< 1 Korintským 1 >
1 Pavel, povolaný apoštol Ježíše Krista, skrze vůli Boží, a bratr Sostenes,
೧ದೇವರ ಚಿತ್ತದಂತೆ ಯೇಸು ಕ್ರಿಸ್ತನಿಂದ ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟ ಪೌಲನೂ ಮತ್ತು ನಮ್ಮ ಸಹೋದರನಾದ ಸೊಸ್ಥೆನನೂ,
2 Církvi Boží, kteráž jest v Korintu, posvěceným v Kristu Ježíši, povolaným svatým, spolu se všemi, kteříž vzývají jméno Pána našeho Jezukrista na všelikém místě, i jejich i našem:
೨ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,
3 Milost vám a pokoj od Boha Otce našeho a Pána Jezukrista.
೩ನಮ್ಮ ತಂದೆಯಾಗಿರುವ ದೇವರಿಂದಲೂ ಹಾಗೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಉಂಟಾಗಲಿ.
4 Děkuji Bohu svému vždycky za vás pro tu milost Boží, kteráž dána jest vám v Kristu Ježíši,
೪ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ ದೇವರನ್ನು ಕೊಂಡಾಡುತ್ತೇನೆ.
5 Že ve všem obohaceni jste v něm, v každém slovu a ve všelikém umění,
೫ಆತನು ಎಲ್ಲಾ ರೀತಿಯಲ್ಲಿಯೂ, ಎಲ್ಲಾ ನುಡಿಗಳಲ್ಲಿಯೂ, ಎಲ್ಲಾ ತಿಳಿವಳಿಕೆಯಲ್ಲಿಯೂ, ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.
6 Jakož svědectví Kristovo upevněno jest mezi vámi,
೬ಕ್ರಿಸ್ತನ ಕುರಿತಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿರುವ ಹಾಗೆಯೇ ಆತನು ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.
7 Takže nemáte žádného nedostatku ve všeliké milosti, očekávajíce zjevení Pána našeho Jezukrista,
೭ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮೀಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ,
8 Kterýžto i utvrdí vás až do konce bez úhony ke dni příští Pána našeho Jezukrista.
೮ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.
9 Věrnýť jest Bůh, skrze něhož povoláni jste k účastenství Syna jeho Jezukrista, Pána našeho.
೯ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.
10 Prosímť vás pak, bratří, skrze jméno Pána našeho Jezukrista, abyste jednostejně mluvili všickni a aby nebylo mezi vámi roztržek, ale buďte spojeni jednostejnou myslí a jednostejným smyslem.
೧೦ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.
11 Nebo oznámeno jest mi o vás, bratří moji, od některých z čeledi Chloe, že by mezi vámi byly různice.
೧೧ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಜಗಳಗಳುಂಟೆಂದು ನಿಮ್ಮ ಬಗ್ಗೆ ಖ್ಲೋಯೆಯ ಜನರಿಂದ ನನಗೆ ತಿಳಿದು ಬಂದಿತು.
12 Míním pak toto, že jeden každý z vás říká: Já jsem Pavlův, já Apollův, já Petrův, já pak Kristův.
೧೨ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
13 Zdali rozdělen jest Kristus? Zdali Pavel ukřižován jest za vás? Anebo zdali jste ve jménu Pavlovu pokřtěni byli?
೧೩ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ?
14 Děkuji Bohu, že jsem žádného z vás nekřtil, než Krispa a Gáia,
೧೪ನಿಮ್ಮಲ್ಲಿ ಕ್ರಿಸ್ಪನಿಗೂ ಮತ್ತು ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನ ಮಾಡಿಸಲಿಲ್ಲ.
15 Aby někdo neřekl, že jsem ve jméno své křtil.
೧೫ಆದ್ದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೆಂದು ಯಾರೂ ಹೇಳಲಾರರು. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರಮಾಡುತ್ತೇನೆ.
16 Křtilť jsem také i Štěpánovu čeled. Více nevím, abych koho jiného křtil.
೧೬ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದ್ದೇನೆ ಇದನ್ನು ಹೊರತು ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ತೋರುವುದಿಲ್ಲ.
17 Nebo neposlal mne Kristus křtíti, ale evangelium kázati, ne v moudrosti řeči, aby nebyl vyprázdněn kříž Kristův.
೧೭ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.
18 Nebo slovo kříže těm, kteříž hynou, bláznovstvím jest, ale nám, kteříž spasení dosahujeme, moc Boží jest.
೧೮ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ.
19 Nebo psáno jest: Zahladím moudrost moudrých, a opatrnost opatrných zavrhu.
೧೯“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.
20 Kde jest moudrý? A kde učený? A kde chytrák tohoto světa? Zdaliž Bůh neobrátil moudrosti tohoto světa v bláznovství? (aiōn )
೨೦ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ? (aiōn )
21 Nebo když v moudrosti Boží svět nepoznal skrze moudrost Boha, zalíbilo se Bohu skrze bláznové kázaní spasiti věřící,
೨೧ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.
22 Poněvadž i Židé zázraků žádají, i Řekové hledají moudrosti.
೨೨ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;
23 Myť pak kážeme Krista ukřižovaného, Židům zajisté pohoršení, a Řekům bláznovství,
೨೩ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.
24 Ale povolaným, i Židům i Řekům, Krista, Boží moc a Boží moudrost.
೨೪ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.
25 Nebo to bláznovství Boží jest moudřejší nežli lidé a mdloba Boží jest silnější než lidé.
೨೫ದೇವರ ಬುದ್ಧಿಹೀನತೆಯು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು, ದೇವರ ಬಲಹೀನತೆಯು ಮನುಷ್ಯರ ಬಲಕ್ಕಿಂತಲೂ ಶಕ್ತಿಯುಳ್ಳದ್ದಾಗಿದೆ.
26 Vidíte zajisté povolání vaše, bratří, že nemnozí moudří podle těla, nemnozí mocní, nemnozí urození;
೨೬ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ.
27 Ale což bláznivého jest u světa, to sobě vyvolil Bůh, aby zahanbil moudré, a to, což jest u světa mdlé, Bůh vyvolil, aby zahanbil silné.
೨೭ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.
28 A neurozené u světa a za nic položené vyvolil Bůh, ano hned, kteréž nejsou, aby ty věci, kteréž jsou, zkazil,
೨೮ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ.
29 Proto aby se nechlubilo před obličejem jeho žádné tělo.
೨೯ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
30 Vy pak jste z něho v Kristu Ježíši, kterýž učiněn jest nám moudrost od Boha, i spravedlnost, i posvěcení, i #vykoupení,
೩೦ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.
31 Aby se tak dálo, jakož jest napsáno: Kdo se chlubí, v Pánu se chlub.
೩೧“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ” ಎಂಬ ವೇದೋಕ್ತಿ ನೆರವೇರುವುದಕ್ಕಾಗಿಯೇ ಹೀಗಾಯಿತು.