< Ámos 3 >

1 Slyšte slovo to, kteréž mluví Hospodin proti vám, synové Izraelští, proti vší té rodině, kterouž jsem vyvedl z země Egyptské, řka:
ಇಸ್ರಾಯೇಲರೇ, ಯೆಹೋವ ದೇವರು ನಿಮಗೆ ವಿರೋಧವಾಗಿ ಹೇಳುವ ವಾಕ್ಯವನ್ನು ಕೇಳಿರಿ. ನಾನು ಈಜಿಪ್ಟ್ ದೇಶದೊಳಗಿಂದ ಕರೆದುತಂದ ಸಮಸ್ತ ಕುಟುಂಬಕ್ಕೆ ಹೇಳುವುದೇನೆಂದರೆ:
2 Toliko vás samy poznal jsem ze všeliké rodiny země, protož trestati vás budu ze všech nepravostí vašich.
“ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ಆರಿಸಿಕೊಂಡಿದ್ದೇನೆ. ಆದ್ದರಿಂದ ನಾನು ನಿಮ್ಮ ಎಲ್ಲಾ ಪಾಪಗಳಿಗಾಗಿ ಶಿಕ್ಷಿಸುತ್ತೇನೆ.”
3 Zdaliž půjdou dva spolu, leč by se snesli?
ಒಪ್ಪಂದ ಮಾಡಿಕೊಳ್ಳದ ಹೊರತು, ಇಬ್ಬರು ಜೊತೆಯಾಗಿ ನಡೆಯಲು ಸಾಧ್ಯವೋ?
4 Zdaliž zařve lev v lese, když by nebylo žádné loupeže? Vydá-liž lvíček hlas svůj z peleše své, kdyby lapiti neměl?
ಬೇಟೆ ಇಲ್ಲದಿದ್ದರೆ, ಅಡವಿಯಲ್ಲಿ ಸಿಂಹವು ಗರ್ಜಿಸುವುದೋ? ಏನಾದರೂ ಹಿಡಿಯದಿದ್ದರೆ, ಗುಹೆಯಲ್ಲಿರುವ ಎಳೆಯ ಸಿಂಹವು ಅರಚುವುದೋ?
5 Padne-liž ptáče do osídla na zem, když by žádné léčky nebylo? Bude-liž zdviženo osídlo z země, když by nic neuvázlo?
ಬೋನು ಇಲ್ಲದಿದ್ದರೆ ಪಕ್ಷಿಯು ಭೂಮಿಯ ಮೇಲೆ ಉರುಲಿನಲ್ಲಿ ಬೀಳುವುದೇ? ಏನೂ ಸಿಕ್ಕಿಕೊಳ್ಳದಿದ್ದರೆ, ಅದನ್ನು ಭೂಮಿಯಿಂದ ಯಾರಾದರೂ ತೆಗೆಯುವರೇ?
6 Zdaliž když se troubí trubou v městě, lid s strachem se nezbíhá? Zdaž když se má státi v městě co zlého, Hospodin toho známa nečiní?
ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?
7 Nečiníť zajisté Panovník Hospodin ničeho, leč by zjevil tajemství své služebníkům svým prorokům.
ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.
8 Lev řve, kdož by se nebál? Panovník Hospodin velí, kdož by neprorokoval?
ಸಿಂಹವು ಗರ್ಜಿಸಿದರೆ ಭಯಪಡದೆ ಇರುವವರು ಯಾರು? ಸಾರ್ವಭೌಮ ಯೆಹೋವ ದೇವರು ನುಡಿದಿದ್ದಾರೆ, ಅವರ ನುಡಿಯನ್ನು ಪ್ರವಾದಿಸದವರು ಯಾರು?
9 Rozhlaste po palácích v Azotu, a po palácích v zemi Egyptské, a rcete: Sbeřte se na hory Samaří, a vizte znepokojení veliká u prostřed něho a nátisk trpící v něm,
ಅಷ್ಡೋದಿನ ಕೋಟೆಗಳಲ್ಲಿ ಮತ್ತು ಈಜಿಪ್ಟ್ ದೇಶದ ಕೋಟೆಗಳಲ್ಲಿ ಹೀಗೆ ಸಾರಿ ಹೇಳಿರಿ: “ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು, ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರೊಳಗಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.”
10 A že neumějí dělati upřímě, dí Hospodin. Poklady skládají z nátisku a loupeže na palácích svých.
“ತಮ್ಮ ಕೋಟೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರಿಗೆ, ನ್ಯಾಯ ನೀತಿಯನ್ನು ಮಾಡುವುದಕ್ಕೆ ತಿಳಿಯುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
11 Protož takto praví Panovník Hospodin: Aj, nepřítel, a to na zemi tuto vůkol, a tenť odejme od tebe sílu tvou, i budou rozchvátáni palácové tvoji.
ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ವಿರೋಧಿಯು ದೇಶದ ಸುತ್ತಲೂ ಇರುವನು. ನಿನ್ನ ಬಲವನ್ನು ತಗ್ಗಿಸುವನು. ನಿನ್ನ ಅರಮನೆಗಳು ಸೂರೆಯಾಗುವುವು.”
12 Takto praví Hospodin: Jako když vytrhne pastýř z úst lva dva hnáty aneb kus ucha, tak vytrženi budou synové Izraelští, sedící v Samaří lhostejně na postelích, a na ložcích rozkošných.
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಹೇಗೆ ಕುರುಬನು ಸಿಂಹದ ಬಾಯಿಯಿಂದ ಎರಡು ಕಾಲಿನ ಎಲಬುಗಳನ್ನು ಅಥವಾ ಕಿವಿಯ ಒಂದು ತುಂಡನ್ನು ರಕ್ಷಿಸಲು ಪ್ರಯತ್ನಿಸುತ್ತಾನೋ ಹಾಗೆಯೇ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲರು ಹಾಸಿಗೆಯ ತಲೆ ಮತ್ತು ಮಂಚದ ಬಟ್ಟೆಯ ತುಂಡುಗಳೊಂದಿಗೆ ಸಂರಕ್ಷಣೆ ಹೊಂದುತ್ತಾರೆ.”
13 Slyšte a osvědčte v domě Jákobově, dí Panovník Hospodin, Bůh zástupů,
ಸರ್ವಶಕ್ತ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: “ನೀವು ಕೇಳಿ, ಯಾಕೋಬಿನ ಮನೆತನದವರಿಗೆ ವಿರುದ್ಧವಾಗಿ ಸಾಕ್ಷಿ ಕೊಡಿರಿ.”
14 Že v ten den, když Izraele trestati budu pro přestoupení jeho, navštívím také oltáře v Bethel, a odťati budou rohové oltáře, tak že spadnou na zem.
“ನಾನು ಇಸ್ರಾಯೇಲಿನ ಪಾಪಗಳನ್ನು ವಿಚಾರಿಸುವ ದಿವಸದಲ್ಲಿ, ಬೇತೇಲಿನ ಬಲಿಪೀಠಗಳನ್ನು ನಾಶಮಾಡುವೆನು. ಬಲಿಪೀಠದ ಕೊಂಬುಗಳು ಕಡಿಯಲಾಗಿ, ನೆಲಕ್ಕೆ ಉರುಳುವುವು.
15 A udeřím domem zimním o dům letní, i zahynou domové z kostí slonových, a konec vezmou domové velicí, praví Hospodin.
ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತ ಮಂದಿರಗಳು ನಾಶವಾಗುವುವು. ದೊಡ್ಡ ಮನೆಗಳು ಕೊನೆಗಾಣುವುವು,” ಎಂದು ಯೆಹೋವ ದೇವರು ಹೇಳುತ್ತಾರೆ.

< Ámos 3 >