< Židům 4 >
1 Bojmež se tedy, aby snad opustě zaslíbení o vjití do odpočinutí jeho, neopozdil se někdo z vás.
೧ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.
2 Nebo i nám zvěstováno jest, jako i oněmno, ale neprospěla jim řeč slyšená, nepřipojená k víře těch, kteříž slyšeli.
೨ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
3 Neboť vcházíme v odpočinutí my, kteříž jsme uvěřili, jakož řekl: Protož jsem přisáhl v hněvě svém, žeť nevejdou v odpočinutí mé, ačkoli dokonána jsou díla od ustanovení světa.
೩ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ “ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ.
4 Nebo pověděl na jednom místě o sedmém dni takto: I odpočinul Bůh dne sedmého ode všech skutků svých.
೪ಎಲ್ಲಿಯೋ ಒಂದು ಕಡೆ ಏಳನೆಯ ದಿನವನ್ನು ಕುರಿತಾಗಿ, “ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂದು” ಬರೆದದೆ.
5 A tuto zase: Že nevejdou v odpočinutí mé.
೫“ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು” ಎಂದು ಭಾಗದಲ್ಲಿ ಆತನು ಪುನಃ ಹೇಳಿದ್ದಾನೆ.
6 A poněvadž vždy na tom jest, že někteří mají vjíti do něho, a ti, kterýmž prvé zvěstováno jest, nevešli pro nevěru,
೬ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದರು.
7 Opět ukládá den jakýsi: Dnes, skrze Davida, po takovém času pravě, (jakož řečeno jest: ) Dnes uslyšíte-li hlas jeho, nezatvrzujte srdcí svých.
೭ಪುನಃ ಬಹುಕಾಲದ ನಂತರ ಆತನು ದಾವೀದನ ಮೂಲಕ ‘ಈ ಹೊತ್ತೇ’ ಎಂದು ಬೇರೊಂದು ದಿನವನ್ನು ಗೊತ್ತುಮಾಡಿದ್ದಾನೆ. ಹೇಗೆಂದರೆ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಡುವುದಾದರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ!” ಎಂದು ಹೇಳುತ್ತಾನಷ್ಟೆ.
8 Nebo byť byl Jozue v odpočinutí je uvedl, nebylť by potom mluvil o jiném dni.
೮ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ.
9 A protož zůstáváť svátek lidu Božímu.
೯ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.
10 Nebo kdožkoli všel v odpočinutí jeho, takéť i on odpočinul od skutků svých, jako i Bůh od svých.
೧೦ಹೇಗೆಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.
11 Snažmež se tedy vjíti do toho odpočinutí, aby někdo neupadl v týž příklad nedověry.
೧೧ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.
12 Živáť jest zajisté řeč Boží a mocná, a pronikavější nad všeliký meč na obě strany ostrý, a dosahujeť až do rozdělení i duše i ducha i kloubů i mozku v kostech, a rozeznává myšlení i mínění srdce.
೧೨ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
13 A neníť stvoření, kteréž by nebylo zjevné před oblíčejem jeho, nýbrž všecky věci jsou nahé a odkryté očima toho, o kterémž jest řeč naše.
೧೩ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.
14 Protož majíce velikého nejvyššího kněze, kterýž pronikl nebesa, Ježíše Syna Božího, držmež to vyznání.
೧೪ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.
15 Nebo nemáme nejvyššího kněze, kterýž by nemohl čitedlen býti mdlob našich, ale zkušeného ve všem nám podobně, kromě hříchu.
೧೫ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
16 Přistupmež tedy směle s doufáním k trůnu milosti, abychom dosáhli milosrdenství, a milost nalezli ku pomoci v čas příhodný.
೧೬ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.