< Žalmy 150 >
1 Halelujah. Chvalte Boha silného pro svatost jeho, chvalte jej pro rozšíření síly jeho.
೧ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ.
2 Chvalte jej ze všelijaké moci jeho, chvalte jej podlé veliké důstojnosti jeho.
೨ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ.
3 Chvalte jej zvukem trouby, chvalte jej na loutnu a citaru.
೩ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.
4 Chvalte jej na buben a píšťalu, chvalte jej na husle a varhany.
೪ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.
5 Chvalte jej na cymbály hlasité, chvalte jej na cymbály zvučné.
೫ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ.
6 Všeliký duch chval Hospodina. Halelujah.
೬ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ!