< Salme 37 >
1 Af David. Lad din Vrede ikke optændes imod de onde; vær ikke nidkær imod dem, som gøre Uret;
೧ದಾವೀದನ ಕೀರ್ತನೆ. ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ.
2 thi de skulle hastelig falme som Græs, og visne som grønne Urter.
೨ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು.
3 Forlad dig paa Herren og gør godt; bo i Landet og nær dig trolig;
೩ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.
4 og forlyst dig i Herren, saa skal han give dig dit Hjertes Begæring.
೪ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
5 Vælt din Vej paa Herren og forlad dig paa ham, han skal gøre det.
೫ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.
6 Og han skal føre din Retfærdighed frem som Lyset og din Ret som Middagsglansen.
೬ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.
7 Ti for Herren og forvent ham; lad din Vrede ikke optændes imod den Mand, hvis Vej lykkes, imod den Mand, som øver Underfundighed.
೭ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
8 Lad af fra Vrede og lad Heftighed fare, lad din Vrede ikke optændes, den er kun til at gøre ondt.
೮ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.
9 Thi de onde skulle udryddes, men de, som bie efter Herren, de skulle arve Landet.
೯ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.
10 Og endnu et lidet, saa er den ugudelige ikke mere; og naar du giver Agt paa hans Sted, da er han borte.
೧೦ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ.
11 Men de sagtmodige skulle arve Landet og forlyste sig over stor Fred.
೧೧ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.
12 Den ugudelige optænker Skalkhed imod den retfærdige og skærer Tænder imod ham.
೧೨ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.
13 Herren skal le ad ham; thi han ser, at hans Dag er kommen.
೧೩ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.
14 De ugudelige have uddraget Sværd og spændt deres Bue at fælde en elendig og fattig, at tage Livet af dem, som vandre i Oprigtighed.
೧೪ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.
15 Deres Sværd skal komme i deres eget Hjerte, og deres Buer skulle sønderbrydes.
೧೫ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು;
16 Det lidet, som den retfærdige har, er bedre end mange ugudeliges Gods.
೧೬ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.
17 Thi de ugudeliges Arme skulle sønderbrydes; men Herren opholder de retfærdige.
೧೭ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.
18 Herren kender de retsindiges Dage, og deres Arv skal blive evindelig.
೧೮ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.
19 De skulle ikke beskæmmes i den onde Tid, og de skulle mættes i Hungers Dage.
೧೯ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.
20 Thi de ugudelige skulle omkomme, ja, Herrens Fjender, som Engenes Pragt; de ere forsvundne, i Røg forsvundne.
೨೦ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.
21 En ugudelig maa tage til Laans, og kan ikke betale; men en retfærdig kan forbarme sig og giver.
೨೧ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.
22 Thi Herrens velsignede skulle arve Landet; men hans forbandede skulle udryddes.
೨೨ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.
23 Af Herren stadfæstes en Mands Gang, og han vil have Velbehag til hans Vej.
೨೩ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.
24 Naar han falder, bliver han ikke liggende; thi Herren holder fast ved hans Haand.
೨೪ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.
25 Jeg har været ung og er bleven gammel; men jeg har ikke set en retfærdig forladt eller hans Sæd at søge efter Brødet.
೨೫ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.
26 Han forbarmer sig den ganske Dag og laaner ud, og hans Sæd skal blive til en Velsignelse.
೨೬ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು.
27 Vig fra ondt, og gør godt, saa skal du blive boende evindelig.
೨೭ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ.
28 Thi Herren elsker Ret og forlader ikke sine hellige, de ere bevarede evindelig; men de ugudeliges Sæd er udryddet.
೨೮ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
29 De retfærdige skulle arve Landet og bo der evindelig.
೨೯ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು.
30 En retfærdigs Mund skal tale Visdom, og hans Tunge skal forkynde Ret.
೩೦ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.
31 Hans Guds Lov er i hans Hjerte; hans Trin skulle ikke glide.
೩೧ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು; ಅವನು ಜಾರುವುದೇ ಇಲ್ಲ.
32 En ugudelig lurer paa den retfærdige og søger efter at dræbe ham.
೩೨ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.
33 Herren skal ikke overlade ham i hans Haand og ej kende ham skyldig, naar han dømmes.
೩೩ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ.
34 Bi efter Herren og var paa hans Vej, saa skal han ophøje dig til at arve Landet; du skal se paa de ugudeliges Udryddelse.
೩೪ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.
35 Jeg saa en ugudelig, en Voldsmand; han udbredte sig som et grønt Rodskud.
೩೫ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.
36 Men han forsvandt og se, han var ikke mere; og jeg søgte efter ham, men han fandtes ikke.
೩೬ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.
37 Tag Vare paa den retsindige, og se hen til den oprigtige, thi Fredens Mand har en Fremtid.
೩೭ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.
38 Men Overtrædere skulle ødelægges til Hobe; de ugudeliges Fremtid er borte.
೩೮ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು.
39 Men de retfærdiges Frelse er af Herren, han er deres Styrke i Nødens Tid.
೩೯ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.
40 Og Herren skal hjælpe dem og udfri dem; han skal udfri dem fra de ugudelige og frelse dem; thi de have forladt sig paa ham.
೪೦ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; ಅವರು ಆತನ ಆಶ್ರಿತರಾದುದರಿಂದ, ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.