< Titovi 2 >
1 Ty pak mluv, což sluší na zdravé učení.
೧ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು.
2 Starci ať jsou střízliví, vážní, opatrní, zdraví u víře, v lásce, v snášelivosti.
೨ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು.
3 Tak také i staré ženy ať chodí zbožně, v oděvu příslušném a ať nejsou převrhlé, ani mnoho vína pijící, dobrým věcem učící,
೩ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು.
4 Aby mladice vyučovaly, kterak by muže své i dítky řádně milovaly,
೪ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ
5 A byly šlechetné, čistotné, netoulavé, dobrotivé, mužům svým poddané, aby nebylo dáno v porouhání slovo Boží.
೫ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.
6 Takž i mládenců napomínej k středmosti,
೬ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು.
7 Ve všech věcech sebe samého vydávaje za příklad dobrých skutků, a zachovávaje v učení celost, vážnost,
೭ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;
8 Slovo zdravé bez úhony, aby ten, jenž by se protivil, zastyděti se musil, nemaje co zlého mluviti o vás.
೮ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.
9 Služebníky uč, ať jsou poddáni pánům svým, ve všem jim se líbíce, neodmlouvajíce,
೯ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ,
10 Neokrádajíce, ale ve všem věrnosti pravé dokazujíce, aby učení Spasitele našeho Boha ve všem ozdobovali.
೧೦ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.
11 Zjevilať se jest zajisté ta milost Boží spasitelná všechněm lidem,
೧೧ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;
12 Vyučující nás, abychom odřeknouce se bezbožnosti a světských žádostí, střízlivě, a spravedlivě, a zbožně živi byli na tomto světě, (aiōn )
೧೨ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು, (aiōn )
13 Očekávajíce té blahoslavené naděje a příští slávy velikého Boha a Spasitele našeho Jezukrista,
೧೩ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.
14 Kterýž dal sebe samého za nás, aby nás vykoupil od všeliké nepravosti, a očistil sobě samému lid zvláštní, horlivě následovný dobrých skutků.
೧೪ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
15 Toto mluv, a napomínej, a tresci mocně. Žádný tebou nepohrzej.
೧೫ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.