< Zjevení Janovo 1 >

1 Zjevení Ježíše Krista, kteréž dal jemu Bůh, aby ukázal služebníkům svým, které věci měly by se díti brzo, on pak zjevil, poslav je skrze anděla svého, služebníku svému Janovi,
ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.
2 Kterýž osvědčil slovo Boží a svědectví Jezukristovo, a cožkoli viděl.
ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು.
3 Blahoslavený, kdož čte, i ti, kteříž slyší slova proroctví tohoto a ostříhají toho, což napsáno jest v něm; nebo čas blízko jest.
ಈ ಪ್ರವಾದನಾ ವಾಕ್ಯಗಳನ್ನು ಓದುವವನೂ, ಕೇಳುವವರೂ ಮತ್ತು ಇದರಲ್ಲಿ ಬರೆದಿರುವುದನ್ನು ಕೈಕೊಂಡು ನಡೆಯುವವರೂ ಧನ್ಯರು. ಏಕೆಂದರೆ ಅವು ನೆರವೇರುವ ಕಾಲವು ಸಮೀಪವಾಗಿದೆ.
4 Jan sedmi církvím, kteréž jsou v Azii: Milost vám a pokoj od toho, Jenž jest, a Kterýž byl, a Kterýž přijíti má, a od sedmi Duchů, kteříž před obličejem trůnu jeho jsou,
ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ
5 A od Ježíše Krista, jenž jest svědek věrný, ten prvorozený z mrtvých, a kníže králů země, kterýžto zamiloval nás a umyl nás od hříchů našich krví svou,
ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,
6 A učinil nás krále a kněží Bohu a Otci svému, jemužto buď sláva a moc na věky věků. Amen. (aiōn g165)
ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್. (aiōn g165)
7 Aj, béře se s oblaky, a uzříť jej všeliké oko, i ti, kteříž ho bodli; a budou plakati pro něj všecka pokolení země, jistě, Amen.
ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.
8 Jáť jsem Alfa i Omega, počátek i konec, praví Pán, Kterýž jest, a Kterýž byl, a Kterýž přijíti má, ten všemohoucí.
“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.
9 Já Jan, kterýž jsem i bratr váš, i spoluúčastník v soužení, i v království, i v trpělivosti Ježíše Krista, byl jsem na ostrově, kterýž slove Patmos, pro slovo Boží a svědectví Ježíše Krista.
ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.
10 A byl jsem u vytržení ducha v den Páně, i uslyšel jsem za sebou hlas veliký jako trouby,
೧೦ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.
11 An mi dí: Já jsem Alfa i Omega, ten první i poslední, a řekl: Co vidíš, piš do knihy, a pošli sborům, kteříž jsou v Azii, do Efezu, a do Smyrny, a do Pergamu, a do Tyatiru, a do Sardy, a do Filadelfie, i do Laodicie.
೧೧ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.
12 I obrátil jsem se, abych viděl ten hlas, kterýž mluvil se mnou, a obrátiv se, uzřel jsem sedm svícnů zlatých,
೧೨ನನ್ನ ಸಂಗಡ ಮಾತನಾಡುತ್ತಿದ್ದ ಶಬ್ದವು ಯಾರದೆಂದು ನೋಡುವುದಕ್ಕೆ ನಾನು ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ
13 A uprostřed sedmi svícnů podobného Synu člověka, oblečeného v dlouhé roucho a přepásaného na prsech pasem zlatým.
೧೩ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
14 Hlava pak jeho a vlasové byli bílí, jako bílá vlna, jako sníh, a oči jeho jako plamen ohně.
೧೪ಆತನ ತಲೆಯ ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತೆಯೂ,
15 Nohy pak jeho podobné mosazi, jako v peci hořící; a hlas jeho jako hlas vod mnohých.
೧೫ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ, ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.
16 A měl v pravé ruce své sedm hvězd, a z úst jeho meč s obou stran ostrý vycházel; a tvář jeho jako slunce, když jasně svítí.
೧೬ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.
17 A jakž jsem jej uzřel, padl jsem k nohám jeho, jako mrtvý. I položil ruku svou pravou na mne, řka ke mně: Neboj se. Já jsem ten první i poslední,
೧೭ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,
18 A živý, ješto jsem byl mrtvý, a aj, živý jsem na věky věků. Amen. A mám klíče pekla i smrti. (aiōn g165, Hadēs g86)
೧೮ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ. (aiōn g165, Hadēs g86)
19 Napiš ty věci, kteréž jsi viděl, a kteréž jsou, a kteréž se mají díti potom.
೧೯ಆದ್ದರಿಂದನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ.
20 Tajemství sedmi hvězd, kteréž jsi viděl v pravici mé, a sedm svícnů zlatých, jest toto: Sedm hvězd jsou andělé sedmi církví; a sedm svícnů, kteréžs viděl, jest těch sedm církví.
೨೦ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳದೂತರು, ಆ ಏಳು ದೀಪಸ್ತಂಭಗಳು ಅಂದರೆಆ ಏಳು ಸಭೆಗಳು.”

< Zjevení Janovo 1 >