< 1 Kronická 10 >
1 Když pak bojovali Filistinští s Izraelem, utíkali muži Izraelští před Filistinskými, a padli, zbiti jsouce na hoře Gelboe.
೧ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಸತ್ತುಹೋದರು.
2 I stihali Filistinští Saule a syny jeho, a zabili Filistinští Jonatu, Abinadaba a Melchisua, syny Saulovy.
೨ಫಿಲಿಷ್ಟಿಯರು ಸೌಲನನ್ನೂ, ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನ್ನೂ, ಅಬೀನಾದಾಬನನ್ನೂ ಮತ್ತು ಮಲ್ಕೀಷೂವನನ್ನೂ ಕೊಂದರು.
3 A když se zsilila bitva proti Saulovi, trefili na něj střelci s luky, a postřelen jest od střelců.
೩ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರರು ಅವನಿಗೆ ಗುರಿಯಿಟ್ಟರು.
4 Protož řekl Saul oděnci svému: Vytrhni meč svůj a probodni mne jím, aby přijdouce ti neobřezanci, nečinili sobě ze mne posměchu. Ale nechtěl oděnec jeho, nebo se bál velmi. A pochytiv Saul meč, nalehl na něj.
೪ಆಗ ಸೌಲನು ತನ್ನ ಆಯುಧ ಹೊರುವವನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು, ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನಗೆ ಅಪಕೀರ್ತಿ ತಂದಾರು” ಎಂದು ಹೇಳಲು ಅವನು ಹೆದರಿ ಹಿಂಜರಿದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು, ಅದರ ಮೇಲೆ ಬಿದ್ದನು.
5 Tedy vida oděnec jeho, že umřel Saul, nalehl i on na meč a umřel.
೫ಸೌಲನು ಸತ್ತದ್ದನ್ನು ಅವನ ಆಯುಧ ಹೊರುವವನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಸತ್ತನು.
6 A tak umřel Saul i tři synové jeho, a všecka čeled jeho spolu zemřeli.
೬ಹೀಗೆ ಸೌಲನೂ, ಅವನ ಮೂರು ಮಕ್ಕಳೂ, ಅವನ ಮನೆಯವರೆಲ್ಲರೂ ಅದೇ ದಿನದಲ್ಲಿ ಸತ್ತರು.
7 Když pak uzřeli všickni muži Izraelští, kteříž bydlili za tím údolím, že utekli Izraelští, a že zemřeli Saul i synové jeho, opustivše města svá, též utíkali. I přišli Filistinští a bydlili v nich.
೭ಇಸ್ರಾಯೇಲರು ಸೋತು ಹೋದರು. ಸೌಲನೂ, ಅವನ ಮಕ್ಕಳು ಸತ್ತರು ಎಂಬ ವರ್ತಮಾನವನ್ನು ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲರೆಲ್ಲರೂ ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು.
8 Potom nazejtří přišli Filistinští, aby zloupili pobité. I nalezli Saule a syny jeho, ležící na hoře Gelboe.
೮ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕಾಗಿ ಬಂದಾಗ, ಸೌಲನೂ ಅವನ ಮೂರು ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡರು.
9 A svlékše ho, vzali hlavu jeho i odění jeho, a poslali po zemi Filistinské vůkol, aby to ohlášeno bylo modlám jejich i lidu.
೯ಫಿಲಿಷ್ಟಿಯರು ಸೌಲನಿಗಿರುವುದೆಲ್ಲವನ್ನು ಸುಲಿದುಕೊಂಡು ಅವನ ತಲೆಯನ್ನೂ, ಆಯುಧಗಳನ್ನೂ ತಮ್ಮ ದೇಶದ ಎಲ್ಲಾ ಕಡೆಗೆ ಕಳುಹಿಸಿ, ತಮ್ಮ ದೇವತೆಗಳಿಗೂ, ಜನರಿಗೂ ಜಯವಾರ್ತೆಯನ್ನು ಮುಟ್ಟಿಸಿದರು.
10 Složili také i odění jeho v chrámě boha svého, hlavu pak jeho přibili v chrámě Dágon.
೧೦ಅವನ ಆಯುಧಗಳನ್ನು ತಮ್ಮ ದೇವಸ್ಥಾನದಲ್ಲಿಟ್ಟರು. ಅವನ ತಲೆಯನ್ನು ದಾಗೋನನ ಗುಡಿಯಲ್ಲಿ ನೇತುಹಾಕಿದರು.
11 Tedy uslyšavše všickni v Jábes Galád všecko, což učinili Filistinští Saulovi,
೧೧ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನವು ಯಾಬೇಷ್ ಗಿಲ್ಯಾದವರಿಗೆ ಮುಟ್ಟಿತು.
12 Zdvihli se všickni muži silní a vzali tělo Saulovo, a těla synů jeho, a přinesli je doJábes. A pochovavše kosti jejich pod jedním dubem v Jábes, postili se sedm dní.
೧೨ಆಗ ಅವರಲ್ಲಿರುವ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷಿಗೆ ತೆಗೆದುಕೊಂಡು ಬಂದು, ಅವರ ಎಲುಬುಗಳನ್ನು ಅಲ್ಲಿದ್ದ ಏಲಾ ಮರದ ಕೆಳಗೆ ಸಮಾಧಿ ಮಾಡಿ, ಏಳು ದಿನಗಳ ವರೆಗೆ ಉಪವಾಸ ಮಾಡಿದರು.
13 A tak umřel Saul pro přestoupení své, jímž byl přestoupil proti Hospodinu, totiž proti slovu Hospodinovu, jehož neostříhal, a že se také radil s duchem věštím, doptávaje se ho,
೧೩ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.
14 A nedoptával se Hospodina. Protož zabil jej, a přenesl království na Davida syna Izai.
೧೪ಯೆಹೋವನು ಅವನನ್ನು ಕೊಲ್ಲಿಸಿ, ರಾಜ್ಯವನ್ನು ಇಷಯನ ಮಗನಾದ ದಾವೀದನಿಗೆ ಒಪ್ಪಿಸಿದನು.