< 5 Mojžišova 27 >
1 I přikázal Mojžíš a starší Izraelští lidu, řkouce: Ostříhejž každého přikázaní, kteréž já přikazuji vám dnes.
೧ಮೋಶೆ ಮತ್ತು ಇಸ್ರಾಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ನಿಮಗೆ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.
2 A když přejdeš přes Jordán do země, kterouž Hospodin Bůh tvůj dává tobě, vyzdvihneš sobě kameny veliké, a obvržeš je vápnem.
೨ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.
3 A napíšeš na nich všecka slova zákona tohoto, když přejdeš, abys všel do země, kterouž Hospodin Bůh tvůj dává tobě, do země oplývající mlékem a strdí, jakož jest mluvil Hospodin Bůh otců tvých tobě.
೩ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.
4 Když tedy přejdeš Jordán a vyzdvihneš ty kameny, kteréž já přikazuji vám dnes, na hoře Hébal, a obvržeš je vápnem,
೪ನೀವು ಯೊರ್ದನ್ ನದಿಯನ್ನು ದಾಟಿದ ನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.
5 A vzděláš tam oltář Hospodinu Bohu svému: oltář z kamenů, jichž nebudeš tesati železem,
೫“ಅಲ್ಲಿ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಲ್ಲುಗಳಿಂದ ಯಜ್ಞವೇದಿಯನ್ನು ಕಟ್ಟಿಸಬೇಕು.
6 Z kamení celého vzděláš oltář Hospodinu Bohu svému, abys na něm obětoval oběti zápalné Hospodinu Bohu svému.
೬ಉಳಿ ಮುಂತಾದದ್ದನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯನ್ನು ಕಟ್ಟಿಸಬೇಕು.
7 Obětovati budeš i oběti pokojné, a jísti tu a veseliti se před Hospodinem Bohem svým.
೭ಅಲ್ಲಿ ಸರ್ವಾಂಗಹೋಮಗಳನ್ನೂ ಮತ್ತು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಸಹಭೋಜನಮಾಡಿ, ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
8 Napíšeš pak na těch kameních všecka slova zákona toho dobře a zřetelně.
೮ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಸ್ಪಷ್ಟವಾಗಿ ಬರೆಯಬೇಕು” ಎಂದು ಆಜ್ಞಾಪಿಸಿದನು.
9 I mluvil Mojžíš a kněží Levítští ke všemu Izraelovi, řkouce: Pozoruj a slyš, Izraeli, dnes učiněn jsi lidem Hospodina Boha svého.
೯ಮೋಶೆ, ಯಾಜಕರು ಮತ್ತು ಲೇವಿಯರೊಡನೆ ಇಸ್ರಾಯೇಲರೆಲ್ಲರಿಗೆ, “ಇಸ್ರಾಯೇಲರೇ, ನಿಶ್ಯಬ್ದವಾಗಿದ್ದು ಕೇಳಿರಿ, ನೀವು ಈಗ ನಿಮ್ಮ ದೇವರಾದ ಯೆಹೋವನ ಜನರಾಗಿದ್ದೀರಷ್ಟೆ.
10 Protož poslouchej hlasu Hospodina Boha svého, a zachovávej přikázaní jeho i ustanovení jeho, kteráž já tobě dnes přikazuji.
೧೦ಆದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು” ಎಂದು ಹೇಳಿದನು.
11 I přikázal Mojžíš v ten den lidu, řka:
೧೧ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ,
12 Tito stanou, aby dobrořečili lidu na hoře Garizim, když byste přešli Jordán: Simeon, Léví, Juda, Izachar, Jozef a Beniamin.
೧೨“ನೀವು ಯೊರ್ದನ್ ನದಿಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನ್ ಎಂಬ ಈ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.
13 Tito pak stanou, aby zlořečili na hoře Hébal: Ruben, Gád, Asser, Zabulon, Dan a Neftalím.
೧೩ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಎಂಬ ಈ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.
14 I budou osvědčovati Levítové, a řeknou ke všechněm mužům Izraelským vysokým hlasem:
೧೪“ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲರೆಲ್ಲರಿಗೂ,
15 Zlořečený člověk, kterýž by udělal rytinu aneb věc slitou, ohavnost Hospodinu, dílo rukou řemeslníka, by ji pak i do skrýše odložil. I odpoví všecken lid a řekne: Amen.
೧೫‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
16 Zlořečený, kdož sobě zlehčuje otce svého a matku svou; i řekne všecken lid: Amen.
೧೬“ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
17 Zlořečený, kdož přenáší mezník bližního svého; i řekne všecken lid: Amen.
೧೭“ಅವರು, ಮತ್ತೊಬ್ಬನ ಗಡಿಮೇರೆಯನ್ನು ಮೀರಿಬಂದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು.
18 Zlořečený, kdož zavodí slepého, aby bloudil po cestě; i řekne všecken lid: Amen.
೧೮“ಅವರು, ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು.
19 Zlořečený, kdož převrací spravedlnost příchozího, sirotka a vdovy; a odpoví všecken lid: Amen.
೧೯“ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
20 Zlořečený, kdož by obýval s manželkou otce svého, nebo odkryl podolek otce svého; i řekne všecken lid: Amen.
೨೦“ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
21 Zlořečený, kdož by obýval s kterýmkoli hovadem; i dí všecken lid: Amen.
೨೧“ಅವರು, ಪಶುಸಂಗಮ ಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
22 Zlořečený, kdož by obýval s sestrou svou, dcerou otce svého, aneb dcerou matky své; i řekne všecken lid: Amen.
೨೨“ಅವರು, ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
23 Zlořečený, kdož by obýval s svegruší svou; i odpoví všecken lid: Amen.
೨೩“ಅವರು, ಅತ್ತೆಯನ್ನು ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
24 Zlořečený, kdož by zbil bližního svého tajně; i řekne všecken lid: Amen.
೨೪“ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
25 Zlořečený, kdož by vzal dary, aby zabil člověka nevinného; i dí všecken lid: Amen.
೨೫“ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು.
26 Zlořečený, kdož by nezůstal v řečech zákona tohoto a nečinil jich; a řekne všecken lid: Amen.
೨೬“ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.