< Římanům 10 >
1 Bratří, příchylnost zajisté s zvláštní libostí srdce mého jestiť k Izraelovi, i modlitba za něj k Bohu, aby spasen byl.
೧ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.
2 Neboť jim svědectví vydávám, žeť horlivost Boží mají, ale ne podle umění.
೨ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.
3 Nebo neznajíce Boží spravedlnosti, a svou vlastní spravedlnost hledajíce vystaviti, spravedlnosti Boží nebyli poddáni.
೩ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
4 Nebo konec Zákona jest Kristus k ospravedlnění všelikému věřícímu.
೪ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.
5 Nebo Mojžíš píše o spravedlnosti, kteráž jest z Zákona, pravě: Který by koli člověk činil ty věci, živ bude v nich.
೫ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.
6 Ta pak spravedlnost, kteráž jest z víry, takto praví: Neříkej v srdci svém: Kdo vstoupí na nebe? To jest Krista s výsosti svésti.
೬ಆದರೆ ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. “‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’
7 Aneb kdo sstoupí do propasti? To jest Krista z mrtvých vzbuditi. (Abyssos )
೭ಎಂದಾಗಲಿ ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು? ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.’” ಆದರೆ ಅದು ಏನನ್ನು ಹೇಳುತ್ತದೆ. (Abyssos )
8 Ale co dí spravedlnost z víry? Blízko tebe jestiť slovo, v ústech tvých a v srdci tvém. A toť jest slovo to víry, kteréž kážeme,
೮“ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
9 Totiž, vyznáš-li ústy svými Pána Ježíše a srdcem svým uvěříš-li, že jej Bůh vzkřísil z mrtvých, spasen budeš.
೯ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.
10 Nebo srdcem se věří k spravedlnosti, ale ústy vyznání děje se k spasení.
೧೦ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.
11 Nebo dí Písmo: Všeliký, kdož věří v něj, nebude zahanben.
೧೧“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.
12 Neníť zajisté rozdílu mezi Židem a Řekem; nebo tentýž Pán všech, bohatý jest ke všem vzývajícím jej.
೧೨ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.
13 Každý zajisté, kdožkoli vzýval by jméno Páně, spasen bude.
೧೩ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.
14 Ale kterak budou vzývati toho, v kteréhož neuvěřili? A kterak uvěří tomu, o němž neslyšeli? A kterak uslyší bez kazatele?
೧೪ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?
15 A kterak kázati budou, jestliže nebudou posláni? Jakož psáno jest: Aj, jak krásné nohy zvěstujících pokoj, zvěstujících dobré věci.
೧೫ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.
16 Ale ne všickni uposlechli evangelium. Nebo Izaiáš praví: Pane, kdo uvěřil kázání našemu?
೧೬ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.
17 Tedy víra z slyšení, a slyšení skrze slovo Boží.
೧೭ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.
18 Ale pravímť: Zdaliž jsou neslyšeli? Anobrž po vší zemi rozšel se zvuk jejich a až do končin okršlku země slova jejich.
೧೮ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”
19 Ale pravím: Zdaliž nepoznal Izrael toho? Ano první z nich Mojžíš řekl: Já k závisti vás přivedu skrze národ ten, kteréhož nemáte za lid můj; skrze lid nemoudrý k hněvu popudím vás.
೧೯ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, “ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಅಸೂಯೆ ಹುಟ್ಟುವಂತೆ ಪ್ರೆರೇಪಿಸುತ್ತೇನೆ; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ.
20 A Izaiáš směle dí: Nalezen jsem od těch, kteříž mne nehledali; zjeven jsem těm, kteříž se na mne neptali.
೨೦ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.
21 Ale proti lidu Izraelskému dí: Přes celý den roztahoval jsem ruce své k lidu nepovolnému a protivnému.
೨೧ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ.