< 1 Samuel 23 >
1 Da fik David at vide, at Filisterne belejrede Ke'ila og plyndrede Tærskepladserne.
೧ಫಿಲಿಷ್ಟಿಯರು ಕೆಯೀಲಕ್ಕೆ ಮುತ್ತಿಗೆ ಹಾಕಿ ಅಲ್ಲಿನ ಕಣಗಳನ್ನು ಸೂರೆಮಾಡುತ್ತಿದ್ದಾರೆ ಎಂಬ ವರ್ತಮಾನವು ದಾವೀದನಿಗೆ ಮುಟ್ಟಲು
2 Og David raadspurgte HERREN: »Skal jeg drage hen og slaa Filisterne der?« HERREN svarede David; »Drag hen og slaa Filisterne og befri Ke'ila!«
೨ಅವನು, “ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡೆಯಬಹುದೋ” ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ, “ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು” ಎಂದು ಉತ್ತರ ಕೊಟ್ಟನು.
3 Men Davids Mænd sagde til ham: »Se, vi lever i stadig Frygt her i Juda; kan der saa være Tale om, at vi skal drage til Ke'ila mod Filisternes Slagrækker?«
೩ಆದರೆ ದಾವೀದನ ಸೈನಿಕರು ಅವನಿಗೆ, “ನಮಗೆ ಯೆಹೂದ ಸೀಮೆಯಲ್ಲಿಯೇ ಇಷ್ಟು ಭಯವಿರುವಾಗ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವುದಕ್ಕೆ ಕೆಯೀಲಕ್ಕೆ ಹೋದರೆ ಅಲ್ಲಿ ಇನ್ನೂ ಹೆಚ್ಚು ಭಯ ಉಂಟಾಗುತ್ತದೆ” ಅಂದರು.
4 Da raadspurgte David paa ny HERREN, og HERREN svarede ham: »Drag ned til Ke'ila, thi jeg giver Filisterne i din Haand!«
೪ಆದುದರಿಂದ ಅವನು ಪುನಃ ಯೆಹೋವನನ್ನು ಕೇಳಿದನು. ಆತನು, “ನೀನೆದ್ದು ಕೆಯೀಲಕ್ಕೆ ಹೋಗು. ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.
5 David og hans Mænd drog da til Ke'ila, angreb Filisterne, bortførte deres Kvæg og tilføjede dem et stort Nederlag. Saaledes befriede David Ke'ilas Indbyggere.
೫ಆಗ ದಾವೀದನು ತನ್ನ ಜನರೊಡನೆ ಕೆಯೀಲಕ್ಕೆ ಹೋಗಿ, ಫಿಲಿಷ್ಟಿಯರೊಡನೆ ಯುದ್ಧಮಾಡಿ, ಅವರನ್ನು ಸಂಪೂರ್ಣವಾಗಿ ಸೋಲಿಸಿ, ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲದವರನ್ನು ರಕ್ಷಿಸಿದನು.
6 Dengang Ebjatar, Ahimeleks Søn, flygtede til David — han drog med David ned til Ke'ila — havde han Efoden med.
೬ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು,
7 Da Saul fik at vide, at David var kommet til Ke'ila, sagde han: »Gud har givet ham i min Haand! Thi han lukkede sig selv inde, da han gik ind i en By med Porte og Slaaer.«
೭ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿತು. ಆಗ ಅವನು, ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿ ಬಾಗಿಲುಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು,
8 Derfor stævnede Saul hele Folket sammen for at drage ned til Ke'ila og omringe David og hans Mænd.
೮ಕೆಯೀಲದಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹಿಡಿಯಲು ಹೋಗುವುದಕ್ಕೋಸ್ಕರ ಸೈನ್ಯವನ್ನು ಕೂಡಿಸಿದನು.
9 Da David hørte, at Saul pønsede paa ondt imod ham, sagde han til Præsten Ebjatar: »Bring Efoden hid!«
೯ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆ ಎಂಬುದನ್ನು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದನು.
10 Derpaa sagde David: »HERRE, Israels Gud! Din Tjener har hørt, at Saul har i Sinde at gaa mod Ke'ila og ødelægge Byen for min Skyld.
೧೦ಆಗ ದಾವೀದನು, “ಇಸ್ರಾಯೇಲ್ಯರ ದೇವರಾದ ಯೆಹೋವನೇ ಸೌಲನು ಕೆಯೀಲಕ್ಕೆ ಬಂದು ನನ್ನ ನಿಮಿತ್ತವಾಗಿ ಪಟ್ಟಣವನ್ನು ಹಾಳು ಮಾಡಬೇಕೆಂದಿದ್ದಾನೆಂದು ನಿನ್ನ ಸೇವಕನಾದ ನನಗೆ ಸುದ್ದಿ ಬಂದಿತು.
11 Vil Folkene i Ke'ila overgive mig i Sauls Haand? Vil Saul drage herned, som din Tjener har hørt? HERRE, Israels Gud, kundgør din Tjener det!« HERREN svarede: »Ja, han vil!«
೧೧ನಾನು ಕೇಳಿದ ಸುದ್ದಿಯಂತೆ ಅವನು ನಿಜವಾಗಿ ಬರುವನೋ ಕೆಯೀಲಾ ಊರಿನವರು ನನ್ನನ್ನು ಅವನ ಕೈಗೆ ಒಪ್ಪಿಸುವರೋ? ಇಸ್ರಾಯೇಲರ ದೇವರಾದ ಯೆಹೋವನೇ ಈ ವಿಷಯದಲ್ಲಿ ಉತ್ತರ ದಯಪಾಲಿಸು” ಎಂದು ಪ್ರಾರ್ಥಿಸಲು ಅವನು ಬರುವನೆಂಬುದಾಗಿ ಯೆಹೋವನಿಂದ ಉತ್ತರ ಸಿಕ್ಕಿತು.
12 Saa spurgte David: »Vil Folkene i Ke'ila overgive mig og mine Mænd til Saul?« HERREN svarede: »Ja, de vil!«
೧೨ದಾವೀದನು ತಿರುಗಿ ಯೆಹೋವನನ್ನು, “ಕೆಯೀಲದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ” ಎಂದು ಕೇಳಿದಾಗ ಆತನು, “ಒಪ್ಪಿಸಿಕೊಡುವರು” ಎಂದು ಉತ್ತರಕೊಟ್ಟನು.
13 Da brød David op med sine Mænd, henved 600 i Tal, og de drog bort fra Ke'ila og flakkede om fra Sted til Sted. Men da Saul fik at vide, at David var sluppet bort fra Ke'ila, opgav han sit Togt.
೧೩ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಮನಬಂದ ಕಡೆಗೆ ಅಲೆದಾಡಿದರು. ದಾವೀದನು ಕೆಯೀಲದಿಂದ ತಪ್ಪಿಸಿಕೊಂಡನೆಂದು ಸೌಲನಿಗೆ ಗೊತ್ತಾಗಲು ಅವನು ಹೊರಡುವುದನ್ನು ನಿಲ್ಲಿಸಿಬಿಟ್ಟನು.
14 Nu opholdt David sig i Ørkenen paa Klippehøjderne og i Bjergene i Zifs Ørken. Og Saul efterstræbte ham hele Tiden, men Gud gav ham ikke i hans Haand.
೧೪ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಅನಂತರ ಜೀಫ್ ಅರಣ್ಯದ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ಪ್ರತಿದಿನ ಅವನನ್ನು ಹುಡುಕುತ್ತಿದ್ದರೂ ದೇವರು ಅವನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.
15 Og David saa, at Saul var draget ud for at staa ham efter Livet. Medens David var i Horesj i Zifs Ørken,
೧೫ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು.
16 begav Sauls Søn Jonatan sig til David i Horesj og styrkede hans Kraft i Gud,
೧೬ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ,
17 idet han sagde til ham: »Frygt ikke! Min Fader Sauls Arm skal ikke naa dig. Du bliver Konge over Israel og jeg den næste efter dig; det ved min Fader Saul ogsaa!«
೧೭ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ” ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು.
18 Derpaa indgik de to en Pagt for HERRENS Aasyn, og David blev i Horesj, medens Jonatan drog hjem.
೧೮ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.
19 Men nogle Zifiter gik op til Saul i Gibea og sagde: »David holder sig skjult hos os paa Klippehøjderne ved Horesj i Gibeat-Hakila sønden for Jesjimon.
೧೯ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ಒಡೆಯಾ, ಕೇಳು ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ, ಅಂದರೆ ಯೆಷಿಮೋನಿನ ದಕ್ಷಿಣದಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.
20 Saa kom nu herned, Konge, som du længe har ønsket; det skal da være vor Sag at overgive ham til Kongen!«
೨೦ಅರಸನು ತನ್ನ ಇಚ್ಛೆಯಂತೆ ನಮ್ಮ ಜೊತೆಯಲ್ಲಿ ಬರೋಣವಾಗಲಿ. ಅವನನ್ನು ಅರಸನ ಕೈಗೆ ಒಪ್ಪಿಸುವ ಕೆಲಸ ನಮ್ಮದು” ಎಂದು ಹೇಳಿದರು.
21 Saul svarede: »HERREN velsigne eder, fordi I har Medfølelse med mig!
೨೧ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರ ತೋರಿಸಿ ಸಹಾಯ ಮಾಡುತ್ತಿರುವುದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.
22 Gaa nu hen og pas fremdeles paa og opspor, hvor han kommer hen paa sin ilsomme Færd; thi man har sagt mig, at han er meget snu.
೨೨ನೀವು ದಯವಿಟ್ಟು ಹೋಗಿ ಅವನು ಅಡಗಿಕೊಂಡಿರುವ ಸ್ಥಳವನ್ನು, ಅಲ್ಲಿ ಅವನನ್ನು ಕಂಡವರನ್ನೂ ಸೂಕ್ಷ್ಮವಾಗಿ ವಿಚಾರಿಸಿ, ತಿಳಿದುಕೊಳ್ಳಿರಿ. ಅವನು ಬಹು ಯುಕ್ತಿವಂತನೆಂದು ಕೇಳಿದ್ದೇನೆ.
23 Opspor alle de Skjulesteder, hvor han gemmer sig, og vend tilbage til mig med paalidelig Underretning; saa vil jeg følge med eder, og hvis han er i Landet, skal jeg opsøge ham iblandt alle Judas Tusinder!«
೨೩ಆದುದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ಸರಿಯಾದ ವರ್ತಮಾನವನ್ನು ನನಗೆ ತಲುಪಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ದೇಶದಲ್ಲಿರುವುದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾಗಲಿ ಹುಡುಕಿ ಅವನನ್ನು ಕಂಡುಹಿಡಿಯುವೆನು” ಅಂದನು.
24 Da brød de op og drog forud for Saul til Zif. Men David var dengang med sine Mænd i Maons Ørken i Lavningen sønden for Jesjimon.
೨೪ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ ಅರಣ್ಯದ ದಕ್ಷಿಣ ದಿಕ್ಕಿನಲ್ಲಿರುವ ಅರಾಬ್ ಎಂಬ ತಗ್ಗಾದ ಪ್ರದೇಶದಲ್ಲಿದ್ದನು.
25 Saa drog Saul og hans Mænd ud for at opsøge ham, og da David kom under Vejr dermed, drog han ned til den Klippe, som ligger i Maons Ørken; men da det kom Saul for Øre, fulgte han efter David i Maons Ørken.
೨೫ಸೌಲನು ತನ್ನ ಜನರೊಡನೆ ದಾವೀದನನ್ನು ಹಿಡಿಯುವುದಕ್ಕೆ ಬಂದನು. ಈ ವರ್ತಮಾನವು ದಾವೀದನಿಗೆ ತಲುಪಲು ಅವನು ಮಾವೋನಿನಲ್ಲಿರುವ ಒಂದು ಕಡಿದಾದ ಬೆಟ್ಟಕ್ಕೆ ಹೋಗಿ ಅಡಗಿಕೊಂಡನು. ಸೌಲನು ಇದನ್ನು ಕೇಳಿ ಮಾವೋನ ಅರಣ್ಯಕ್ಕೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು.
26 Saul gik med sine Mænd paa den ene Side af Bjerget, medens David med sine Mænd var paa den anden, og David fik travlt med at slippe bort fra Saul. Men som Saul og hans Mænd var ved at omringe og gribe David og hans Mænd,
೨೬ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ, ಅವನ ಜನರೂ ಬಂದು ಅವರನ್ನು ಮುತ್ತಿಗೆ ಹಾಕುವುದಕ್ಕಿದ್ದರು.
27 kom der et Sendebud og sagde til Saul: »Skynd dig og kom! Filisterne har gjort Indfald i Landet!«
೨೭ಆಗಲೇ ಒಬ್ಬ ದೂತನು ಸೌಲನ ಬಳಿಗೆ ಬಂದು ಅವನಿಗೆ, “ಬೇಗ ಬಾ, ಫಿಲಿಷ್ಟಿಯರು ದೇಶದೊಳಗೆ ನುಗ್ಗಿದ್ದಾರೆ” ಎಂದು ತಿಳಿಸಿದನು.
28 Saul opgav da at forfølge David og drog mod Filisterne. Derfor kalder man det Sted Malekots Klippe.
೨೮ಅವನು ದಾವೀದನನ್ನು ಹಿಡಿಯುವ ಕೆಲಸವನ್ನು ಬಿಟ್ಟು ಫಿಲಿಷ್ಟಿಯರ ವಿರುದ್ಧ ಯುದ್ಧಮಾಡಲು ಹೊರಟನು. ಆದುದರಿಂದ ಆ ಬೆಟ್ಟಕ್ಕೆ “ಮಕ್ಹೆಲೋಕೆತ್” ಎಂದರೆ “ಪಾರಾದ ಬಂಡೆ” ಎಂದು ಹೆಸರಾಯಿತು.
29 Derpaa drog David op til Klippehøjderne ved En-Gedi og opholdt sig der.
೨೯ದಾವೀದನು ಅಲ್ಲಿಂದ ಗಟ್ಟಾಹತ್ತಿ ಹೋಗಿ ಏಂಗೆದಿಯ ಗಿರಿಗಳಲ್ಲಿ ವಾಸಿಸಿದನು.