< Zjevení Janovo 21 >
1 Potom viděl jsem nebe nové a zemi novou. Nebo první nebe a první země byla pominula, a moře již nebylo.
೧ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ.
2 A já Jan viděl jsem město svaté, Jeruzalém nový, sstupující od Boha s nebe, připravený jako nevěstu okrášlenou muži svému.
೨ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.
3 I slyšel jsem hlas veliký s nebe, řkoucí: Aj, stánek Boží s lidmi, a bydlitiť bude s nimi, a oni budou lid jeho, a on Bůh s nimi bude, jsa jejich Bohem.
೩ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.
4 A setřeť Bůh všelikou slzu s očí jejich, a smrti již více nebude, ani kvílení, ani křiku, ani bolesti nebude více; nebo první věci pominuly.
೪ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.
5 I řekl ten, kterýž seděl na trůnu: Aj, nové činím všecko. I řekl mi: Napiš to. Neboť jsou tato slova věrná a pravá.
೫ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು.
6 I dí mi: Již se stalo. Jáť jsem Alfa i Omega, počátek i konec. Jáť žíznivému dám z studnice vody živé darmo.
೬ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.
7 Kdož zvítězí, obdržíť dědičně všecko, a buduť jemu Bohem, a on mi bude synem.
೭ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.
8 Strašlivým pak, a nevěrným, a ohyzdným, a vražedlníkům, a smilníkům, a čarodějníkům, a modlářům, i všechněm lhářům, připraven jest díl jejich v jezeře, kteréž hoří ohněm a sirou, jenž jest smrt druhá. (Limnē Pyr )
೮ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು. (Limnē Pyr )
9 I přišel ke mně jeden z sedmi andělů, kteříž měli sedm koflíků plných sedmi ran nejposlednějších, a mluvil se mnou, řka: Pojď, ukážiť nevěstu, manželku Beránkovu.
೯ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ ಕುರಿಮರಿಯಾದಾತನಿಗೆ ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು” ಎಂದು ಹೇಳಿ,
10 I vnesl mne v duchu na horu velikou a vysokou, a ukázal mi město veliké, ten svatý Jeruzalém, sstupující s nebe od Boha,
೧೦ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು.
11 Mající slávu Boží. Jehož světlost byla podobná k kameni nejdražšímu, jako k kameni jaspidu, kterýž by byl způsobu křišťálového,
೧೧ಅದು ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.
12 A mělo zed velikou a vysokou, v níž bylo dvanácte bran, a na těch branách dvanácte andělů, a jména napsaná, kterážto jména jsou dvanáctera pokolení synů Izraelských.
೧೨ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು.
13 Od východu slunce brány tři, od půlnoci brány tři, od poledne brány tři, od západu brány tři.
೧೩ಪೂರ್ವ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.
14 A zed městská měla základů dvanácte, a na nich jména dvanácti apoštolů Beránkových.
೧೪ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
15 A ten, kterýž mluvil se mnou, měl třtinu zlatou, aby změřil město i brány jeho i zed jeho.
೧೫ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.
16 Položení města toho čtverhrané jest, jehož dlouhost tak veliká jest jako i širokost. I změřil to město třtinou a vyměřil dvanácte tisíců honů; dlouhost pak jeho, i širokost, i vysokost jednostejná jest.
೧೬ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು.
17 I změřil zed jeho, a naměřil sto čtyřidceti a čtyři loktů, měrou člověka, kteráž jest míra anděla.
೧೭ಅವನು ಅದರ ಗೋಡೆಯನ್ನು ಅಳತೆ ಮಾಡಿದನು. ಅದು ನೂರನಲ್ವತ್ತು ನಾಲ್ಕು ಮೊಳವಾಗಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಎಂದರೆ ದೇವದೂತನ ಮೊಳ.
18 A bylo stavení zdi jeho jaspis, město pak samo zlato čisté, podobné sklu čistému.
೧೮ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲ್ಪಟ್ಟಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.
19 A základové zdi městské všelikým kamenem drahým ozdobeni byli. Základ první byl jaspis, druhý zafir, třetí chalcedon, čtvrtý smaragd,
೧೯ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೆಯದು ಪದ್ಮರಾಗ,
20 Pátý sardonyx, šestý sardius, sedmý chryzolit, osmý beryllus, devátý topazion, desátý chryzoprassus, jedenáctý hyacint, dvanáctý ametyst.
೨೦ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲಸ್ಫಟಿಕ,
21 Dvanácte pak bran dvanácte perel jest, a jedna každá brána jest z jedné perly; a rynk města zlato čisté jako sklo, kteréž se naskrze prohlédnouti může.
೨೧ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಶುದ್ಧವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.
22 Ale chrámu jsem v něm neviděl; nebo Pán Bůh všemohoucí chrám jeho jest a Beránek.
೨೨ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.
23 A to město nepotřebuje slunce ani měsíce, aby svítily v něm; nebo sláva Boží je osvěcuje, a svíce jeho jest Beránek.
೨೩ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.
24 A národové lidí k spasení přišlých, v světle jeho procházeti se budou, a králové zemští přenesou slávu a čest svou do něho.
೨೪ಅದರ ಬೆಳಕಿನಿಂದ ಜನಾಂಗಗಳವರು ನಡೆದಾಡುವರು. ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು.
25 A brány jeho nebudou zavírány ve dne; noci zajisté tam nebude.
೨೫ಅದರ ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. ಅಲ್ಲಿ ರಾತ್ರಿಯಂತೂ ಇಲ್ಲವೇ ಇಲ್ಲ.
26 A snesou do něho slávu a čest národů.
೨೬ಜನಾಂಗಗಳ ವೈಭವವೂ ಗೌರವವೂ ಅಲ್ಲಿಗೆ ತರಲ್ಪಡುವವು.
27 A nevejdeť do něho nic poskvrňujícího, anebo působícího ohyzdnost a lež, než toliko ti, kteříž napsaní jsou v knihách života Beránkova.
೨೭ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.