< Jan 20 >

1 První pak den po sobotě Maria Magdaléna přišla ráno k hrobu, když ještě tma bylo. I uzřela kámen odvalený od hrobu.
ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು.
2 I běžela odtud a přišla k Šimonovi Petrovi a k jinému učedlníku, jehož miloval Ježíš, a řekla jim: Vzali Pána z hrobu, a nevíme, kde jsou jej položili.
ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು
3 Tedy vyšel Petr a jiný učedlník, a šli k hrobu.
ಆಗ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು.
4 I běželi oba spolu. Ale ten druhý učedlník předběhl Petra, a přišel prve k hrobu.
ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ವೇಗವಾಗಿ ಓಡಿ ಮೊದಲೇ ಸಮಾಧಿಗೆ ಬಂದನು.
5 A nachýliv se, uzřel prostěradla položená, ale však tam nevšel.
ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ.
6 Tedy přišel Šimon Petr, za ním jda, a všel do hrobu. I uzřel prostěradla položená,
ಸೀಮೋನ್ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ, ಆ ನಾರುಬಟ್ಟೆಗಳು ಬಿದ್ದಿರುವುದನ್ನೂ
7 A rouchu, kteráž byla na hlavě jeho, ne s prostěradly položenou, ale obzvláštně svinutou na jednom místě.
ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು.
8 Potom všel i ten druhý učedlník, kterýž byl prve přišel k hrobu, i uzřel a uvěřil.
ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು.
9 Nebo ještě neznali Písma, že měl Kristus z mrtvých vstáti.
ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.
10 I odešli zase ti učedlníci tam, kdež prve byli.
೧೦ತರುವಾಯ ಆ ಶಿಷ್ಯರು ಪುನಃ ತಮ್ಮ ಮನೆಗೆ ಹೋದರು.
11 Ale Maria stála u hrobu vně, plačici. A když plakala, naklonila se do hrobu.
೧೧ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು,
12 A uzřela dva anděly v bílém rouše sedící, jednoho u hlavy a druhého u noh, tu kdež bylo položeno tělo Ježíšovo.
೧೨ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು.
13 Kteřížto řekli jí: Ženo, co pláčeš? I dí jim: Vzali Pána mého, a nevím, kde ho položili.
೧೩ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.
14 To když řekla, obrátila se zpátkem, a uzřela Ježíše, an stojí, ale nevěděla, by Ježíš byl.
೧೪ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು, ಆದರೆ ಆತನು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ.
15 Dí jí Ježíš: Ženo, co pláčeš? Koho hledáš? Ona domnívajici se, že by zahradník byl, řekla jemu: Pane, vzal-lis ty jej, pověz mi, kdes ho položil, ať já jej vezmu.
೧೫ಯೇಸು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?” ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, “ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ” ಎಂದು ಹೇಳಿದಳು.
16 Řekl jí Ježíš: Maria. Obrátivši se ona, řekla jemu: Rabbóni, jenž se vykládá: Mistře.
೧೬ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ.
17 Dí jí Ježíš: Nedotýkejž se mne; neb jsem ještě nevstoupil k Otci svému. Ale jdiž k bratřím mým, a pověz jim: Vstupuji k Otci svému, a k Otci vašemu, k Bohu svému, a k Bohu vašemu.
೧೭ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.
18 I přišla Maria Magdaléna, zvěstujici učedlníkům, že by viděla Pána a že jí to pověděl.
೧೮ಮಗ್ದಲದ ಮರಿಯಳು ಹೋಗಿ “ನಾನು ಕರ್ತನನ್ನು ನೋಡಿದ್ದೇನೆ,” ಆತನು ಇಂಥಿಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು.
19 Když pak byl večer toho dne, kterýž jest první po sobotě, a dveře byly zavříny, kdež byli učedlníci shromážděni, pro strach Židovský, přišel Ježíš, a stál u prostřed, a řekl jim: Pokoj vám.
೧೯ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆಸಮಾಧಾನವಾಗಲಿ” ಎಂದನು.
20 A to pověděv, ukázal jim ruce i bok svůj. I zradovali se učedlníci, vidouce Pána.
೨೦ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
21 Tedy řekl jim opět: Pokoj vám. Jakož mne poslal Otec, tak i já posílám vás.
೨೧ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.
22 To pověděv, dechl, a řekl jim: Přijměte Ducha svatého.
೨೨ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ.
23 Kterýmžkoli odpustili byste hříchy, odpouštějíť se jim; a kterýmžkoli zadrželi byste je, zadržániť jsou.
೨೩ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು.
24 Tomáš pak jeden ze dvanácti, jenž sloul Didymus, nebyl s nimi, když byl přišel Ježíš.
೨೪ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ.
25 I řekli jemu jiní učedlníci: Viděli jsme Pána. A on řekl jim: Leč uzřím v rukou jeho bodení hřebů, a vpustím prst svůj v místo hřebů, a ruku svou vložím v bok jeho, nikoli neuvěřím.
೨೫ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು.
26 A po osmi dnech opět učedlníci jeho byli vnitř, a Tomáš s nimi. Přišel Ježíš, a dveře byly zavříny, i stál uprostřed a řekl: Pokoj vám.
೨೬ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”
27 Potom řekl k Tomášovi: Vložiž prst svůj sem, a viz ruce mé, a vztáhni ruku svou, a vpusť v bok můj, a nebudiž nevěřící, ale věřící.
೨೭ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.
28 I odpověděl Tomáš a řekl jemu: Pán můj a Bůh můj.
೨೮ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.
29 Dí jemu Ježíš: Žes mne viděl, Tomáši, uvěřil jsi. Blahoslavení, kteříž neviděli, a uvěřili.
೨೯ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು.
30 Mnohé zajisté i jiné divy činil Ježíš před obličejem učedlníků svých, kteréž nejsou psány v knize této.
೩೦ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ.
31 Ale toto psáno jest, abyste věřili, že Ježíš jest Kristus, Syn Boží, a abyste věříce, život věčný měli ve jménu jeho.
೩೧ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.

< Jan 20 >