< Zjevení Janovo 4 >
1 Potom jsem viděl, a aj, dveře otevříny byly v nebi, a hlas první, kterýž jsem byl slyšel jako trouby, an mluví se mnou, řkoucí: Vstup sem, a ukážiť, co se má díti potom.
೧ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, “ಇಲ್ಲಿಗೆ ಏರಿ ಬಾ, ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು.
2 A hned byl jsem u vytržení ducha, a aj, trůn postaven byl na nebi, a na trůnu jeden seděl.
೨ಕೂಡಲೆ ನಾನು ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು.
3 A ten, jenž seděl, podoben byl obličejem kameni jaspidu a sardiovi; a vůkol toho trůnu byla duha, na pohledění podobná smaragdu.
೩ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು.
4 A okolo toho trůnu bylo stolic čtyřmecítma, a na těch stolicích viděl jsem čtyřmecítma starců sedících, oblečených v roucha bílá. A měli na hlavách svých koruny zlaté.
೪ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.
5 A z toho trůnu pocházelo blýskání, a hromobití, a hlasové. A sedm lamp ohnivých hořících před trůnem, jenž jsou sedm Duchů Božích.
೫ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.
6 A před trůnem bylo moře sklené, podobné křišťálu, a uprostřed trůnu a vůkol trůnu čtvero zvířat, plných očí zpředu i zzadu.
೬ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
7 A zvíře první podobné bylo lvu, a druhé zvíře podobné teleti, a třetí zvíře mající tvárnost jako člověk, a čtvrté zvíře podobné orlu letícímu.
೭ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು, ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು.
8 A jedno každé z těch čtyř zvířat mělo šest křídel okolo, a vnitř plná byla očí, a neměla odpočinutí dnem i nocí, říkajíce: Svatý, svatý, svatý Pán Bůh všemohoucí, kterýž byl, a jest, i přijíti má.
೮ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.
9 A když ta zvířata vzdávala slávu a čest i díků činění sedícímu na trůnu, živému na věky věků, (aiōn )
೯ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ, (aiōn )
10 Padlo těch čtyřmecítma starců před obličejem sedícího na trůnu, a klanělo se živému na věky věků, a metali koruny své před trůnem, řkouce: (aiōn )
೧೦ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು. (aiōn )
11 Hoden jsi, Pane, přijíti slávu, a čest, i moc; nebo ty jsi stvořil všecky věci, a pro vůli tvou trvají, i stvořeny jsou.
೧೧