಿ, ಹಳ್ಳಗಳಲ್ಲಿ ಬಿದ್ದುಹೋಗುವರು.
9 V pustiny věčné obrátím tě, tak že města tvá nebudou zase vzdělána, i zvíte, že já jsem Hospodin.
೯ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ.”
10 Proto že říkáš: Tito dva národové a tyto dvě země mé budou, a budeme dědičně vládnouti tou, v níž Hospodin přebýval,
೧೦ನೀನು, “ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು” ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ,
11 Protož živť jsem já, praví Panovník Hospodin, žeť učiním podlé hněvu tvého a podlé závisti tvé, kterouž jsi prokázala z nenávisti své proti nim. I budu poznán od nich, když tě budu souditi.
೧೧“ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ, ಹೊಟ್ಟೆಕಿಚ್ಚಿಗೂ ನಾನು ನಿನ್ನ ವಿರುದ್ಧವಾಗಿ ನ್ಯಾಯ ತೀರಿಸಿದ ಮೇಲೆ, ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.
12 A zvíš, že já Hospodin slyšel jsem všecka hanění tvá, kteráž jsi mluvila o horách Izraelských, řkuci: Zpuštěnyť jsou, námť jsou dány k sežrání.
೧೨ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ. ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ, ಆಹಾ, ಹಾಳಾದವು! ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.
13 Nebo jste se honosili proti mně ústy svými, a množili proti mně slova svá, což jsem sám slyšel.
೧೩ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”
14 Takto praví Panovník Hospodin: Jakž se veselí všecka ta země, tak pustinu učiním z tebe.
೧೪ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳುಮಾಡಿ, ಲೋಕವನ್ನೆಲ್ಲಾ ಸಂತೋಷಪಡಿಸುವೆನು.
15 Jakž se veselíš nad dědictvím domu Izraelského, proto že zpustl, tak učiním i tobě. Pustinou budeš, ó horo Seir, i všecka země Idumejská naskrze, i zvědíť, že já jsem Hospodin.
೧೫ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.”