< 1 Mosebog 29 >
1 Og Jakob løftede sine Fødder og gik til det Folks Land i Østen.
ಆಗ ಯಾಕೋಬನು ಪ್ರಯಾಣವನ್ನು ಮುಂದುವರಿಸುತ್ತಾ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.
2 Og han saa og se, der var en Brønd paa Marken, og se, der vare tre Faarehjorde, som laa ved den; thi man skulde vande Hjorden af den samme Brønd, og Stenen over Hullet paa Brønden var stor.
ಅವನು ಕಣ್ಣೆತ್ತಿ ನೋಡಲಾಗಿ, ಹೊಲದಲ್ಲಿ ಒಂದು ಬಾವಿ ಇತ್ತು. ಅದರ ಸಮೀಪದಲ್ಲಿ ಮೂರು ಕುರಿಮಂದೆಗಳು ಮಲಗಿದ್ದವು. ಏಕೆಂದರೆ ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲು ಇತ್ತು.
3 Og derhen skulde alle Hjordene sankes, og Stenen væltes fra Hullet paa Brønden, og Faarene vandes, og Stenen igen lægges over Hullet paa Brønden, paa sit Sted.
ಅಲ್ಲಿ ಮಂದೆಗಳೆಲ್ಲಾ ಕೂಡಿದಾಗ, ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ, ಕುರಿಗಳಿಗೆ ನೀರನ್ನು ಕುಡಿಸಿ, ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.
4 Og Jakob sagde til dem: Mine Brødre, hvorfra ere I? og de sagde: Fra Karan ere vi.
ಯಾಕೋಬನು ಅವರಿಗೆ, “ನನ್ನ ಸಹೋದರರೇ, ನೀವು ಎಲ್ಲಿಯವರು?” ಎಂದಾಗ. ಅವರು, “ನಾವು ಹಾರಾನಿನವರು,” ಎಂದರು.
5 Og han sagde til dem: Kende I Laban, Nakors Søn? og de sagde: Vi kende ham.
ಅದಕ್ಕವನು ಅವರಿಗೆ, “ನಾಹೋರನ ಮೊಮ್ಮಗ ಲಾಬಾನನನ್ನು ನೀವು ಬಲ್ಲಿರೋ?” ಎಂದಾಗ. ಅವರು, “ನಾವು ಅವನನ್ನು ಬಲ್ಲೆವು,” ಎಂದರು.
6 Og han sagde til dem: Gaar det ham vel? og de sagde: Vel! og se, Rakel, hans Datter, kommer med Faarene.
ಯಾಕೋಬನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಿದಾಗ, ಆಗ ಅವರು, “ಕ್ಷೇಮವಾಗಿದ್ದಾನೆ, ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ,” ಎಂದರು.
7 Da sagde han: Se, det er endnu højt paa Dagen, det er ikke Tid, at Kvæget samles; vander Faarene og gaar, vogter dem!
ಯಾಕೋಬನು ಅವರಿಗೆ, “ಇನ್ನೂ ಬಹಳ ಹೊತ್ತು ಇದೆ. ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ. ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ,” ಎಂದನು.
8 Og de sagde: Vi kunne ikke, førend alle Hjordene sankes, og man vælter Stenen fra Hullet paa Brønden, og da vande vi Faarene.
ಅದಕ್ಕೆ ಅವರು, “ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಉರುಳಿಸುತ್ತಾರೆ. ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ,” ಎಂದರು.
9 Medens han endnu talede med dem, da kom Rakel med Faarene, som vare hendes Faders; thi hun vogtede.
ಯಾಕೋಬನು ಇನ್ನೂ ಅವರ ಸಂಗಡ ಮಾತನಾಡುತ್ತಿದ್ದಾಗ, ಕುರಿಗಳನ್ನು ಮೇಯಿಸುವ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.
10 Og det skete, der Jakob saa Rakel, sin Morbroder Labans Datter, og Labans, sin Morbroders, Faar, da gik Jakob til og væltede Stenen fra Hullet paa Brønden og vandede Labans, sin Morbroders, Faar.
ಯಾಕೋಬನು ತನ್ನ ತಾಯಿಯ ಸಹೋದರ ಲಾಬಾನನ ಮಗಳಾದ ರಾಹೇಲಳನ್ನೂ, ಅವಳ ಕುರಿಗಳನ್ನೂ ನೋಡಿದಾಗ, ಯಾಕೋಬನು ಹತ್ತಿರ ಬಂದು, ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ, ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.
11 Og Jakob kyssede Rakel og opløftede sin Røst og græd.
ಆಗ ಯಾಕೋಬನು ರಾಹೇಲಳಿಗೆ ಮುದ್ದಿಟ್ಟು, ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.
12 Og Jakob sagde Rakel, at han var hendes Faders Broder, og at han var Rebekkas Søn; saa løb hun og forkyndte sin Fader det.
ಯಾಕೋಬನು ರಾಹೇಲಳಿಗೆ, ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.
13 Og det skete, der Laban hørte den Tidende om Jakob, sin Søstersøn, da løb han mod ham og tog ham i Favn og kyssede ham og ledte ham ind i sit Hus; da fortalte han Laban alle disse Ting.
ಲಾಬಾನನು ತನ್ನ ಸಹೋದರಿಯ ಮಗ ಯಾಕೋಬನ ಸುದ್ದಿಯನ್ನು ಕೇಳಿದಾಗ, ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
14 Da sagde Laban til ham: Sandelig, du er mit Ben og mit Kød; og han blev hos ham en Maanedstid.
ಆಗ ಲಾಬಾನನು ಅವನಿಗೆ, “ನಿಶ್ಚಯವಾಗಿ ನೀನು ನನ್ನ ರಕ್ತಸಂಬಂಧಿಯಾಗಿದ್ದೀ,” ಎಂದನು. ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
15 Og Laban sagde til Jakob: Fordi du er min Broder, skulde du derfor tjene mig for intet? sig mig, hvad din Løn skal være.
ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಕನಾಗಿರುವುದರಿಂದ ಸುಮ್ಮನೆ ನನಗೆ ಸೇವೆ ಮಾಡಬೇಕೆ? ನಿನ್ನ ಸಂಬಳ ಎಷ್ಟೆಂಬುದನ್ನು ನನಗೆ ಹೇಳು?” ಎಂದನು.
16 Og Laban havde to Døtre: Den ældstes Navn var Lea, og den yngstes Navn Rakel.
ಲಾಬಾನನಿಗೆ ಇಬ್ಬರು ಪುತ್ರಿಯರಿದ್ದರು. ದೊಡ್ಡವಳ ಹೆಸರು ಲೇಯಳು, ಚಿಕ್ಕವಳ ಹೆಸರು ರಾಹೇಲಳು.
17 Og Lea havde svage Øjne; men Rakel var dejlig af Skikkelse og dejlig af Anseelse.
ಲೇಯಳ ಕಣ್ಣುಗಳು ಕಾಂತಿಹೀನವಾಗಿದ್ದವು. ಆದರೆ ರಾಹೇಲಳು ಸುಂದರಿಯೂ ರೂಪವತಿಯೂ ಆಗಿದ್ದಳು.
18 Og Jakob elskede Rakel og sagde: Jeg vil tjene dig syv Aar for Rakel, din yngste Datter.
ಹೀಗಿರುವುದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಾನು ನಿನ್ನ ಕಿರಿ ಮಗಳಾಗಿರುವ ರಾಹೇಲಳಿಗೋಸ್ಕರ ನಿಮ್ಮಲ್ಲಿ ಏಳು ವರ್ಷ ಸೇವೆ ಮಾಡುತ್ತೇನೆ,” ಎಂದನು.
19 Og Laban sagde: Det er bedre, at jeg giver hende til dig, end at jeg giver hende til en anden Mand, bliv hos mig!
ಅದಕ್ಕೆ ಲಾಬಾನನು, “ಅವಳನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ, ನಿನಗೆ ಕೊಡುವುದು ಒಳ್ಳೆಯದು. ಆದ್ದರಿಂದ ನನ್ನ ಸಂಗಡವಿರು,” ಎಂದನು.
20 Saa tjente Jakob for Rakel syv Aar, og de syntes ham at være faa Dage, fordi han havde Kærlighed til hende.
ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರ್ಷಗಳು ಅವನಿಗೆ ಸ್ವಲ್ಪದಿನಗಳಾಗಿ ತೋರಿದವು.
21 Og Jakob sagde til Laban: Giv mig min Hustru; thi min Tid er fuldkommet, og jeg vil gaa ind til hende.
ತರುವಾಯ ಯಾಕೋಬನು ಲಾಬಾನನಿಗೆ, “ನನ್ನ ಸೇವಾ ದಿನಗಳು ಪೂರ್ತಿಯಾದವು. ನಾನು ನನ್ನ ಹೆಂಡತಿಯೊಂದಿಗೆ ಬಾಳುವಂತೆ ಆಕೆಯನ್ನು ನನಗೆ ಕೊಡು,” ಎಂದನು.
22 Saa bød Laban alle Mænd paa det Sted tilsammen og gjorde et Gæstebud.
ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣ ಮಾಡಿಸಿದನು.
23 Og det skete om Aftenen, at han tog Lea sin Datter og ledte hende ind til ham, og han gik ind til hende.
ರಾತ್ರಿಯಾದಾಗ ಅವನು ತನ್ನ ಮಗಳಾದ ಲೇಯಳನ್ನು ಯಾಕೋಬನ ಬಳಿಗೆ ಕರೆತಂದನು. ಆಗ ಅವನು ಲೇಯಳ ಬಳಿಗೆ ಬಂದನು.
24 Og Laban gav hende Silpa, sin Tjenestepige, til Pige for Lea, sin Datter.
ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಳನ್ನು, ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.
25 Og det skete om Morgenen, se, da var det Lea; og han sagde til Laban: Hvi gjorde du dette imod mig? har jeg ej tjent hos dig for Rakel? og hvi har du bedraget mig?
ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಯಾಕೋಬನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದೆ? ರಾಹೇಲಳಿಗೋಸ್ಕರ ನಾನು ನಿನಗೆ ಸೇವೆಮಾಡಿದೆನಲ್ಲಾ? ಏಕೆ ನನಗೆ ಮೋಸಮಾಡಿದೆ?” ಎಂದನು.
26 Og Laban sagde: Det sker ikke saaledes paa vort Sted, at man giver den yngste bort før den førstefødte.
ಅದಕ್ಕೆ ಲಾಬಾನನು, “ಹಿರಿಯಳಿಗಿಂತ ಮೊದಲು ಕಿರಿಯಳನ್ನು ಮದುವೆ ಮಾಡಿಕೊಡುವುದು ನಮ್ಮ ಪದ್ಧತಿಯಲ್ಲ.
27 Hold dennes Uge ud, saa ville vi ogsaa give dig denne for den Tjeneste, som du skal tjene hos mig endnu syv andre Aar.
ಹಿರಿಯಳೊಡನೆ ಈ ವಾರವನ್ನು ಪೂರೈಸು. ತರುವಾಯ ನೀನು ಇನ್ನು ಬೇರೆ ಏಳು ವರ್ಷಗಳವರೆಗೆ ಸೇವೆ ಮಾಡಲು ಒಪ್ಪಿಕೊಂಡರೆ, ನಾನು ಕಿರಿಯ ಮಗಳನ್ನು ನಿನಗೆ ಕೊಡುತ್ತೇನೆ,” ಎಂದನು.
28 Og Jakob gjorde saa og holdt dennes Uge ud; saa gav han ham Rakel, sin Datter, til hans Hustru.
ಯಾಕೋಬನು ಅದರಂತೆ ಮಾಡಿ, ವಾರವನ್ನು ಪೂರೈಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
29 Og Laban gav sin Datter Rakel Bilha, sin Tjenestepige, til Tjenestepige for hende.
ಲಾಬಾನನು ತನ್ನ ಮಗಳಾದ ರಾಹೇಲಳಿಗೆ, ತನ್ನ ದಾಸಿಯಾದ ಬಿಲ್ಹಳನ್ನು ದಾಸಿಯಾಗಿ ಕೊಟ್ಟನು.
30 Saa gik han og ind til Rakel, og elskede Rakel mere end Lea; og han tjente hos ham endnu syr andre Aar.
ಯಾಕೋಬನು ರಾಹೇಲಳೊಂದಿಗೆ ಕೂಡಿ, ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಸಿದನು. ಇನ್ನೂ ಏಳು ವರ್ಷ ಲಾಬಾನನ ಬಳಿಯಲ್ಲಿ ಸೇವೆ ಮಾಡಿದನು.
31 Der Herren saa, at Lea var foragtet, da aabnede han hendes Moderliv; men Rakel var ufrugtbar.
ಲೇಯಳು ತಾತ್ಸಾರಕ್ಕೆ ತುತ್ತಾಗುವಳೆಂದು ಯೆಹೋವ ದೇವರು ಕಂಡು, ಅವಳು ಗರ್ಭಿಣಿಯಾಗುವಂತೆ ಅನುಗ್ರಹಮಾಡಿದರು. ಆದರೆ ರಾಹೇಲಳು ಬಂಜೆಯಾಗಿದ್ದಳು.
32 Og Lea undfik og fødte en Søn, og hun kaldte hans Navn Ruben; thi hun sagde: Herren har set paa min Elendighed; thi nu skal min Mand elske mig.
ಲೇಯಳು ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಿಜವಾಗಿ ಯೆಹೋವ ದೇವರು ನನ್ನ ಬಾಧೆಯನ್ನು ನೋಡಿದ್ದಾರೆ. ಆದ್ದರಿಂದ ನನ್ನ ಗಂಡನು ನನ್ನನ್ನು ಪ್ರೀತಿ ಮಾಡುವನು,” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.
33 Og hun undfik igen og fødte en Søn og sagde: Fordi Herren har hørt, at jeg var forsmaaet, da har han givet mig ogsaa denne; saa kaldte hun hans Navn Simeon.
ಲೇಯಳು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಾನು ತಾತ್ಸಾರವಾಗಿದ್ದೆ ಎಂದು ಯೆಹೋವ ದೇವರು ಕೇಳಿ, ಇವನನ್ನು ನನಗೆ ಕೊಟ್ಟಿದ್ದಾರೆ,” ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
34 Og hun undfik igen og fødte en Søn og sagde: Nu denne Sinde skal min Mand holde sig til mig, thi jeg har født ham tre Sønner; derfor kaldte man hans Navn Levi.
ಮತ್ತೊಮ್ಮೆ ಲೇಯಳು ಮಗನನ್ನು ಹೆತ್ತು, “ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಏಕೆಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ,” ಎಂದು ಹೇಳಿ, ಆ ಮಗುವಿಗೆ ಲೇವಿ ಎಂದು ಹೆಸರಿಟ್ಟಳು.
35 Og hun undfik igen og fødte en Søn og sagde: Denne Sinde vil jeg prise Herren; derfor kaldte hun hans Navn Juda; saa holdt hun op at føde.
ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ಈಗ ನಾನು ಯೆಹೋವ ದೇವರನ್ನು ಸ್ತುತಿಸುವೆನು,” ಎಂದು ಹೇಳಿ, ಅವನಿಗೆ ಯೆಹೂದ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಮಕ್ಕಳಾಗಲಿಲ್ಲ.