< Jeremiáš 20 >
1 Tedy slyšev Paschur syn Immerův, kněz, kterýž byl přední správce v domě Hospodinově, Jeremiáše prorokujícího o těch věcech,
೧ಯೆರೆಮೀಯನು ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು.
2 Ubil Paschur Jeremiáše proroka, a dal jej do vězení v bráně Beniaminově hořejší, kteráž byla při domě Hospodinově.
೨ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.
3 Stalo se pak nazejtří, když vyvedl Paschur Jeremiáše z vězení, že řekl jemu Jeremiáš: Nenazval Hospodin jména tvého Paschur, ale Magor missabib.
೩ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು, “ಯೆಹೋವನು ನಿನ್ನ ಹೆಸರನ್ನು ಪಷ್ಹೂರ್ ಎಂದು ಹೇಳದೆ ಮಾಗೋರ್ ಮಿಸ್ಸಾಬೀಬ್ ಎಂದು ಹೇಳಿದ್ದಾನೆ.
4 Nebo takto praví Hospodin: Aj, já pustím na tebe strach, na tebe i na všecky přátely tvé, kteříž padnou od meče nepřátel svých, načež oči tvé hleděti budou, když všecken lid Judský vydám v ruku krále Babylonského, kterýž zavede je do Babylona, a mečem je pobije.
೪ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.
5 Vydám i všelijaké bohatství města tohoto, a všecko úsilé jeho, i všelijakou věc drahou jeho, i všecky poklady králů Judských vydám v ruku nepřátel jejich, a rozchvátají je, i poberou je, a dovezou je do Babylona.
೫ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ, ಆದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.
6 Ty pak Paschur i všickni, kteříž bydlí v domě tvém, půjdete do zajetí, a do Babylona se dostaneš, a tam umřeš, i tam pochován budeš ty i všickni milující tebe, jimž jsi prorokoval lživě.
೬ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ. ನೀನೂ ಮತ್ತು ನಿನ್ನ ಮಿಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬಿಲೋನಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ” ಎಂದು ನುಡಿದಿದ್ದಾನೆ.
7 Namlouvals mne, Hospodine, a dalť jsem se přemluviti; silnějšís byl nežli já, protož zmocnils se mne. Jsem v posměchu každý den, každý se mi posmívá.
೭ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.
8 Nebo jakž jsem začal mluviti, úpím, pro ukrutenství a zhoubu křičím; slovo zajisté Hospodinovo jest mi ku potupě a ku posměchu každého dne.
೮ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ. ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ.
9 I řekl jsem: Nebuduť ho připomínati, ani mluviti více ve jménu jeho. Ale jest v srdci mém jako oheň hořící, zavřený v kostech mých, jehož snažuje se zdržeti, však nemohu,
೯“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.
10 Ačkoli slýchám utrhání mnohých, i Magor missabiba, říkajících: Povězte něco na něj, a oznámíme to králi. Všickni, kteříž by měli býti přátelé moji, číhají na poklesnutí mé, říkajíce: Snad někde podveden bude, a zmocníme se ho, a pomstíme se nad ním.
೧೦“ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.
11 Ale Hospodin jest se mnou jakožto rek udatný, protož ti, kteříž mne stihají, zurážejí se, a neodolají; styděti se budou náramně, nebo se jim šťastně nezvede, aniž potupa věčná v zapomenutí dána bude.
೧೧ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.
12 Protož ó Hospodine zástupů, kterýž zkušuješ spravedlivého, kterýž spatřuješ ledví a srdce, nechť se podívám na pomstu tvou nad nimi, tobě zajisté zjevil jsem při svou.
೧೨ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆಮಾಡಿದ್ದೇನಷ್ಟೆ.
13 Zpívejte Hospodinu, chvalte Hospodina, že vytrhl duši nuzného z ruky nešlechetných.
೧೩ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕೆಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ.
14 Zlořečený ten den, v němžto zplozen jsem, den, v němž porodila mne matka má, ať není požehnaný.
೧೪ನಾನು ಹುಟ್ಟಿದ ದಿನ ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಅಶುಭವೆನ್ನಿಸಿಕೊಳ್ಳಲಿ!
15 Zlořečený ten muž, kterýž zvěstoval otci mému, chtěje zvláštně obradovati jej, řka: Narodiloť se dítě pohlaví mužského.
೧೫“ನಿನಗೆ ಗಂಡುಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಕೇವಲ ಆನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ!
16 A nechť jest ten muž podobný městům, kteráž podvrátil Hospodin, a neželel; nebo slyšel křik v jitře, a provyskování v čas polední.
೧೬ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಮುಂಜಾನೆಯಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!
17 Ó že mne neusmrtil od života, ješto by mi matka má byla hrobem mým, a život její věčně těhotný.
೧೭ಅವನು ನನ್ನನ್ನು ಗರ್ಭದಲ್ಲೇ ಕೊಲ್ಲಲಿಲ್ಲವಲ್ಲಾ; ಹೀಗೆ ಮಾಡಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು, ಆಕೆಯ ಗರ್ಭವು ಯಾವಾಗಲೂ ಬಸುರಾಗಿಯೇ ಇರುತ್ತಿತ್ತು.
18 Proč jsem jen z života vyšel, abych okoušel těžkosti a zámutku, a aby stráveni byli v pohanění dnové moji?
೧೮ನಾನು ಶ್ರಮದುಃಖಗಳನ್ನು ನೋಡುವುದಕ್ಕೂ, ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವುದಕ್ಕೂ ಗರ್ಭದಿಂದ ಏಕೆ ಹೊರಟು ಬಂದೆನು?