< Jan 16 >
1 Toto mluvil jsem vám, abyste se nezhoršili.
೧“ನೀವು ನಂಬಿಕೆಯಿಂದ ಎಡವಿ ಬಿದ್ದು ಹೋಗಬಾರದೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.
2 Vypovědíť vás ze škol, ano přijdeť čas, že všeliký, kdož vás mordovati bude, domnívati se bude, že tím Bohu slouží.
೨ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.
3 A toť učiní vám proto, že nepoznali Otce ani mne.
೩ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.
4 Ale toto mluvil jsem vám, abyste, když přijde ten čas, rozpomenuli se na to, že jsem já to předpověděl vám. Tohoť jsem vám s počátku nemluvil, neb jsem byl s vámi.
೪ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.
5 Nyní pak jdu k tomu, kterýž mne poslal, a žádný z vás neptá se mne: Kam jdeš?
೫“ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ.
6 Ale že jsem vám tyto věci mluvil, zámutek naplnil srdce vaše.
೬ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.
7 Já pak pravdu pravím vám, že jest vám užitečné, abych já odšel. Nebo neodejdu-liť, Utěšitel nepřijde k vám; a pakliť odejdu, pošli ho k vám.
೭ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.
8 A onť přijda, obviňovati bude svět z hříchu, a z spravedlnosti, a z soudu.
೮ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.
9 Z hříchu zajisté, že nevěří ve mne;
೯ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ
10 A z spravedlnosti, že jdu k Otci, a již více neuzříte mne;
೧೦ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದೆ ಇರುವುದರಿಂದ ನೀತಿಯ ಕುರಿತಾಗಿಯೂ,
11 Z soudu pak, že Kníže tohoto světa již jest odsouzeno.
೧೧ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.
12 Ještěť bych měl mnoho mluviti vám, ale nemůžete snésti nyní.
೧೨“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ.
13 Ale když přijde ten Duch pravdy, uvedeť vás ve všelikou pravdu. Nebo nebude mluviti sám od sebe, ale cožkoli uslyší, toť mluviti bude; ano i budoucí věci zvěstovati bude vám.
೧೩ಆದರೆಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.
14 Onť mne oslaví; nebo z mého vezme, a zvěstuje vám.
೧೪ಆತನು ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಯಪಡಿಸುತ್ತಾನಾದ್ದರಿಂದನನ್ನನ್ನೇ ಮಹಿಮೆಪಡಿಸುವನು.
15 Všecko, cožkoli má Otec, mé jest. Protož jsem řekl, že z mého vezme, a zvěstuje vám.
೧೫ತಂದೆಗೆ ಇರುವುದೆಲ್ಲಾ ನನ್ನದು. ಆದುದರಿಂದಲೇ ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಸುವನೆಂದು ನಾನು ಹೇಳಿದೆನು.
16 Maličko, a neuzříte mne, a opět maličko, a uzříte mne; nebo já jdu k Otci.
೧೬ಇನ್ನು ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ” ಎಂದನು.
17 I řekli někteří z učedlníků jeho mezi sebou: Co jest to, že praví nám: Maličko, a neuzříte mne, a opět maličko, a uzříte mne, a že já jdu k Otci?
೧೭ಇದನ್ನು ಕೇಳಿ ಆತನ ಶಿಷ್ಯರಲ್ಲಿ ಕೆಲವರು, “ಇದೇನು ಈತನು ಹೇಳುವ ಮಾತು? ‘ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ ಮತ್ತು ನಾನು ತಂದೆಯ ಬಳಿಗೆ ಹೋಗುತ್ತೇನೆ’ ಎನ್ನುತ್ತಾನಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು
18 Protož pravili: Co jest to, že praví: Maličko? Nevíme, co praví.
೧೮“‘ಸ್ವಲ್ಪ ಕಾಲವೆಂದು’ ಈತನು ಹೇಳುವ ಈ ಮಾತೇನು? ಏನು ಮಾತನಾಡುತ್ತಿದ್ದಾನೋ ನಮಗೆ ತಿಳಿಯದು” ಎಂದು ಅಂದುಕೊಳ್ಳುತ್ತಿದ್ದರು.
19 I poznal Ježíš, že se ho chtěli otázati. I řekl jim: O tom tížete mezi sebou, že jsem řekl: Maličko, a neuzříte mne, a opět maličko, a uzříte mne?
೧೯ಯೇಸುವು ಇದನ್ನು ಕುರಿತು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ, “ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಇನ್ನು ಸ್ವಲ್ಪ ಕಾಲವಾದ ಮೇಲೆ ನನ್ನನ್ನು ನೋಡುವಿರಿ, ಎಂದು ನಾನು ನಿಮಗೆ ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದೀರಾ?
20 Amen, amen pravím vám, že plakati a kvíliti budete vy, ale svět se bude radovati; vy pak se budete rmoutiti, ale zámutek váš obrátíť se v radost.
೨೦ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆನಿಮ್ಮ ದುಃಖವು ಹೋಗಿ ಆನಂದ ಬರುವುದು.
21 Žena, když rodí, zámutek má, nebo přišla hodina její; ale když porodí dítě, již nepamatuje na soužení, pro radost, že se narodil člověk na svět.
೨೧ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.
22 Protož i vy zámutek máte nyní, ale opět uzřím vás, a radovati se bude srdce vaše, a radosti vaší žádný neodejme od vás.
೨೨ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.
23 A v ten den nebudete se mne tázati o ničemž. Amen, amen pravím vám: Že zač byste koli prosili Otce ve jménu mém, dáť vám.
೨೩ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
24 Až dosavad za nic jste neprosili ve jménu mém. Prostež, a vezmete, aby radost vaše doplněna byla.
೨೪ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.
25 Toto v příslovích mluvil jsem vám; přijdeť hodina, když již ne v příslovích budu mluviti vám, ale zjevně o Otci svém zvěstovati budu vám.
೨೫“ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ.
26 V ten den ve jménu mém prositi budete, a nepravímť vám, že já budu prositi Otce za vás.
೨೬ಆ ದಿನದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ, ನಿಮ್ಮ ಪರವಾಗಿ ನಾನು ತಂದೆಯನ್ನು ಬೇಡಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ.
27 Nebo sám Otec miluje vás, proto že jste vy mne milovali, a uvěřili, že jsem já od Boha vyšel.
೨೭ನೀವು ನನ್ನನ್ನು ಪ್ರೀತಿಸಿನಾನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
28 Vyšelť jsem od Otce, a přišel jsem na svět; a opět opouštím svět, a jdu k Otci.
೨೮ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು.
29 Řkou jemu učedlníci jeho: Aj, nyní zjevně mluvíš, a přísloví žádného nepravíš.
೨೯ಅದಕ್ಕೆ ಆತನ ಶಿಷ್ಯರು, “ಇಗೋ, ನೀನು ಹೇಳುವ ಸಂಗತಿಯನ್ನು ಈಗ ಸಾಮ್ಯರೂಪವಾಗಿ ಹೇಳದೆ ಸ್ಪಷ್ಟವಾಗಿ ಹೇಳುತ್ತಿದ್ದೀ.
30 Nyní víme, že víš všecko, a nepotřebuješ, aby se kdo tebe tázal. Skrze to věříme, že jsi od Boha přišel.
೩೦ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು.
31 Odpověděl jim Ježíš: Nyní věříte.
೩೧ಅದಕ್ಕೆ ಯೇಸು, “ಈಗ ನೀವು ನಂಬುತ್ತೀರಿ.
32 Aj, přijdeť hodina, anobrž již přišla, že se rozprchnete jeden každý k svému, a mne samého necháte. Ale nejsemť sám, nebo Otec se mnou jest.
೩೨ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.
33 Tyto věci mluvil jsem vám, abyste ve mně pokoj měli. Na světě soužení míti budete, ale doufejtež, jáť jsem přemohl svět.
೩೩ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.