< Žalmy 60 >

1 Přednímu z kantorů na šušan eduth, zlatý žalm Davidův, k vyučování, Když válku vedl proti Syrii Naharaim, a proti Syrii Soba, kdyžto navrátil se Joáb, pobiv Idumejských v údolí slaném dvanácte tisíců. Bože, zavrhl jsi byl nás, roztrhls nás a hněvals se, navratiž se zase k nám.
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಷೂಷನ್ ಎದೂತೆಂಬ ರಾಗ; ದಾವೀದನು ಅರಾಮ್ ರಾಜ್ಯಗಳ ಸಂಗಡ ಯುದ್ಧ ಮಾಡುವಷ್ಟರೊಳಗೆ ಯೋವಾಬನು ಹಿಂದಿರುಗಿ ಹೋಗಿ ಉಪ್ಪಿನ ತಗ್ಗಿನಲ್ಲಿ ಹನ್ನೆರಡು ಸಾವಿರ ಎದೋಮ್ಯರನ್ನು ಹೊಡೆದಾಗ ದಾವೀದನು ರಚಿಸಿದ ಕಾವ್ಯ. ಬಾಯಿಪಾಠ ಮಾಡಿಸತಕ್ಕದ್ದು. ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.
2 Zatřásl jsi byl zemí a roztrhls ji, uzdraviž rozsedliny její, neboť se chvěje.
ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; ಅದು ನಡುಗುತ್ತಿರುವುದಲ್ಲಾ. ಅದರ ಒಡಕುಗಳನ್ನು ಸರಿಮಾಡು;
3 Ukazoval jsi lidu svému tvrdé věci, napájels nás vínem zkormoucení.
ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.
4 Ale nyní dal jsi těm, kteříž se tebe bojí, korouhev, aby ji vyzdvihli pro pravdu tvou. (Sélah)
ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, ಆದ್ದರಿಂದ ಅವರು ಬಿಲ್ಲಿನಿಂದ ತಪ್ಪಿಸಿಕೊಳ್ಳಬಹುದು. (ಸೆಲಾ)
5 Ať jsou vysvobozeni milí tvoji, zachovávejž jich pravicí svou, a vyslyš mne.
ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
6 Bůh mluvil skrze svatost svou, veseliti se budu, budu děliti Sichem, a údolí Sochot rozměřím.
ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು.
7 Můjť jest Galád, můj i Manasses, a Efraim síla hlavy mé, Juda učitel můj.
ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.
8 Moáb medenice k umývání mému, na Edoma uvrhu obuv svou, proti mně, Palestino, trub.
ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು.
9 Kdo mne uvede do města ohraženého? Kdo mne zprovodí až do Idumee?
ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
10 Zdali ne ty, ó Bože, kterýž jsi nás byl zavrhl, a nevycházels, Bože, s vojsky našimi?
೧೦ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ?
11 Uděliž nám pomoci před nepřítelem, nebo marná jest pomoc lidská.
೧೧ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು; ಮನುಷ್ಯರ ಸಹಾಯವು ವ್ಯರ್ಥ.
12 V Bohu udatně sobě počínati budeme, a onť pošlapá nepřátely naše.
೧೨ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.

< Žalmy 60 >