< Ezechiel 7 >
1 Potom stalo se slovo Hospodinovo ke mně, řkoucí:
೧ಇದಲ್ಲದೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
2 Slyš, synu člověčí: Takto praví Panovník Hospodin o zemi Izraelské: Ach, skončení, přišlo skončení její na čtyři strany země.
೨“ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’
3 Jižtě skončení nastalo tobě; nebo vypustím hněv svůj na tě, a budu tě souditi podlé cest tvých, a uvrhu na tě všecky ohavnosti tvé.
೩ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು.
4 Neodpustí zajisté oko mé tobě, aniž se slituji, ale cesty tvé na tebe uvrhu, a ohavnosti tvé u prostřed tebe budou. I zvíte, že já jsem Hospodin.
೪ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”
5 Takto praví Panovník Hospodin: Bída jedna, aj hle, přichází bída.
೫ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು!
6 Skončení přichází, přichází skončení, procítil na tě, aj, přicházíť.
೬ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು!
7 Přicházíť to jitro na tebe, obyvateli země, přicházíť ten čas, přibližuje se ten den hřmotu, a ne hlas rozléhající se po horách.
೭ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ.
8 Již tudíž vyliji prchlivost svou na tě, a docela vypustím hněv svůj na tebe, a budu tě souditi podlé cest tvých, a uvrhu na tě všecky ohavnosti tvé.
೮ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.
9 Neodpustíť zajisté oko mé, aniž se slituji, ale podlé cest tvých zaplatím tobě, a budou ohavnosti tvé u prostřed tebe. A tak zvíte, že já jsem Hospodin, ten, kterýž biji.
೯ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.
10 Aj, teď jest ten den, aj, přicházeje, přišlo to jitro, zkvetl prut, vypučila se z něho pýcha,
೧೦“ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.
11 Ukrutnost vzrostla v prut bezbožnosti. Nezůstaneť z nich nic, ani z množství jejich, ani z hluku jejich, aniž bude naříkáno nad nimi.
೧೧ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ.
12 Přicházíť ten čas, blízko jest ten den. Kdo koupí, nebude se veseliti, a kdo prodá, nic toho nebude litovati; nebo prchlivost přijde na všecko množství její.
೧೨ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
13 Ten zajisté, kdož prodal, k věci prodané nepůjde nazpět, by pak ještě byl mezi živými život jejich, poněvadž vidění na všecko množství její nenavrátí se, a žádný v nepravosti života svého nezmocní se.
೧೩ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ. ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ.
14 Troubiti budou v troubu, a připraví všecko, ale nebude žádného, kdo by šel k boji; nebo prchlivost má oboří se na všecko množství její.
೧೪ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
15 Meč bude vně, mor pak a hlad doma; kdo bude na poli, mečem zabit bude, toho pak, kdož bude v městě, hlad a mor zahubí.
೧೫ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.
16 Kteříž pak z nich utekou, ti na horách, jako holubice v údolí, všickni lkáti budou, jeden každý pro nepravost svou.
೧೬ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.
17 Všeliké ruce klesnou, a všeliká kolena rozplynou se jako voda.
೧೭ಎಲ್ಲರ ಕೈಗಳು ಜೋಲುಬಿದ್ದಿರುವುವು, ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು.
18 I přepáší se žíněmi, a hrůza je přikryje, a na všeliké tváři bude stud, a na všech hlavách jejich lysina.
೧೮ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.
19 Stříbro své po ulicích rozházejí, a zlato jejich bude jako nečistota; stříbro jejich a zlato jejich nebude jich moci vysvoboditi v den prchlivosti Hospodinovy. Nenasytí se, a střev svých nenaplní, proto že nepravost jejich jest jim k urážce,
೧೯ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.
20 A že v slávě okrasy své, v té, kterouž k důstojnosti postavil Bůh, obrazu ohavností svých a mrzkostí svých nadělali. Protož obrátil jsem jim ji v nečistotu.
೨೦ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.
21 Nebo vydám ji v ruku cizozemců k rozchvátání, a bezbožným na zemi za loupež, kteříž poškvrní jí.
೨೧ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು.
22 Odvrátím též tvář svou od nich, i poškvrní svatyně mé, a vejdou do ní, boříce a poškvrňujíce jí.
೨೨ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು.
23 Udělej řetěz, nebo země plná jest soudů ukrutných, a město plné jest nátisku.
೨೩ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ.
24 Protož přivedu nejhorší z pohanů, aby dědičně vládli domy jejich; i učiním přítrž pýše silných, a poškvrněny budou, kteříž jich posvěcují.
೨೪ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.
25 Zkažení přišlo, protož hledati budou pokoje, ale žádného nebude.
೨೫ಸಂಕಟ ಸಂಭವಿಸುವುದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕುವುದಿಲ್ಲ.
26 Bída za bídou přijde, a novina bude za novinou, i budou hledati vidění od proroka, ale zákon zahyne od kněze, a rada od starců.
೨೬ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.
27 Král ustavičně kvíliti bude, a kníže obleče se v smutek, a ruce lidu v zemi předěšeny budou. Podlé cesty jejich učiním jim, a podlé soudů jejich souditi je budu. I zvědí, že já jsem Hospodin.
೨೭ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”