< Jeremiáš 43 >
1 Stalo se pak, když přestal Jeremiáš mluviti ke všemu lidu všech slov Hospodina Boha jejich, s nimiž poslal jej Hospodin Bůh jejich k nim, všech, pravím, slov těch,
೧ಯೆರೆಮೀಯನು ಸಮಸ್ತ ಜನರನ್ನು ಸಂಬೋಧಿಸಿ ಅವರ ದೇವರಾದ ಯೆಹೋವನು ತನ್ನ ಮೂಲಕ ಅವರಿಗೆ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ತಿಳಿಸಿದನು.
2 Že řekl Azariáš syn Hosaiášův, a Jochanan syn Kareachův, i všickni muži ti pyšní, řkouce Jeremiášovi: Lež ty mluvíš, neposlalť tebe Hospodin Bůh náš, abys řekl: Nevcházejte do Egypta, abyste tam byli pohostinu.
೨ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, “ನಿನ್ನ ಮಾತು ಸುಳ್ಳು, ‘ಐಗುಪ್ತಕ್ಕೆ ಹೋಗಿ ವಾಸಮಾಡಬಾರದು’ ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ.
3 Ale Báruch syn Neriášův ponouká tě proti nám, aby vydal nás v ruku Kaldejských k usmrcení nás, aneb zajetí nás do Babylona.
೩ಕಸ್ದೀಯರು ನಮ್ಮನ್ನು ಕೊಲ್ಲುವುದಕ್ಕೋ, ಬಾಬಿಲೋನಿಗೆ ಸೆರೆ ಒಯ್ಯುವುದಕ್ಕೋ ನಮ್ಮನ್ನು ಅವರ ಕೈಗೆ ಸಿಕ್ಕಿಸಬೇಕೆಂದು ನೇರೀಯನ ಮಗನಾದ ಬಾರೂಕನೇ ನಿನ್ನನ್ನು ನಮ್ಮ ಮೇಲೆ ನೂಕಿದ್ದಾನೆ” ಎಂದು ಹೇಳಿದರು.
4 I neuposlechl Jochanan syn Kareachův, i všecka knížata vojsk, též i všecken lid hlasu Hospodinova, aby zůstal v zemi Judské.
೪ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ, ಸಮಸ್ತ ಸೇನಾಧಿಪತಿಗಳೂ ಮತ್ತು ಸಕಲಜನರೂ ಕೇಳದೆಹೋದರು.
5 Ale Jochanan syn Kareachův, a všecka knížata vojsk vzali všecken ostatek Judských, kteříž se byli navrátili ze všech národů, kamž byli rozehnáni, k obývání v zemi Judské,
೫ಆಗ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದದ ಉಳಿದ ಜನರು, ಪ್ರವಾದಿಯಾದ ಯೆರೆಮೀಯನು,
6 Muže i ženy, též dítky a dcery královské, i všelikou duši, kterýchž Nebuzardan, hejtman nad žoldnéři, s Godoliášem synem Achikamovým, syna Safanova, zanechal, i s Jeremiášem prorokem a Báruchem synem Neriášovým,
೬ನೇರೀಯನ ಮಗನಾದ ಬಾರೂಕನು, ರಾಜಕುಮಾರ್ತೆಯರು ಅಂತು ಗಂಡಸರು, ಹೆಂಗಸರು, ಮಕ್ಕಳು,
7 A šli do země Egyptské, (nebo neuposlechli hlasu Hospodinova), a přišli až do Tachpanches.
೭ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ, ಸಕಲ ಸೇನಾಧಿಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ.
8 Stalo se pak slovo Hospodinovo k Jeremiášovi v Tachpanches, řkoucí:
೮ಯೆರೆಮೀಯನು ತಹಪನೇಸಿನಲ್ಲಿರುವಾಗ ಯೆಹೋವನು ಈ ವಾಕ್ಯವನ್ನು ಅವನಿಗೆ ದಯಪಾಲಿಸಿದನು.
9 Nabeř do ruky své kamení velikého, a schovej je v hlině v cihelni, kteráž jest u brány domu Faraonova v Tachpanches, před očima mužů Judských.
೯ಆತನು, “ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿ ಬಿಟ್ಟು ಅವರಿಗೆ ಹೀಗೆ ಹೇಳು,
10 A rci jim: Takto praví Hospodin zástupů, Bůh Izraelský: Aj, já pošli, a vezmu Nabuchodonozora krále Babylonského, služebníka svého, a postavím stolici jeho na tomto kamení, kteréž jsem schoval, i rozbije majestát svůj na něm.
೧೦‘ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಬಾಬೆಲಿನ ಅರಸನೂ, ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸುವನು.
11 Nebo přitáhne a popléní zemi Egyptskou: Kteříž k smrti, k smrti, a kteříž k zajetí, do zajetí, a kteříž pod meč,
೧೧ಅವನು ಬಂದು ಐಗುಪ್ತ ದೇಶವನ್ನು ಹೊಡೆಯುವನು. ಮರಣಕ್ಕೆ ನೇಮಕವಾದವರು ಮರಣಕ್ಕೆ, ಸೆರೆಗೆ ನೇಮಕವಾದವರು ಸೆರೆಗೆ, ಖಡ್ಗಕ್ಕೆ ನೇಮಕವಾದವರು ಖಡ್ಗಕ್ಕೆ ಗುರಿಯಾಗುವರು.
12 A zanítím oheň v domích bohů Egyptských, aby je popálil, a zajal je. A přioděje se zemí Egyptskou, tak jako se odívá pastýř rouchem svým, a vyjde odtud s pokojem,
೧೨ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತ ದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.
13 Když poláme sochy Betsemes, kteréž jest v zemi Egyptské, a domy bohů Egyptských popálí ohněm.
೧೩ಐಗುಪ್ತ ದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ, ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.’”