< 1 Mosebog 36 >
1 Og disse ere Esaus, det er Edoms, Slægter.
೧ಎದೋಮ್ ಎಂಬ ಏಸಾವನ ವಂಶಾವಳಿ ಇದು:
2 Esau tog sig Hustruer af Kanaans Døtre: Ada, Elons, den Hethiters Datter, og Oholibama, Anas Datter, Sibeons, den Heviters Datter,
೨ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡನು. ಅವರು ಯಾರೆಂದರೆ, ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬಿಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು,
3 og Basmat, Ismaels Datter, Nebajoths Søster.
೩ಮತ್ತು ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್ ಇವರನ್ನು ಮದುವೆಯಾಗಿದ್ದನು.
4 Og Ada fødte Esau Elifas, og Basmat fødte Reguel.
೪ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
5 Og Oholibama fødte Jeus og Jaelam og Kora; disse ere Esaus Sønner, som fødtes ham i Kanaans Land.
೫ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನೂ, ಕೋರಹನನ್ನು ಹೆತ್ತಳು. ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ.
6 Og Esau tog sine Hustruer og sine Sønner og sine Døtre og alle Sjæle i sit Hus og sit Fæ og alt sit Kvæg og alt det Gods, som han havde forhvervet i Kanaans Land og drog til et Land, bort fra sin Broder Jakobs Ansigt.
೬ತರುವಾಯ ಏಸಾವನು ತನ್ನ ಹೆಂಡತಿಯರನ್ನೂ, ಗಂಡುಹೆಣ್ಣು ಮಕ್ಕಳನ್ನೂ, ತನ್ನ ಮನೆಗೆ ಸೇರಿದ ಸೇವಕರೆಲ್ಲರನ್ನೂ, ತನಗಿದ್ದ ಎಲ್ಲಾ ಪಶುಪ್ರಾಣಿಗಳ ಹಿಂಡುಗಳನ್ನೂ ಕಾನಾನ್ ದೇಶದಲ್ಲಿ ಸಂಪಾದಿಸಿದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮನಾದ ಯಾಕೋಬನ ಬಳಿಯಿಂದ ಬೇರೆ ದೇಶಕ್ಕೆ ಹೊರಟುಹೋದನು.
7 Thi deres Gods var saa meget, at de ikke kunde bo tilsammen; og det Land, hvor de vare fremmede, kunde ikke bære dem for deres Kvægs Skyld.
೭ಅವರ ಸಂಪತ್ತು ಹೆಚ್ಚಿದ್ದದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವುದಕ್ಕೆ ಸಾಧ್ಯವಿರಲಿಲ್ಲ. ಅವರಿಗೆ ಪಶುಪ್ರಾಣಿಗಳು ಬಹಳವಾಗಿದ್ದುದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
8 Saa boede Esau paa det Bjerg Sejr; Esau, det er Edom.
೮ಹೀಗೆ ಏಸಾವನು ಸೇಯೀರ್ ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು.
9 Og disse ere Esaus, Edomiternes Faders, Slægter, paa det Bjerg Sejr.
೯ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ:
10 Disse ere Esaus Sønners Navne: Elifas, Adas, Esaus Hustrus, Søn; Reguel, Basmats, Esaus Hustrus, Søn.
೧೦ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು.
11 Og disse vare Elifas' Sønner: Theman, Omar, Sefo og Gaetham og Kenas.
೧೧ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನೆಜ್,
12 Og Thimna var Elifas', Esaus Søns, Medhustru, og hun fødte Elifas Amalek; disse ere Adas, Esaus Hustrus, Sønner.
೧೨ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು.
13 Og disse ere Reguels Sønner: Nahath og Serah, Samma og Missa; disse ere Basmats, Esaus Hustrus, Sønner.
೧೩ರೆಗೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮಿಜ್ಜಾ ಇವರು ಏಸಾವನ ಹೆಂಡತಿಯಾದ ಬಾಸೆಮತಳ ಪುತ್ರರು.
14 Og disse vare Sønner af Oholibama, som var Anas Datter, Sibeons Datter, Esaus Hustru; og hun fødte Esau Jeus og Jaelam og Kora.
೧೪ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೊಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು, ಯಳಾಮ ಕೋರಹ ಇವರನ್ನು ಹೆತ್ತಳು.
15 Disse ere Fyrsterne iblandt Esaus Sønner: Elifas', Esaus førstefødtes, Sønner: Fyrsten Theman, Fyrsten Omar, Fyrsten Sefo, Fyrsten Kenas,
೧೫ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,
16 Fyrsten Kora, Fyrsten Gaetham, Fyrsten Amalek; disse ere Fyrsterne af Elifas i det Land Edom, disse vare Adas Sønner.
೧೬ಕೋರಹ, ಗತಾಮ್, ಅಮಾಲೇಕ್, ಇವರೇ, ಈ ಕುಲಪತಿಗಳು ಎದೋಮ್ಯರ ದೇಶದಲ್ಲಿದ್ದ ಎಲೀಫಜನಿಂದ ಬಂದವರು. ಇವರು ಆದಾಳ ಮೊಮ್ಮಕ್ಕಳು.
17 Og disse ere Reguels, Esaus Søns, Sønner: Fyrsten Nabath, Fyrsten Sera, Fyrsten Samma, Fyrsten Missa; disse ere Fyrsterne af Reguel i Edoms Land; disse ere Basmats, Esaus Hustrus, Sønner.
೧೭ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು.
18 Og disse ere Oholibamas, Esaus Hustrus, Sønner: Fyrsten Jeus, Fyrsten Jaelam, Fyrsten Kora; disse ere Fyrsterne af Oholibama, Anas Datter, Esaus Hustru.
೧೮ಏಸಾವನ ಹೆಂಡತಿಯಾಗಿದ್ದ ಒಹೊಲೀಬಾಮಳ ಮಗಳಾದ ಅನಾಳ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ ಒಹೊಲೀಬಾಮಳ ಸಂತಾನದವರು.
19 Disse ere Esaus Sønner, og disse deres Fyrster; det er Edom.
೧೯ಎದೋಮನೆನ್ನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಮುಖಂಡರು.
20 Disse ere Sejrs den Horiters Sønner, som boede i Landet: Lotan og Sobal og Sibeon og Ana
೨೦ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೀರಿನಿಂದ ಹುಟ್ಟಿದವರು. ಅವರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
21 og Dison og Ezer og Disan; disse ere Horiternes Fyrster, Sejrs Sønner i det Land Edom.
೨೧ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ಯರ ದೇಶದಲ್ಲಿ ಸೇಯೀರನ ಸಂತತಿಯವರಾದ ಹೋರಿಯಲ್ಲಿ ಹುಟ್ಟಿದ ಮುಖಂಡರು.
22 Og Lotans Sønner vare: Hori og Heman, og Lotans Søster var Thimna.
೨೨ಲೋಟಾನನ ಮಕ್ಕಳು: ಹೋರಿ, ಹೇಮಾಮ್, ಲೋಟಾನನ ತಂಗಿ ತಿಮ್ನಾ.
23 Og disse vare Sobals Sønner: Alvan og Manahath og Ebal, Sefo og Onam.
೨೩ಶೋಬಾಲನ ಮಕ್ಕಳು: ಅಲ್ವಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್.
24 Og disse ere Sibeons Sønner, baade Aja og Ana; denne Ana var det, som fandt varme Kilder i Ørken, der han vogtede sin Fader Sibeons Asener.
೨೪ಸಿಬೆಯೋನನ ಮಕ್ಕಳು: ಅಯ್ಯಾ ಮತ್ತು ಅನಾಹ ಎಂಬವರು. ಈ ಅನಾಹನೇ ತನ್ನ ತಂದೆಯಾದ ಸಿಬಿಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಕೊಂಡವನು.
25 Og disse vare Anas Børn: Dison, og Oholibama var Anas Datter.
೨೫ಅನಾಹನ ಮಕ್ಕಳು: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.
26 Og disse vare Disons Sønner: Hemdan og Esban og Jithran og Keran.
೨೬ದೀಶೋನನ ಮಕ್ಕಳು: ಹೆಮ್ದಾನ್, ಎಷ್ಬಾನ್, ಇತ್ರಾನ್, ಕೆರಾನ್.
27 Disse vare Ezers Sønner: Bilhan og Savan og Akan.
೨೭ಏಚೆರನ ಮಕ್ಕಳು: ಬಿಲ್ಹಾನ್, ಜಾವಾನ್, ಅಕಾನ್.
28 Disse vare Disans Sønner: Uz og Aran.
೨೮ದೀಶಾನನ ಮಕ್ಕಳು: ಊಚ್ ಮತ್ತು ಅರಾನ್.
29 Disse vare Horiternes Fyrster: Fyrsten Lotan, Fyrsten Sobal, Fyrsten Sibeon, Fyrsten Ana,
೨೯ಹೋರಿಯರಿಂದ ಹುಟ್ಟಿದ ಮುಖಂಡರು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ
30 Fyrsten Dison, Fyrsten Ezer, Fyrsten Disan; disse vare Horiternes Fyrster, iblandt deres Fyrster, i Sejrs Land.
೩೦ದೀಶೋನ್, ಏಚೆರ್, ದೀಶಾನ್ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಅಧಿಪತ್ಯ ನಡಿಸಿದ ಮುಖಂಡರು.
31 Og disse ere de Konger, som regerede i Edoms Land, førend der regerede en Konge over Israels Børn:
೩೧ಇಸ್ರಾಯೇಲ್ಯರ ಅರಸರು ಆಳುವುದಕ್ಕಿಂತ ಮೊದಲು ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ:
32 nemlig Bela, Beors Søn, var Konge i Edom, og hans Stads Navn var Dinhaba.
೩೨ಬೆಯೋರನ ಮಗನಾದ ಬೆಲಗನು ಎದೋಮ್ಯರನ್ನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ.
33 Og Bela døde, og Jobab, Seras Søn fra Bosra, blev Konge i hans Sted.
೩೩ಬೆಲಗನು ಸತ್ತ ನಂತರ ಬೊಚ್ರದವನಾದ ಜೆರಹನ ಮಗನಾಗಿದ್ದ ಯೋಬಾಬನು ಅಧಿಪತ್ಯಕ್ಕೆ ಬಂದನು.
34 Og Jobab døde, og Husam af Themanitens Land blev Konge i hans Sted.
೩೪ಯೋಬಾಬನು ಸತ್ತ ನಂತರ ತೇಮಾನೀಯರ ಹುಷಾಮನು ಅವನಿಗೆ ಬದಲಾಗಿ ಆಳಿದನು.
35 Og Husam døde, og Hadad, Bedads Søn, blev Konge i hans Sted, han, som slog Midianiterne paa Moabs Mark; og hans Stads Navn var Avith.
೩೫ಹುಷಾಮನು ಸತ್ತ ನಂತರ ಮೋವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.
36 Og Hadad døde, og Samla af Masreka blev Konge i hans Sted.
೩೬ಹದದನು ಸತ್ತ ನಂತರ ಮಸ್ರೇಕದವನಾದ ಸಮ್ಲಾಹನು ಪಟ್ಟಕ್ಕೆ ಬಂದನು.
37 Og Samla døde, og Saul af Rekoboth ved Floden blev Konge i hans Sted.
೩೭ಸಮ್ಲಾಹನು ಸತ್ತ ಮೇಲೆ ನದಿ ತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು.
38 Og Saul døde, og Baal Hanan, Akbors Søn, blev Konge i hans Sted.
೩೮ಸೌಲನು ಸತ್ತ ನಂತರ ಅಕ್ಬೋರನ ಮಗನಾದ ಬಾಳ್ಹಾನಾನನು ಅರಸನಾದನು.
39 Og Baal Hanan, Akbors Søn, døde, og Hadar blev Konge i hans Sted, og hans Stads Navn var Pau, og hans Hustrus Navn var Mehetabeel, en Datter af Matred, som var Mesahabs Datter.
೩೯ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
40 Og disse vare Fyrsternes Navne, som kom af Esau, efter deres Slægter, i deres Stæder, ved deres Navne: Fyrsten Thimna, Fyrsten Alva, Fyrsten Jetheth,
೪೦ಸ್ಥಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ನ, ಅಲ್ವಾ, ಯೆತೇತ,
41 Fyrsten Oholibama, Fyrsten Ela, Fyrsten Pinon,
೪೧ಒಹೋಲಿಬಾಮ, ಏಲಾ, ಪೀನೋನ್,
42 Fyrsten Kenas, Fyrsten Theman, Fyrsten Mibsar,
೪೨ಕೆನೆಜ್, ತೇಮಾನ್, ಮಿಪ್ಚಾರ್
43 Fyrsten Magdiel, Fyrsten Iram; disse ere Fyrsterne i Edom, eftersom de boede i deres eget Land. Denne Esau er Fader til Edomiterne.
೪೩ಮಗ್ದೀಯೇಲ್ ಗೀರಾಮ್ ಇವರೇ ತಮ್ಮ ದೇಶದ ನಿವಾಸ ಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಈ ಎದೋಮ್ಯರ ಮೂಲ ಪುರುಷನೇ ಏಸಾವನು.