< Skutky Apoštolů 28 >
1 A tak zachováni jsouce, teprv poznali, že ostrov ten sloul Melita.
೧ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ, ಅದು ಮೆಲೀತೆ ದ್ವೀಪವೆಂದು ತಿಳಿದುಬಂತು.
2 Lidé pak toho ostrova velikou přívětivost k nám ukázali. Nebo zapálivše hranici drev, přijali nás všecky, pro déšť, kterýž v tu chvíli byl, a pro zimu.
೨ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆಯು ಆಗಲೇ ಹೊಯ್ದು ಚಳಿಯಾಗುತ್ತಿದ್ದುದರಿಂದ, ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
3 A když Pavel sebral drahně roždí a kladl na oheň, ještěrka, utíkajíc před horkem, připjala se k ruce jeho.
೩ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ, ತಂದು ಬೆಂಕಿಯ ಮೇಲೆ ಹಾಕಲು, ಆ ಶಾಖಕ್ಕೆ ಒಂದು ಸರ್ಪವು ಹೊರಗೆ ಬಂದು, ಅವನ ಕೈಯನ್ನು ಬಿಗಿಯಾಗಿ ಹಿಡಿದುಕೊಂಡಿತು.
4 A když uzřeli lidé toho ostrovu, ano ještěrka visí u ruky jeho, řekli jedni k druhým: Jistě člověk tento jest vražedlník; neb ač z moře vyšel, však pomsta Boží nedá jemu živu býti.
೪ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.
5 Ale on střásl tu ještěrku do ohně, a nic se jemu zlého nestalo.
೫ಆದರೆ ಪೌಲನು ಆ ಸರ್ಪವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಅಪಾಯ ಉಂಟಾಗಲಿಲ್ಲ.
6 Oni pak očekávali, že oteče, aneb padna, pojednou umře. A když toho dlouho čekali a viděli, že se mu nic zlého nestalo, změnivše myšlení své, pravili, že jest on bůh.
೬ಅವರು; “ಇವನ ಮೈ ಈಗ ಊದಿಕೊಳ್ಳುತ್ತದೆ, ಇಲ್ಲವೆ ಇವನು ಫಕ್ಕನೆ ಸತ್ತುಬೀಳುತ್ತಾನೆ” ಎಂದು ಕಾದಿದ್ದರು. ಎಷ್ಟು ಹೊತ್ತು ಕಾದರು ಅವನಿಗೆ ಯಾವ ಹಾನಿಯೂ ಆಗಲಿಲ್ಲ. ಇದನ್ನು ಕಂಡ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿಕೊಂಡು “ಇವನೊಬ್ಬ ದೇವನೇ” ಇರಬೇಕು ಎಂದುಕೊಂಡರು.
7 Na těch pak místech měl popluží kníže toho ostrova, jménem Publius, kterýžto přijav nás k sobě, za tři dni přátelsky u sebe v hospodě choval.
೭ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಸಮೀಪದಲ್ಲಿ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.
8 I přihodilo se, že otec toho Publia ležel, maje zimnici a červenou nemoc. K němuž všed Pavel, a pomodliv se, vzložil na něj ruce a uzdravil jej.
೮ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು.
9 A když se to stalo, tedy i jiní, kteříž na ostrově tom nemocní byli, přistupovali, a byli uzdravováni.
೯ಇದಾದ, ನಂತರ ಆ ದ್ವೀಪದಲ್ಲಿದ್ದ ಉಳಿದ ರೋಗಿಗಳು, ಪೌಲನ ಬಳಿಗೆ ಬಂದು ಸ್ವಸ್ಥರಾದರು.
10 Ctili nás pak velice, a když jsme se měli pryč plaviti, nakladli nám na lodí toho, čehož potřebí bylo.
೧೦ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ, ನಾವು ಅಲ್ಲಿಂದ ನಮ್ಮ ಪಯಣ ಮುಂದುವರಿಸಿದಾಗ, ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು.
11 A po třech měsících plavili jsme se na bárce Alexandrinské, kteráž tu byla na tom ostrově přes zimu, majici za erb Kastora a Polluxa.
೧೧ಮೂರು ತಿಂಗಳಾದ ಮೇಲೆ ಅಲೆಕ್ಸಾಂದ್ರಿಯದಿಂದ ಬಂದು, ಆ ದ್ವೀಪದಲ್ಲಿ ಹಿಮಕಾಲವನ್ನು ಕಳೆಯಲು ತಂಗಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ ಇತ್ತು.
12 A když jsme přijeli do Syrakusis, zůstali jsme tu za tři dni.
೧೨ನಾವು ಸುರಕೂಸಿಗೆ ತಲುಪಿ ಅಲ್ಲಿ ಮೂರು ದಿನ ತಂಗಿದೆವು.
13 A odtud okolo plavíce se, přišli jsme do Regium; a po jednom dni, když vál vítr od poledne, druhý den přijeli jsme do Puteolos.
೧೩ಅಲ್ಲಿಂದ ಮುಂದುವರೆದು ರೇಗಿಯ ಪಟ್ಟಣಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣ ಗಾಳಿ ಬೀಸಿದ್ದರಿಂದ, ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು.
14 Kdežto nalezli jsme bratří, kteříž nás prosili, abychom pobyli u nich za sedm dní. A tak jsme šli k Římu.
೧೪ಅಲ್ಲಿ ಕ್ರೈಸ್ತ ಸಹೋದರರನ್ನು ಕಂಡೆವು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿನ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು.
15 Odkudž, když o nás uslyšeli bratří, vyšli proti nám až na rynk Appiův a ke Třem krčmám. Kteréžto uzřev Pavel, poděkoval Bohu a počal býti dobré mysli.
೧೫ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.
16 A když jsme přišli do Říma, setník dal vězně v moc hejtmanu vojska, ale Pavlovi dopuštěno, aby sám bydlil s žoldnéřem, kterýž ho ostříhal.
೧೬ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.
17 I stalo se po třech dnech, svolal Pavel muže přední z Židů. A když se sešli, řekl k nim: Muži bratří, já nic neučiniv proti lidu ani proti obyčejům otcovským, jat jsa, z Jeruzaléma vydán jsem v ruce Římanům,
೧೭ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.
18 Kteříž vyslyševše mne, chtěli mne propustiti, protože žádné viny hodné smrti na mně nebylo.
೧೮ಅವರು ನನ್ನನ್ನು ವಿಚಾರಣೆಮಾಡಿ, ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು.
19 Ale když Židé tomu odpírali, přinucen jsem odvolati se k císaři, ne jako bych měl co národ svůj žalovati.
೧೯ಅದಕ್ಕೆ ಯೆಹೂದ್ಯರು ವಿರೋಧಿಸಿದ್ದರಿಂದ, ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂದಿತು. ನನ್ನ ಸ್ವಂತ ದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ.
20 A protož z té příčiny povolal jsem vás, žádostiv jsa viděti vás a s vámi promluviti; nebo pro naději lidu Izraelského řetězem tímto svázán jsem.
೨೦ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.
21 A oni řekli jemu: Myť jsme žádného psaní neměli o tobě z Židovstva, aniž kdo z bratří přijda, vypravoval nám, aneb mluvil co zlého o tobě.
೨೧ಅದಕ್ಕೆ ಅವರು ಅವನಿಗೆ; “ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ.
22 Ale žádámeť od tebe slyšeti, jak smyslíš; nebo víme o té sektě, že se jí všudy odpírá.
೨೨ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.
23 A když jemu uložili den, sešlo se jich mnoho do hospody k němu, jimžto s osvědčováním vypravoval o království Božím, slouže jim k víře o Ježíšovi z Zákona Mojžíšova a Proroků, od jitra až do večera.
೨೩ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.
24 A někteří uvěřili tomu, což Pavel vypravoval, někteří pak nevěřili.
೨೪ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು.
25 A tak nejsouce mezi sebou svorní, rozešli se, k nimžto promluvil Pavel toto jedno slovo: Jistě žeť jest dobře Duch svatý skrze proroka Izaiáše mluvil k otcům našim,
೨೫ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ
26 Řka: Jdi k lidu tomuto a rciž jim: Sluchem slyšeti budete, a nesrozumíte, a hledíce hleděti budete, a neuzříte.
೨೬ನಿಮ್ಮ ಪೂರ್ವಿಕರಿಗೆ ವಿವರವಾಗಿ ಹೇಳಿದ್ದೇನೆಂದರೆ; “‘ನೀನು ಈ ಜನರ ಬಳಿಗೆ ಹೋಗಿ ಅವರಿಗೆ; ನೀವು ಕಿವಿಯಿದ್ದು ಕೇಳಿಕೊಂಡರೂ ತಿಳಿದುಕೊಳ್ಳುವುದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವುದೇ ಇಲ್ಲ, ಎಂಬುದಾಗಿ ಹೇಳು.
27 Nebo zhrublo srdce lidu tohoto, a ušima těžce slyšeli, a oči své zamhouřili, aby snad neviděli očima, a ušima neslyšeli, a srdcem nerozuměli, a neobrátili se, abych jich neuzdravil.
೨೭ಏಕೆಂದರೆ, ಈ ಜನರ ಹೃದಯವು ಕಲ್ಲಾಗಿದೆ; ಇವರ ಕಿವಿ ಕಿವುಡಾಗಿದೆ; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಹೀಗೆ ಮಾಡಿಕೊಂಡಿದ್ದಾರೆ’ ಎಂಬುದೇ.
28 Budiž vám tedy známo, že jest pohanům posláno toto spasení Boží, a oniť slyšeti budou.
೨೮“ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.
29 A když on to propověděl, odešli Židé, majíce mezi sebou mnohé hádky.
೨೯ಅವನು ಈ ಮಾತನ್ನು ಹೇಳಿದ ಮೇಲೆ ಅವರು ಹೊರಟುಹೋದರು.
30 Pavel pak trval za celé dvě létě v hospodě své, a přijímal všecky, kteříž přicházeli k němu,
೩೦ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು.
31 Káže o království Božím a uče těm věcem, kteréž jsou o Pánu Ježíši Kristu, se vší doufanlivostí bez překážky.
೩೧ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.