< Zachariáš 10 >
1 Žádejte od Hospodina deště v čas příhodný, i způsobí Hospodin pršku, a dá vám déšť hojný, a každému bylinu na poli.
೧ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.
2 Nebo obrazové mluví marnost, a věšťci prorokují faleš, a sny marné mluví, marností potěšují. Protož šli jako stádo, ztrestáni jsou, proto že žádného nebylo pastýře.
೨ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.
3 Proti pastýřům takovým zažžen jest hněv můj, a kozly ty trestati budu, ale stádo své, dům Judský, navštíví Hospodin zástupů, a učiní je jako koně ozdobného k boji.
೩ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ. ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.
4 Od něho úhel, od něho hřeb, od něho lučiště válečné, od něho též pojde všeliký úředník.
೪ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.
5 A budou podobni rekům, pošlapávajíce do bláta na ulicích v boji, když bojovati budou; nebo Hospodin s nimi, a zahanbí ty, kteříž jedou na koních.
೫ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.
6 Posilním zajisté domu Judova, a dům Jozefův vysvobodím, a bezpečně je osadím. Nebo lítost mám nad nimi, i budou, jako bych jich nezahnal; nebo já jsem Hospodin Bůh jejich, a vyslyším je.
೬ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು.
7 I budou Efraimští jako silný rek, a veseliti se bude srdce jejich jako od vína. I jejich synové vidouce to, rozveselí se, a zpléše srdce jejich v Hospodinu.
೭ಎಫ್ರಾಯೀಮ್ಯರು ಶೂರರಂತಿರುವರು, ದ್ರಾಕ್ಷಾರಸ ಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವುದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವುದು.
8 Šeptati jim budu, a tak je shromáždím; nebo je vykoupím, a rozmnoženi budou, jakož rozmnoženi byli.
೮ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು. ಅವರನ್ನು ವಿಮೋಚಿಸಿದೆನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು.
9 Nadto rozseji je mezi národy, aby na místech dalekých rozpomínali se na mne, a živi jsouce s syny svými, navrátili se.
೯ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.
10 A tak je zase přivedu z země Egyptské, i z Assyrské shromáždím je, a do země Galád a k Libánu přivedu je, ale nepostačí jim.
೧೦ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರೆದುತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದ್, ಲೆಬನೋನುಗಳ ಪ್ರಾಂತ್ಯಕ್ಕೆ ಬರಮಾಡುವೆನು; ಅವರಿಗೆ ಸಾಕಾಗುವಷ್ಟು ಸ್ಥಳ ಸಿಕ್ಕದು.
11 Protož pro těsnost přejde přes moře, a prorazí na moři vlnobití, i vyschnou všecky hlubiny řeky, budeť snížena i pýcha Assyrie, a berla Egypta odjata bude.
೧೧ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು.
12 A posilním jich v Hospodinu, aby ve jménu jeho ustavičně chodili, praví Hospodin.
೧೨ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.