< 1 Timoteovi 4 >
1 Duch pak světle praví, že v posledních časích odvrátí se někteří od víry, poslouchajíce duchů bludných a učení ďábelských,
೧ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.
2 V pokrytství lež mluvících, a cejchované majících svědomí své,
೨ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,
3 Zbraňujících ženiti se, přikazujících zdržovati se od pokrmů, kteréž Bůh stvořil k užívání s díkčiněním věřícím a těm, jenž poznali pravdu.
೩ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.
4 Nebo všeliké stvoření Boží dobré jest, a nic nemá zamítáno býti, což se s díků činěním přijímá.
೪ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ.
5 Posvěcuje se zajisté skrze slovo Boží a modlitbu.
೫ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ.
6 Toto předkládaje bratřím, budeš dobrý služebník Jezukristův, vykrmený slovy víry a pravého učení, kteréhož jsi následoval.
೬ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.
7 Světské pak a babské básně zavrz, ale cvič se v zbožnosti.
೭ಅಜ್ಜಿ ಕಥೆಗಳನ್ನೂ ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.
8 Nebo tělesné cvičení malého jest užitku, ale zbožnost ke všemu jest užitečná, a má i nynějšího i budoucího života zaslíbení.
೮ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.
9 Věrnáť jest tato řeč a hodná, aby všelijak oblíbena byla.
೯ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ.
10 Proto zajisté i pracujeme, i pohanění neseme, že naději máme v Bohu živém, kterýž jest spasitel všech lidí, a zvláště věřících.
೧೦ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.
11 Ty věci předkládej a uč.
೧೧ಈ ಸಂಗತಿಗಳನ್ನು ನೀನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.
12 Nižádný mladostí tvou nepohrdej, ale buď příkladem věrných v řeči, v lásce, v duchu, u víře, v čistotě.
೧೨ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.
13 Dokudž k tobě nepřijdu, buďiž pilen čítání, a napomínání, i učení.
೧೩ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು.
14 Nezanedbávej daru, kterýž jest v tobě, jenž jest dán skrze proroctví s vzkládáním rukou starších na tě.
೧೪ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.
15 O tom přemyšluj, v tom buď ustavičně, aby prospěch tvůj zjevný byl všechněm.
೧೫ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು.
16 Budiž sebe pilen i učení, a v tom trvej; nebo to čině, i samého sebe spasíš, i ty, kteříž tebe poslouchají.
೧೬ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.