< 4 Mojžišova 28 >
1 Mluvil také Hospodin k Mojžíšovi, řka:
೧ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
2 Přikaž synům Izraelským a rci jim: Obětí mých, chleba mého, v obětech mých ohnivých u vůni spokojující mne, nezanedbávejte mi přinášeti v čas k tomu vyměřený.
೨“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’
3 Díš tedy jim: Tato jest obět ohnivá, kterouž obětovati budete Hospodinu: Beránky roční bez poškvrny dva, každého dne v obět zápalnou ustavičně.
೩ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.
4 Beránka jednoho obětovati budeš ráno, a beránka druhého obětovati budeš k večerou.
೪ಹೊತ್ತಾರೆಯಲ್ಲಿ ಒಂದು ಕುರಿಯನ್ನು, ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಸಮರ್ಪಿಸಬೇಕು.
5 Desátý také díl míry efi mouky bělné, v obět suchou, zadělané olejem nejčistším, čtvrtou částkou míry hin.
೫ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ, ಮೂರು ಸೇರು ಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.
6 Ta jest obět zápalná ustavičná, kteráž obětována jest na hoře Sinai u vůni příjemnou, v obět ohnivou Hospodinu.
೬ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು.
7 A obět mokrá její, čtvrtý díl míry hin na každého beránka; v svatyni obětuj obět mokrou silného nápoje Hospodinu.
೭ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.
8 Beránka pak druhého obětovati budeš k večerou, tak jako obět suchou jitřní, a jako obět mokrou její obětovati budeš v obět ohnivou, u vůni spokojující Hospodina.
೮ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು.
9 Dne také sobotního dva beránky roční bez poškvrny, a dvě desetiny mouky bělné, olejem zadělané v obět suchou s obětí její mokrou.
೯“‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.
10 Ta bude obět zápalná sobotní každého dne sobotního, mimo zápalnou obět ustavičnou a mokrou obět její.
೧೦ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು.
11 Také na nov měsíců vašich obětovati budete obět zápalnou Hospodinu, volky mladé dva, skopce jednoho, beránků ročních bez poškvrny sedm;
೧೧“‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.
12 A tři desetiny mouky bělné, olejem zadělané v obět suchou při každém volku, a dvě desetiny mouky bělné, olejem zadělané v obět suchou při každém skopci;
೧೨ಒಂದೊಂದು ಹೋರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು ಸೇರಿಸಬೇಕು.
13 A jednu desetinu mouky bělné olejem zadělané v obět suchou při každém beránku, k oběti zápalné u vůni příjemnou, v obět ohnivou Hospodinu.
೧೩ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು ಯೆಹೋವನಿಗೆ ಸುಗಂಧವಾಸನೆಯ ಸರ್ವಾಂಗಹೋಮಕ್ಕಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.
14 Tyto pak oběti mokré jejich z vína: Půl míry hin bude při každém volku, a třetí částka hin při skopci, a čtvrtá částka hin při každém beránku. Ta jest obět zápalná k nov měsíci, každého měsíce přes celý rok.
೧೪ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.
15 Kozla také jednoho v obět za hřích, mimo obět ustavičnou, obětovati budete Hospodinu s mokrou obětí jeho.
೧೫ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು.
16 Měsíce pak prvního, čtrnáctý den téhož měsíce velikanoc bude Hospodinu,
೧೬“‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇಮಿಸಿದ ಹಬ್ಬವಾಗಬೇಕು.
17 A v patnáctý den téhož měsíce slavnost; za sedm dní chleby nekvašené jísti budete.
೧೭ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.
18 Prvního dne shromáždění svaté bude, žádného díla robotného nebudete dělati v něm.
೧೮ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.
19 Obětovati pak budete obět ohnivou v zápal Hospodinu, volky mladé dva, skopce jednoho, a sedm beránků ročních; bez poškvrny budou.
೧೯ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು.
20 A suchou obět při nich, totiž mouku bělnou, olejem zadělanou, tři desetiny při každém volku, a dvě desetiny při každém skopci obětovati budete.
೨೦ಇವುಗಳೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು,
21 A jednu desetinu obětovati budeš při každém beránku z těch sedmi beránků,
೨೧ಏಳು ಕುರಿಮರಿಯಲ್ಲಿ ಒಂದೊಂದಕ್ಕೆ ಎಣ್ಣೆ ಬೆರೆಸಿದ ಮೂರು ಸೇರನ್ನು,
22 A kozla v obět za hřích jednoho k očištění vás.
೨೨ಅದಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
23 Mimo obět zápalnou jitřní, kteráž jest obět ustavičná, obětovati budete to.
೨೩ಪ್ರತಿ ದಿನದ ಪ್ರಾತಃಕಾಲದಲ್ಲಿ ಸರ್ವಾಂಗಹೋಮವಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.
24 Tak obětovati budete každého dne za těch sedm dní pokrm oběti ohnivé, u vůni spokojující Hospodina, mimo zápalnou obět ustavičnou, a obět mokrou její.
೨೪ಆ ಏಳು ದಿನಗಳಲ್ಲಿಯೂ ನಿತ್ಯ ಸರ್ವಾಂಗಹೋಮವನ್ನು ಸಮರ್ಪಿಸುವುದಲ್ಲದೆ ಮೇಲೆ ಹೇಳಿದ ಕ್ರಮದ ಪ್ರಕಾರ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು, ಪಾನದ್ರವ್ಯವನ್ನು ಸಹ ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು.
25 Sedmého pak dne shromáždění svaté míti budete, žádného díla robotného nebudete dělati.
೨೫ಏಳನೆಯ ದಿನದಲ್ಲೂ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.
26 V den také prvotin, když obětovati budete novou obět suchou Hospodinu, vyplníc téhodny vaše, shromáždění svaté míti budete; žádného díla robotného nebudete dělati.
೨೬“‘ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.
27 A obětovati budete obět zápalnou, u vůni spokojující Hospodina, volky mladé dva, skopce jednoho, beránků ročních sedm,
೨೭ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ,
28 A obět suchou jejich, mouky bělné olejem zadělané tři desetiny při každém volku, dvě desetiny při každém skopci,
೨೮ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ಹಾಗೂ ಪ್ರತಿಯೊಂದು ಟಗರಿಗೆ ಒಂಭತ್ತು ಸೇರು,
29 Jednu desetinu při každém beránku z těch sedmi beránků,
೨೯ಹೋರಿಗೆ ಆರು ಸೇರು, ಕುರಿಗೆ ಮೂರು ಸೇರು ಹಿಟ್ಟನ್ನೂ,
30 Kozla jednoho k očištění vašemu.
೩೦ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
31 To mimo obět zápalnou ustavičnou, a obět suchou její obětovati budete; bez poškvrny ať jsou s obětmi svými mokrými.
೩೧ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.’”