< 1 Timoteus 2 >
1 Jeg formaner da først af alt til, at der holdes Bønner, Paakaldelser, Forbønner, Taksigelser for alle Mennesker,
೧ಎಲ್ಲಾದಕ್ಕಿಂತ ಮೊದಲು ಎಲ್ಲಾ ಜನರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ, ಪ್ರಾರ್ಥನೆಗಳನ್ನೂ, ಮನವಿಗಳನ್ನೂ, ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ.
2 for Konger og alle dem, som ere i Højhed, at vi maa leve et roligt og stille Levned i al Gudsfrygt og Ærbarhed;
೨ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.
3 dette er smukt og velbehageligt for Gud, vor Frelser,
೩ಹಾಗೆ ಮಾಡುವುದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಒಳ್ಳೆಯದು, ಮೆಚ್ಚಿಕೆಯಾಗಿಯೂ ಇದೆ.
4 som vil, at alle Mennesker skulle frelses og komme til Sandheds Erkendelse.
೪ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.
5 Thi der er een Gud, og ogsaa een Mellemmand imellem Gud og Mennesker, Mennesket Kristus Jesus,
೫ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.
6 som gav sig selv til en Genløsnings Betaling for alle, hvilket er Vidnesbyrdet i sin Tid,
೬ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.
7 og for dette er jeg bleven sat til Prædiker og Apostel (jeg siger Sandhed, jeg lyver ikke), en Lærer for Hedninger i Tro og Sandhed.
೭ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.
8 Saa vil jeg da, at Mændene paa ethvert Sted, hvor de bede, skulle opløfte fromme Hænder uden Vrede og Trætte.
೮ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.
9 Ligesaa, at Kvinder skulle pryde sig i sømmelig Klædning med Blufærdighed og Ærbarhed, ikke med Fletninger og Guld eller Perler eller kostbar Klædning,
೯ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ
10 men, som det sømmer sig Kvinder, der bekende sig til Gudsfrygt, med gode Gerninger.
೧೦ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
11 En Kvinde bør i Stilhed lade sig belære, med al Lydighed;
೧೧ಸ್ತ್ರೀಯರು ಮೌನವಾಗಿದ್ದು ಪೂರ್ಣ ಅಧೀನತೆಯಿಂದ ಉಪದೇಶವನ್ನು ಕಲಿಯಬೇಕು.
12 men at være Lærer tilsteder jeg ikke en Kvinde, ikke heller at byde over Manden, men at være i Stilhed.
೧೨ಉಪದೇಶಮಾಡುವುದಕ್ಕಾಗಲಿ ಪುರುಷರ ಮೇಲೆ ಅಧಿಕಾರ ನಡಿಸುವುದಕ್ಕಾಗಲಿ ಸ್ತ್ರೀಯರಿಗೆ ನಾನು ಅಪ್ಪಣೆ ಕೊಡುವುದಿಲ್ಲ. ಅವರು ಮೌನವಾಗಿರಬೇಕು.
13 Thi Adam blev dannet først, derefter Eva;
೧೩ಮೊದಲು ಸೃಷ್ಟಿಸಲ್ಪಟವನು ಆದಾಮನಲ್ಲವೇ, ಆಮೇಲೆ ಹವ್ವಳು.
14 og Adam blev ikke bedraget, men Kvinden blev bedraget og er falden i Overtrædelse.
೧೪ಇದಲ್ಲದೆ ಆದಾಮನು ವಂಚಿಸಲ್ಪಡಲಿಲ್ಲ, ಸ್ತ್ರೀಯು ವಂಚಿಸಲ್ಪಟ್ಟು ಅಪರಾಧಿಯಾದಳು.
15 Men hun skal frelses igennem sin Barnefødsel, dersom de blive i Tro og Kærlighed og Hellighed med Ærbarhed.
೧೫ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು.