< Daniel 7 >
1 I Belsazar, Kongen af Babels, første Aar saa Daniel en Drøm og sit Hoveds Syner paa sit Leje; da skrev han Drømmen op, Hovedindholdet fremsatte han.
೧ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು.
2 Daniel fortalte og sagde: Jeg saa i mit Syn om Natten, og se, de fire Vejr under Himmelen brøde frem paa det store Hav.
೨ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.
3 Og der opsteg fire store Dyr af Havet, det ene anderledes end det andet.
೩ಒಂದಕ್ಕಿಂತ ಒಂದು ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಸಾಗರದೊಳಗಿಂದ ಬಂದವು.
4 Det første var som en Løve, og det havde Vinger som en Ørn; jeg saa til, indtil dets Vinger bleve afrevne, og det blev rettet i Vejret fra Jorden og rejst op paa Fødderne som et Menneske, og det blev givet et Menneskehjerte.
೪ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲ್ಪಟ್ಟಿತು.
5 Og se, et andet Dyr, næstefter, ligt en Bjørn, og det rejste sig til den ene Side, og det havde tre Ribben i sin Mund, imellem sine Tænder; og man sagde saaledes til det: Staa op, æd meget Kød!
೫ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.
6 Derefter saa jeg, og se, et andet Dyr, ligt en Parder, og det havde fire Vinger som af en Fugl paa sin Ryg; og dette. Dyr havde fire Hoveder, og der blev givet det Magt.
೬ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡಲ್ಪಟ್ಟಿತು.
7 Derefter saa jeg i Nattesynerne og se, et fjerde Dyr, frygteligt og forfærdeligt og meget stærkt, og det havde store Jerntænder, det aad og knuste og nedtraadte det overblevne med sine Fødder; og det var anderledes end alle de Dyr, som havde været før det, og det havde ti Horn.
೭ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.
8 Jeg agtede nøje paa Hornene, og se, et andet lidet Horn skød op imellem dem, og tre af de forrige Horn bleve oprykkede for det; og se, der var Øjne som Menneskeøjne paa dette Horn, og en Mund, som talte store Ting.
೮ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.
9 Jeg blev ved at se, indtil Stole bleve satte frem, og den Gamle af Dage satte sig; hans Klæder vare hvide som Sne og Haaret paa hans Hoved som ren Uld, hans Stol var Ildsluer, Hjulene derpaa brøndende Ild.
೯“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.
10 En Strøm af Ild brød frem og gik ud fra ham; tusinde Gange tusinde tjente ham, og ti Tusinde Gange ti Tusinde stode for ham; Retten blev sat og Bøgerne opladte.
೧೦ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.
11 Da saa jeg til, fordi man havde hørt de store Ord, som Hornet havde talt; jeg saa til, indtil Dyret blev ihjelslaget og dets Legeme lagt øde og givet hen til at brændes i Ilden.
೧೧ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿ ಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು, ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.
12 Og hvad de øvrige Dyr angaar, var deres Magt forbi, og dem havde det været givet, hvor længe de skulde leve til Tid og Stund.
೧೨ಉಳಿದ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವವನ್ನು ಉಳಿಸಿದರು.
13 Jeg vedblev at se i Synerne om Natten, og se, med Himmelens Skyer kom der en som en Menneskens Søn, og han kom lige hen til den Gamle af Dage, og blev ført frem for ham.
೧೩ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.
14 Og ham blev givet Magt og Ære og Rige, og alle Folk, Stammer og Tungemaal skulde tjene ham; hans Herredømme er et evigt Herredømme, som ikke forgaar, og hans Rige et uforkrænkeligt.
೧೪ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.
15 For mig, Daniel, blev min Aand i det legemlige Hylster bedrøvet, og mit Hoveds Syner forfærdede mig.
೧೫“ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು.
16 Jeg gik frem til een af dem, som stode der, for at søge Vished af ham om alt dette; og han sagde mig det og kundgjorde mig Udtydningen paa Tingene.
೧೬ನಾನು ಹತ್ತಿರ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸತ್ಯಾರ್ಥವೇನೆಂದು ವಿಚಾರಿಸಲು ಅವನು ನನಗೆ,
17 Disse store Dyr, af hvilke der er fire, betyde, at fire Konger skulle opstaa af Jorden.
೧೭‘ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರದೊಳಗಿಂದ ಏರತಕ್ಕ ನಾಲ್ಕು ರಾಜ್ಯಗಳು.
18 Men den Højestes hellige skulle modtage Riget og besidde Riget evindelig, ja, indtil Evighedernes Evighed.
೧೮ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.
19 Da vilde jeg gerne have Vished angaaende det fjerde Dyr, som var anderledes end alle de andre, meget forfærdeligt, havde Jerntænder og Kobberkløer, aad, knuste og nedtraadte det overblevne med sine Fødder,
೧೯ಆ ಮೇಲೆ ಕಬ್ಬಿಣದ ಹಲ್ಲು, ತಾಮ್ರದ ಉಗುರುಳ್ಳ ಮೃಗವು ಕೆಲವನ್ನು ನುಂಗಿ ಕೆಲವನ್ನು ಚೂರುಚೂರು ಮಾಡಿ ಉಳಿದದ್ದನ್ನು ಕಾಲುಗಳಿಂದ ತುಳಿದು, ಇತರ ಮೃಗಗಳಿಗಿಂತ ವಿಲಕ್ಷಣವಾಗಿ ಅತಿ ಭಯಂಕರವಾಗಿತ್ತು.
20 og angaaende de ti Horn, som vare paa dets Hoved, samt det andet, som skød op, og for hvilke tre faldt; og dette var det Horn, som havde Øjne og en Mund, der talte store Ting, og hvis Udseende var større end de andres ved Siden af det.
೨೦ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ
21 Jeg havde set, at samme Horn førte Krig imod de hellige og fik Overhaand over dem,
೨೧ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ,
22 indtil den Gamle af Dage kom, og Retten blev tilkendt den Højestes hellige, og Tiden kom, da de hellige toge Riget i Besiddelse.
೨೨ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.”
23 Han sagde saaledes: Det fjerde Dyr betyder, at der skal være et fjerde Rige paa Jorden, som skal blive anderledes end alle Rigerne; og det skal opæde al Jorden og søndertræde den og knuse den.
೨೩ಆಗ ಅವನು ನನಗೆ, “ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ಉಳಿದ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವುದು.
24 Men de ti Horn betyde, at der af samme Rige skal opstaa ti Konger; og en anden skal opstaa efter dem, og han skal være anderledes end de foregaaende og nedtrykke tre Konger.
೨೪ಆ ಹತ್ತು ಕೊಂಬುಗಳ ವಿಷಯವೇನೆಂದರೆ ಆ ರಾಜ್ಯದಲ್ಲಿ ಹತ್ತು ಮಂದಿ ಅರಸರು ಉಂಟಾಗುವರು, ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮೊದಲಿನ ಅರಸರಿಗಿಂತ ವಿಲಕ್ಷಣನಾಗಿ ಮೂವರು ಅರಸರನ್ನು ಸದೆಬಡೆಯುವನು.
25 Og han skal tale Ord imod den Højeste og undertrykke den Højestes hellige og tænke paa at forandre Tider og Lov, og de skulle gives i hans Haand indtil een Tid og Tider og en halv Tid.
೨೫ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.
26 Derefter skal Retten sættes, og man skal fratage ham hans Magt for at ødelægge og tilintetgøre den indtil Enden.
೨೬ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು.
27 Men Riget og Herredømmet og Rigernes Magt under al Himmelen skal gives til et Folk af den Højestes hellige; hans Rige er et evigt Rige, og alle Herredømmer skulle tjene og lyde ham.
೨೭ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.
28 Hermed var Ordet til Ende. Mig, Daniel, forvirrede mine Tanker meget, og jeg Skiftede Farve; men jeg bevarede Ordet i mit Hjerte.
೨೮ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.