< 4 Mojžišova 32 >
1 Měli pak synové Ruben a synové Gád dobytka velmi mnoho, a uzřeli zemi Jazer a zemi Galád, ano místo to místo příhodné pro dobytek.
೧ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.
2 Protož přistoupivše synové Gád a synové Ruben, mluvili k Mojžíšovi a k Eleazarovi knězi a knížatům shromáždění, řkouce:
೨ಗಾದ್ ಮತ್ತು ರೂಬೇನ್ ಸಂತತಿಯವರು ಮೋಶೆ ಮತ್ತು ಮಹಾಯಾಜಕನಾದ ಎಲ್ಲಾಜಾರನು ಬಳಿಗೂ, ಸಮೂಹದ ಪ್ರಧಾನರ ಬಳಿಗೂ ಬಂದು ಹೇಳಿದ್ದೇನೆಂದರೆ,
3 Atarot a Dibon, a Jazer a Nemra, Ezebon a Eleale, a Saban a Nébo a Beon,
೩“ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್,
4 Země, kterouž zbil Hospodin před shromážděním Izraelským, jest země příhodná ku pastvě dobytku, a my služebníci tvoji máme drahně dobytka.
೪ಇವು ಯೆಹೋವನು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪಟ್ಟಣಗಳು. ದನಕುರಿಗಳ ಮೇವಿಗೆ ತಕ್ಕ ಪ್ರದೇಶವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ದನ ಕುರಿಗಳುಂಟು.
5 (Protož řekli: ) Jestliže jsme nalezli milost před očima tvýma, nechť jest dána krajina ta služebníkům tvým k vládařství, ať nechodíme za Jordán.
೫ಆದಕಾರಣ ನೀವು, ದಾಸರಾದ ನಮ್ಮ ಮೇಲೆ ದಯೆ ಇಟ್ಟು ನಮ್ಮನ್ನು ಯೊರ್ದನ್ ನದಿಯ ಆಚೆಗೆ ಬರಮಾಡಿದ ಈ ಪ್ರದೇಶವನ್ನೇ ಸ್ವತ್ತಾಗಿ ಕೊಡಬೇಕು” ಎಂದು ಕೇಳಿಕೊಂಡರು.
6 I odpověděl Mojžíš synům Gád a synům Ruben: Což bratří vaši půjdou sami k boji, a vy zde zůstanete?
೬ಮೋಶೆಯು ಗಾದ್ ಮತ್ತು ರೂಬೇನ್ ಸಂತಾನದವರಿಗೆ, “ನಿಮ್ಮ ಸಹೋದರರು ಯದ್ಧಕ್ಕೆ ಹೋಗುವಾಗ ನೀವು ಅಲ್ಲೇ ಕುಳಿತುಕೊಂಡಿರಬೇಕೇನು?
7 I proč roztrhujete mysli synů Izraelských, aby nesměli jíti do země, kterouž jim dal Hospodin?
೭ಯೆಹೋವನು ಇಸ್ರಾಯೇಲರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಏಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ?
8 Takť jsou učinili otcové vaši, když jsem je poslal z Kádesbarne, aby prohlédli zemi tu.
೮ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ತಂದೆಯರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.
9 Kteřížto, když přišli až k údolí Eškol a shlédli zemi, potom vrátivše se, odvrátili mysl synů Izraelských, aby nešli do země, kterouž dal jim Hospodin.
೯ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ.
10 Èímž popuzen jsa k hněvu Hospodin v den ten, přisáhl, řka:
೧೦ಆ ಕಾಲದಲ್ಲಿ ಯೆಹೋವನು ಕೋಪಗೊಂಡವನಾಗಿ ಪ್ರಮಾಣಮಾಡಿ,
11 Zajisté že lidé ti, kteříž vyšli z Egypta, od dvadcítiletých a výše, neuzří země té, kterouž jsem s přísahou zaslíbil Abrahamovi, Izákovi a Jákobovi, nebo ne cele následovali mne,
೧೧‘ಐಗುಪ್ತ ದೇಶದೊಳಗಿಂದ ಬಂದ ಈ ಜನರೊಳಗೆ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದುದರಿಂದ ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಪೂರ್ವಕವಾಗಿ ಕೊಟ್ಟ ದೇಶವನ್ನು, ಅವರೊಳಗೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರಲ್ಲಿ
12 Kromě Kálefa, syna Jefonova Cenezejského, a Jozue, syna Nun, nebo cele následovali Hospodina.
೧೨ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನೂ ಮತ್ತು ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತು ಯಾರೂ ನೋಡುವುದೇ ಇಲ್ಲ’” ಎಂದು ಖಂಡಿತವಾಗಿ ಹೇಳಿದನು.
13 I popudila se prchlivost Hospodinova na Izraele, a učinil, aby byli tuláci na poušti za čtyřidceti let, dokudž nezahynul všecken ten věk, kterýž činil zlé před očima Hospodinovýma.
೧೩ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ ನಲ್ವತ್ತು ವರ್ಷ, ಇಸ್ರಾಯೇಲರನ್ನು ಮರುಭೂಮಿಯಲ್ಲೇ ತಿರುಗಾಡುವಂತೆ ಮಾಡಿದನು.
14 A hle, vy nastoupili jste na místo otců svých, plémě lidí hříšných, abyste vždy přidávali k hněvu prchlivosti Hospodinovy na Izraele.
೧೪“ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.
15 Jestliže se odvrátíte od následování jeho, i onť také opustí jej na poušti této, a tak budete příčina zahynutí všeho lidu tohoto.
೧೫ನೀವು ಆತನನ್ನು ಹಿಂಬಾಲಿಸದೆ ಇರುವ ಕಾರಣ ಆತನು ಆ ಜನರನ್ನು ಮರುಭೂಮಿಯಲ್ಲಿ ಇರಿಸಿದರೆ, ಈ ಸಮಸ್ತ ಜನಾಂಗವನ್ನು ನೀವೇ ನಾಶ ಮಾಡುವಿರಿ” ಎಂದು ಹೇಳಿದನು.
16 Přistoupivše pak znovu, řekli jemu: Stáje dobytkům a stádům svým zde vzděláme, a města dítkám svým,
೧೬ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ, ನಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನು ಕಟ್ಟಿಕೊಳ್ಳುವೆವು.
17 Sami pak v odění pohotově budeme, statečně sobě počínajíce před syny Izraelskými, dokavadž jich neuvedeme na místo jejich; mezi tím zůstanou dítky naše v městech hrazených, pro bezpečnost před obyvateli země.
೧೭ನಾವಾದರೋ ಇಸ್ರಾಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟೆಕೋತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ.
18 Nenavrátíme se do domů svých, až prvé vládnouti budou synové Izraelští jeden každý dědictvím svým;
೧೮ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವತ್ತುಗಳನ್ನು ಸ್ವತಂತ್ರಿಸಿಕೊಳ್ಳುವ ವರೆಗೂ ನಾವು ನಮ್ಮ ಮನೆಗಳಿಗೆ ತಿರುಗಿ ಹೋಗುವುದಿಲ್ಲ.
19 Aniž vezmeme jakého dědictví s nimi za Jordánem neb dále, když dosáhneme dědictví svého z této strany Jordánu, k východu slunce.
೧೯ನಮಗೆ ಯೊರ್ದನ್ ನದಿಯ ಆಚೆ ಪೂರ್ವ ದಿಕ್ಕಿನಲ್ಲಿ ಸ್ವತ್ತನ್ನು ಅಪೇಕ್ಷಿಸುವುದಿಲ್ಲ” ಎಂದರು.
20 I odpověděl jim Mojžíš: Jestliže učiníte tak, jakž jste mluvili, a jestliže půjdete v odění před Hospodinem k boji,
೨೦ಅದಕ್ಕೆ ಮೋಶೆ ಅವರಿಗೆ, “ನೀವು ಯೆಹೋವನ ಮಾತಿನಂತೆ ನಡೆದರೆ ನಿಮ್ಮಲ್ಲಿರುವ ಭಟರೆಲ್ಲರೂ ಯುದ್ಧಸನ್ನದ್ಧರಾಗಿ,
21 A šli byste za Jordán vy všickni v odění před Hospodinem, dokavadž by nevyhnal nepřátel svých od tváři své,
೨೧ಯೊರ್ದನ್ ನದಿಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ
22 A nebyla podmaněna všecka země před Hospodinem: potom navrátíte se, a budete bez viny před Hospodinem i před Izraelem; tak přijde země tato vám v dědictví před Hospodinem.
೨೨ಯುದ್ಧಮಾಡಿ ತರುವಾಯ ನೀವು ತಿರುಗಿ ಬಂದು ಆತನ ದೃಷ್ಟಿಯಲ್ಲೂ, ಇಸ್ರಾಯೇಲರ ದೃಷ್ಟಿಯಲ್ಲೂ ನಿರ್ದೋಷಿಗಳಾಗಿರುವಿರಿ ಮತ್ತು ಈ ದೇಶವು ಯೆಹೋವನ ಸನ್ನಿಧಿಯಲ್ಲೇ ನಿಮಗೆ ಸ್ವತ್ತಾಗಿರುವುದು.
23 Pakli neučiníte toho, hle, zhřešíte proti Hospodinu, a vězte, že pomsta vaše přijde na vás.
೨೩“ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.
24 Stavějte sobě tedy města pro dítky, a stáje pro dobytky své, a což vyšlo z úst vašich, učiňte.
೨೪ನೀವು ನಿಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನೂ, ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ ಕಟ್ಟಿಕೊಂಡ ತರುವಾಯ ನಿಮ್ಮ ಮಾತಿನ ಪ್ರಕಾರ ಮಾಡಿರಿ” ಎಂದನು.
25 I odpovědělo pokolení synů Gád a synů Ruben Mojžíšovi, řka: Služebníci tvoji učiní, jakž pán náš rozkazuje.
೨೫ಅದಕ್ಕೆ ಗಾದ್ಯರೂ ಮತ್ತು ರೂಬೇನ್ಯರೂ ಮೋಶೆಗೆ, “ಸ್ವಾಮಿಯವರ ಅಪ್ಪಣೆಯ ಪ್ರಕಾರ ದಾಸರಾದ ನಾವು ಮಾಡುತ್ತೇವೆ ಎಂದರು.
26 Dítky naše a ženy naše, dobytek náš a všecka hovada naše, tu zůstanou v městech Galád,
೨೬ನಮ್ಮ ಮಕ್ಕಳು, ಹೆಂಡತಿಯರೂ, ದನಕುರಿಗಳು ನಮ್ಮ ಸಂಪತ್ತು ಇಲ್ಲೇ ಗಿಲ್ಯಾದ್ ದೇಶದ ಊರುಗಳಲ್ಲಿ ಇರಲಿ.
27 Služebníci pak tvoji přejdou jeden každý v odění způsobný před Hospodinem k boji, jakož mluví pán můj.
೨೭ನಿನ್ನ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರೂ ಸ್ವಾಮಿಯವರ ಅಪ್ಪಣೆಯ ಪ್ರಕಾರ ಯೆಹೋವನ ಮುಂದುಗಡೆಯಲ್ಲಿ ಹೊರಟು ನದಿಯನ್ನು ದಾಟಿ ಯುದ್ಧಮಾಡುವೆವು” ಎಂದು ಉತ್ತರ ಕೊಟ್ಟರು.
28 I poručil o nich Mojžíš Eleazarovi knězi a Jozue, synu Nun, a předním v čeledech pokolení synů Izraelských,
೨೮ಆದಕಾರಣ ಮೋಶೆ ಅವರ ವಿಷಯವಾಗಿ ಮಹಾಯಾಜಕ ಎಲ್ಲಾಜಾರನಿಗೂ, ನೂನನ ಮಗನಾದ ಯೆಹೋಶುವನಿಗೂ ಇಸ್ರಾಯೇಲರ ಮತ್ತು ಗೋತ್ರಗಳ ಕುಲಾಧಿಪತಿಗಳಿಗೂ ಆಜ್ಞೆಮಾಡಿದನು.
29 A řekl jim: Jestliže přejdou synové Gád a synové Ruben s vámi za Jordán všickni hotovi k boji před Hospodinem, a byla by již podmaněna země před vámi, dáte jim zemi Galád k vládařství.
೨೯ಮೋಶೆಯು ಅವರಿಗೆ, “ಗಾದ್ಯರಲ್ಲಿಯೂ, ರೂಬೇನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ನದಿಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವನ್ನು ನೀವು ಸ್ವಾಧೀನಮಾಡಿಕೊಂಡಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸ್ವಾಸ್ತ್ಯವಾಗುವುದಕ್ಕೆ ಕೊಡಬೇಕು.
30 Pakli by nešli v odění s vámi, tedy dědictví míti budou u prostřed vás v zemi Kanán.
೩೦ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ದೇಶದಲ್ಲಿಯೇ ಅವರಿಗೆ ಸ್ವಾಸ್ತ್ಯವಾಗಬೇಕು” ಎಂದು ಹೇಳಿದನು.
31 I odpověděli synové Gád a synové Ruben, řkouce: Jakž mluvil Hospodin služebníkům tvým, tak učiníme:
೩೧ಅದಕ್ಕೆ ಗಾದ್ಯರೂ ರೂಬೇನ್ಯರೂ ಉತ್ತರವಾಗಿ, “ಯೆಹೋವನು ನಿನ್ನ ದಾಸರಾದ ನಮಗೆ ಆಜ್ಞಾಪಿಸಿದಂತೆಯೇ ಮಾಡುವೆವು.
32 My půjdeme v odění před Hospodinem do země Kanán, a zůstane nám v dědictví vládařství naše z této strany Jordánu.
೩೨ನಾವು ಯೆಹೋವನ ಮುಂದೆ ಯುದ್ಧಸನ್ನದ್ಧರಾಗಿ ಕಾನಾನ್ ದೇಶಕ್ಕೆ ಹೊರಡುವೆವು, ಆಗ ಯೊರ್ದನ್ ನದಿಯ ಆಚೆಯೇ ನಮಗೆ ಸ್ವತ್ತು ದೊರಕಬೇಕು” ಎಂದರು.
33 Tedy dal jim Mojžíš, synům totiž Gád a synům Ruben a polovici pokolení Manasses, syna Jozefova, království Seona, krále Amorejského, a království Oga, krále Bázanského, zemi s městy jejími při pomezích, i města země té všudy vůkol.
೩೩ಹೀಗೆ ಮೋಶೆಯು ಗಾದ್ಯರಿಗೂ, ರೂಬೇನ್ಯರಿಗೂ, ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅವುಗಳ ಎಲ್ಲಾ ಊರುಗಳನ್ನೂ ಮತ್ತು ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.
34 A vzdělali synové Gád, Dibon, Atarot a Aroer,
೩೪ಗಾದ್ಯನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.
35 A Atrot, Sofan, Jazer a Jegbaa,
೩೫ಆಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ,
36 A Betnemra a Betaran, města hrazená, a stáje pro dobytky.
೩೬ಬೇತ್‌ನಿಮ್ರಾ ಮತ್ತು ಬೇತ್ ಹಾರಾನಿನ ಸುತ್ತ ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನು ಕಟ್ಟಿಕೊಂಡರು.
37 Synové pak Ruben vystavěli Ezebon, Eleale a Kariataim,
೩೭ರೂಬೇನ್ಯರ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.
38 A Nébo a Balmeon, změnivše jim jména; také Sabma, a dali jiná jména městům, kteráž vzdělali.
೩೮ಸಿಬ್ಮಾ ಎಂಬ ಊರುಗಳನ್ನೂ, ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಎಂಬವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.
39 Táhli pak synové Machir, syna Manassesova, do Galád, a vzavše tu krajinku, vyhnali Amorejského, kterýž tam bydlil.
೩೯ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
40 I dal Mojžíš zemi Galád Machirovi, synu Manassesovu, a bydlil v ní.
೪೦ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು.
41 Jair také syn Manassesův táhl a vzal vsi jejich, a nazval je vsi Jairovy.
೪೧ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು.
42 Nobe také táhl, a vzal Kanat a městečka jeho, a nazval je Nobe od jména svého.
೪೨ನೋಬಹನು ಯುದ್ಧಕ್ಕೆ ಹೊರಟು ಕೆನಾತ್ ಎಂಬ ಪಟ್ಟಣವನ್ನೂ ಮತ್ತು ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿ ಅದಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು.