< Žalmy 97 >
1 Hospodin kraluje, plésej země, a vesel se ostrovů všecko množství.
೧ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.
2 Oblak a mrákota jest vůkol něho, spravedlnost a soud základ trůnu jeho.
೨ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.
3 Oheň předchází jej, a zapaluje vůkol nepřátely jeho.
೩ಬೆಂಕಿಯು ಆತನ ಮುಂದೆ ಹೋಗಿ, ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ.
4 Zasvěcujíť se po okršlku světa blýskání jeho; to viduc země, děsí se.
೪ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು.
5 Hory jako vosk rozplývají se před oblíčejem Hospodina, před oblíčejem Panovníka vší země.
೫ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು.
6 Nebesa vypravují o jeho spravedlnosti, a slávu jeho spatřují všickni národové.
೬ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.
7 Zastyďte se všickni, kteříž sloužíte rytinám, kteříž se chlubíte modlami; sklánějte se před ním všickni bohové.
೭ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.
8 To uslyše Sion, rozveselí se, a zpléší dcery Judské z příčiny soudů tvých, Hospodine.
೮ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀಯೋನ್ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.
9 Nebo ty, Hospodine, jsi nejvyšší na vší zemi, a velice jsi vyvýšený nade všecky bohy.
೯ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.
10 Vy, kteříž milujete Hospodina, mějte v nenávisti to, což zlého jest; onť ostříhá duší svatých svých, a z ruky bezbožníků je vytrhuje.
೧೦ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
11 Světlo vsáto jest spravedlivým, a radost těm, kteříž jsou upřímého srdce.
೧೧ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.
12 Veselte se, spravedliví v Hospodinu, a oslavujte památku svatosti jeho.
೧೨ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.