< Zachariáš 9 >

1 Břímě slova Hospodinova proti zemi, kteráž jest v vůkolí tvém, a Damašek bude odpočinutí jeho. Nebo k Hospodinu zřetel člověka i všech pokolení Izraelských.
ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ. ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ; ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ,
2 Ano i do Emat dosáhne, do Týru i Sidonu, ačkoli jest moudrý velmi.
ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹಳ ಜಾಣರು ಎಂದು ಕೊಚ್ಚಿಕೊಂಡಿರುವ ತೂರ್, ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.
3 Vystavěltě sobě Týrus pevnost, a nashromáždil stříbra jako prachu, a ryzího zlata jako bláta na ulicích.
ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ, ಬಂಗಾರವನ್ನು ಬೀದಿಯ ಬದಿಯ ಕಸದ ರಾಶಿಯಂತೆ ಮಾಡಿಕೊಂಡಿದೆ.
4 Aj, Pán vyžene jej, a vrazí do moře sílu jeho, i on od ohně sežrán bude.
ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರಮಿಸಿ ಪೌಳಿಗೋಡೆಯನ್ನು ಸಮುದ್ರದೊಳಗೆ ಹೊಡೆದುಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವುದು.
5 Vida to Aškalon, báti se bude, i Gáza velikou bolest míti bude, též i Akaron, proto že jej zahanbilo očekávání jeho. I zahyne král z Gázy, a Aškalon neosedí.
ಅಷ್ಕೆಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವುದು;
6 A bude bydliti pankhart v Azotu, a tak vypléním pýchu Filistinských.
ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು; ಹೀಗೆ ಫಿಲಿಷ್ಟಿಯದ ಗರ್ವವನ್ನು ಭಂಗಪಡಿಸುವೆನು.
7 Když pak odejmu vraždu jednoho každého od úst jeho, a ohavnosti jeho od zubů jeho, připojen bude také i on Bohu našemu, aby byl jako vývoda v Judstvu, a Akaron jako Jebuzejský.
ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಮೀಸಲಾದ ಜನರಾಗಿ ಉಳಿಯುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.
8 A položím se vojensky u domu svého pro vojsko a pro ty, kteříž tam i zase jdou; aniž půjde skrze ně více násilník, proto že se tak nyní vidí očím mým.
ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.
9 Plésej velice, dcerko Sionská, prokřikuj, dcerko Jeruzalémská. Aj, král tvůj přijde tobě spravedlivý a spasení plný, chudý a sedící na oslu, totiž na oslátku mladém.
ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
10 Nebo vypléním vozy z Efraima a koně z Jeruzaléma, a vypléněna budou lučiště válečná; nadto rozhlásí pokoj národům, a panování jeho od moře až k moři, a od řeky až do končin země.
೧೦ನಾನು ಎಫ್ರಾಯೀಮಿನ ರಥಬಲವನ್ನೂ, ಯೆರೂಸಲೇಮಿನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವುದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವುದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಹರಡಿಕೊಂಡಿರುವುದು.
11 Anobrž ty, pro krev smlouvy své vypustil jsem vězně tvé z jámy, v níž není žádné vody.
೧೧ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.
12 Navraťež se k ohradě, ó vězňové v naději postavení. A tak v ten den, jakžť oznamuji, dvojnásobně nahradím tobě,
೧೨ನಿರೀಕ್ಷೆ ಹೊಂದಿದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು ಸುಖವನ್ನು ದಯಪಾಲಿಸುವೆನೆಂದು ಈಗಲೂ ಪ್ರಕಟಿಸುತ್ತೇನೆ.
13 Když sobě napnu Judu a lučiště naplním Efraimem, a vzbudím syny tvé, ó Sione, proti synům tvým, ó Javane, a nastrojím tě jako meč udatného.
೧೩ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ. ಅದರಲ್ಲಿ ಎಫ್ರಾಯೀಮ್ ಎಂಬ ಬಾಣವನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು.
14 Nebo Hospodin proti nim se ukáže, a vynikne jako blesk střela jeho. Panovník, pravím, Hospodin trubou troubiti bude, a pobéře se s vichřicemi poledními.
೧೪ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು.
15 Hospodin zástupů chrániti bude lidu svého, aby zmocníce se kamením z praku, jedli a pili, prokřikujíce jako od vína, a naplní jakož číši tak i rohy oltáře.
೧೫ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.
16 A tak je vysvobodí v ten den Hospodin Bůh jejich, jakožto stádce lid svůj, a vystaveno bude kamení pěkně tesané místo korouhví v zemi jeho.
೧೬ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು.
17 Nebo aj, jaké blahoslavenství jeho, a jak veliká okrasa jeho! Obilé mládence a mest panny učiní mluvné.
೧೭ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.

< Zachariáš 9 >