< Žalmy 107 >
1 Oslavujte Hospodina, nebo jest dobrý, nebo na věky milosrdenství jeho.
೧ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.
2 Nechť o tom vypravují ti, kteříž jsou vykoupeni skrze Hospodina, jak je on vykoupil z ruky těch, kteříž je ssužovali,
೨ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ,
3 A shromáždil je z zemí, od východu a od západu, od půlnoci i od moře.
೩ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣಗಳಲ್ಲಿಯೂ, ಸಮುದ್ರದ ಕಡೆಯಲ್ಲಿಯೂ ಇರುವ ದೇಶಗಳಿಂದ ಕೂಡಿಸಿದವರೆಲ್ಲರೂ ಸ್ತುತಿಮಾಡಲಿ.
4 Bloudili po poušti, po cestách pustých, města k přebývání nenacházejíce.
೪ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, ದಾರಿತಪ್ಪಿ ಅಲೆಯುವವರಾಗಿ, ಜನವಿರುವ ಊರನ್ನು ಕಾಣದೆ,
5 Hladovití a žízniví byli, až v nich svadla duše jejich.
೫ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು.
6 Když volali k Hospodinu v ssoužení svém, z úzkostí jejich vytrhl je,
೬ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಬಿಡಿಸಿದನು.
7 A vedl je po cestě přímé, aby přišli do města k bydlení.
೭ಜನವಿರುವ ಊರನ್ನು ಸೇರುವಂತೆ, ಅವರನ್ನು ಸರಿಯಾದ ದಾರಿಯಲ್ಲಿ ನಡೆಸಿದನು.
8 Nechať oslavují před Hospodinem milosrdenství jeho, a divné skutky jeho před syny lidskými,
೮ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
9 Poněvadž napájí duši žíznivou, a duši hladovitou naplňuje dobrými věcmi.
೯ಆತನು ಬಾಯಾರಿದವರ ಆಶೆಯನ್ನು ಪೂರೈಸಿ, ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.
10 Kteříž sedí ve tmě a v stínu smrti, sevříni jsouce bídou i železy,
೧೦ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು.
11 Protože odporni byli řečem Boha silného, a radou Nejvyššího pohrdli.
೧೧ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು, ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ,
12 Pročež ponížil bídou srdce jejich, padli, a nebylo pomocníka.
೧೨ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು.
13 Když volají k Hospodinu v ssoužení svém, z úzkostí je vysvobozuje.
೧೩ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.
14 Vyvodí je z temností a stínu smrti, a svazky jejich trhá.
೧೪ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.
15 Nechať oslavují před Hospodinem milosrdenství jeho, a divné skutky jeho před syny lidskými,
೧೫ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
16 Poněvadž láme brány měděné, a závory železné posekává.
೧೬ಆತನು ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಟ್ಟಿದ್ದಾನೆ.
17 Blázni pro cestu převrácenosti své, a pro nepravosti své v trápení bývají.
೧೭ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು.
18 Oškliví se jim všeliký pokrm, až se i k branám smrti přibližují.
೧೮ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು.
19 Když volají k Hospodinu v ssoužení svém, z úzkostí jejich je vysvobozuje.
೧೯ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.
20 Posílá slovo své, a uzdravuje je, a vysvobozuje je z hrobu.
೨೦ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.
21 Nechať oslavují před Hospodinem milosrdenství jeho, a divné skutky jeho před syny lidskými,
೨೧ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
22 A obětujíce oběti chvály, ať vypravují skutky jeho s prozpěvováním.
೨೨ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ, ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.
23 Kteří se plaví po moři na lodech, pracujíce na velikých vodách,
೨೩ಹಡಗು ಹತ್ತಿ ಸಮುದ್ರ ಪ್ರಯಾಣ ಮಾಡುತ್ತಾ, ಮಹಾಜಲರಾಶಿಯಲ್ಲಿ ತಮ್ಮ ಉದ್ಯೋಗವನ್ನು ನಡೆಸುವವರು,
24 Tiť vídají skutky Hospodinovy, a divy jeho v hlubokosti.
೨೪ಯೆಹೋವನ ಮಹತ್ಕಾರ್ಯಗಳನ್ನೂ, ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.
25 Jakž jen dí, hned se strhne vítr bouřlivý, a dme vlny mořské.
೨೫ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ, ಅದರಲ್ಲಿ ತೆರೆಗಳನ್ನು ಎಬ್ಬಿಸಿತು.
26 Vznášejí se k nebi, sstupují do propasti, duše jejich v nebezpečenství rozplývá se.
೨೬ಜನರು ಆಕಾಶಕ್ಕೆ ಏರುತ್ತಲೂ, ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು.
27 Motají se a nakloňují jako opilý, a všecko umění jejich mizí.
೨೭ಅವರು ದಿಕ್ಕುತೋರದವರಾಗಿ ಸುತ್ತುತ್ತಾ, ಕುಡುಕರಂತೆ ಹೊಯ್ದಾಡುತ್ತಿದ್ದರು.
28 Když volají k Hospodinu v ssoužení svém, z úzkostí jejich je vysvobozuje.
೨೮ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಹೊರತಂದನು.
29 Proměňuje bouři v utišení, tak že umlkne vlnobití jejich.
೨೯ಆತನು ಬಿರುಗಾಳಿಯನ್ನು ಶಾಂತಪಡಿಸಿದನು; ತೆರೆಗಳು ನಿಂತವು.
30 I veselí se, že utichlo; a tak přivodí je k břehu žádostivému.
೩೦ಸಮುದ್ರವು ಶಾಂತವಾದುದರಿಂದ, ಹಡಗಿನವರು ಸಂತೋಷಪಟ್ಟರು, ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು.
31 Nechať oslavují před Hospodinem milosrdenství jeho, a divné skutky jeho před syny lidskými.
೩೧ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.
32 Nechť ho vyvyšují v shromáždění lidu, a v radě starců chválí jej.
೩೨ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ; ಹಿರಿಯರ ಸಮೂಹದಲ್ಲಿ ಕೊಂಡಾಡಲಿ.
33 Obrací řeky v poušť, a prameny vod v suchost,
೩೩ಆತನು ನಿವಾಸಿಗಳ ದುಷ್ಟತನಕ್ಕಾಗಿ ನದಿಗಳನ್ನು ಅರಣ್ಯವಾಗುವಂತೆಯೂ,
34 Zemi úrodnou v slatinnou, pro zlost obyvatelů jejích.
೩೪ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.
35 Pustiny obrací v jezera, a zemi vyprahlou v prameny vod.
೩೫ಅರಣ್ಯವನ್ನು ಕೆರೆಯಾಗಿಯೂ, ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ,
36 I osazuje na ní hladovité, aby stavěli města k bydlení.
೩೬ಅಲ್ಲಿ ಹಸಿದವರನ್ನು ನೆಲೆಗೊಳಿಸಿದನು; ಅವರು ನೆಲೆಯಾಗಿ ವಾಸಿಸಲು ಪಟ್ಟಣವನ್ನು ಕಟ್ಟಿಕೊಂಡು,
37 Kteříž osívají pole, a dělají vinice, a shromažďují sobě užitek úrody.
೩೭ಹೊಲಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಟ್ಟು, ಆದಾಯವನ್ನು ಕೂಡಿಸಿಕೊಂಡರು.
38 Takť on jim žehná, že se rozmnožují velmi, a dobytka jejich neumenšuje.
೩೮ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.
39 A někdy pak umenšeni a sníženi bývají ukrutenstvím, bídou a truchlostí,
೩೯ಅವರು ಕೇಡು ತೊಂದರೆಗಳಿಂದಲೂ, ಸಂಕಟದಿಂದಲೂ ಕುಗ್ಗಿಹೋಗಿ ಸ್ವಲ್ಪ ಜನರಾದರು.
40 Když vylévá pohrdání na knížata, dopouštěje, aby bloudili po poušti bezcestné.
೪೦ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು.
41 Onť vyzdvihuje nuzného z trápení, a rozmnožuje rodinu jako stádo.
೪೧ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ, ಅವರ ಕುಟುಂಬಗಳನ್ನು ಕುರಿಹಿಂಡಿನಂತೆ ಹೆಚ್ಚಿಸಿದನು.
42 Nechť to spatřují upřímí, a rozveselí se, ale všeliká nepravost ať zacpá ústa svá.
೪೨ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವುದು.
43 Ale kdo jest tak moudrý, aby toho šetřil, a vyrozumíval mnohému milosrdenství Hospodinovu?
೪೩ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.