< Apostelenes gerninger 16 >
1 Og han kom til Derbe og Lystra, og se, der var der en Discipel ved Navn Timotheus, Søn af en troende Jødinde og en græsk Fader.
೧ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.
2 Han havde godt Vidnesbyrd af Brødrene i Lystra og Ikonium.
೨ಅವನು ಲುಸ್ತ್ರದಲ್ಲಿಯೂ, ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಒಳ್ಳೆಯ ಸಾಕ್ಷಿಯನ್ನು ಹೊಂದಿದ್ದವನು.
3 Ham vilde Paulus have til at drage med sig, og han tog og omskar ham for Jødernes Skyld, som vare paa disse Steder; thi de vidste alle, at hans Fader var en Græker.
೩ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.
4 Men alt som de droge igennem Byerne, overgave de dem de Bestemmelser at holde, som vare vedtagne af Apostlene og de Ældste i Jerusalem.
೪ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರೂ, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.
5 Saa styrkedes Menighederne i Troen og voksede i Antal hver Dag.
೫ಸಭೆಗಳು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು.
6 Men de droge igennem Frygien og det galatiske Land, da de af den Helligaand vare blevne forhindrede i at tale Ordet i Asien.
೬ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,
7 Da de nu kom hen imod Mysien, forsøgte de at drage til Bithynien; og Jesu Aand tilstedte dem det ikke.
೭ಮೂಸ್ಯಕ್ಕೆ ಹತ್ತಿರವಾಗಿ ಬಂದಾಗ, ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
8 De droge da Mysien forbi og kom ned til Troas.
೮ಆಗ ಅವರು ಮೂಸ್ಯದ ಮುಖಾಂತಾರವಾಗಿ ತ್ರೋವಕ್ಕೆ ಬಂದರು.
9 Og et Syn viste sig om Natten for Paulus: En makedonisk Mand stod der og bad ham og sagde: „Kom over til Makedonien og hjælp os!”
೯ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.
10 Men da han havde set dette Syn, ønskede vi straks at drage over til Makedonien; thi vi sluttede, at Gud havde kaldt os derhen til at forkynde Evangeliet for dem.
೧೦ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.
11 Vi sejlede da ud fra Troas og styrede lige til Samothrake og den næste Dag til Neapolis
೧೧ನಾವು ತ್ರೋವದಿಂದ ಸಮುದ್ರ ಪ್ರಯಾಣಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಯನ್ನು ತಲುಪಿದೆವು.
12 og derfra til Filippi, hvilken er den første By i den Del af Makedonien, en Koloni. I denne By opholdt vi os nogle Dage.
೧೨ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.
13 Og paa Sabbatsdagen gik vi uden for Porten ved en Flod, hvor vi mente, at der var et Bedested, og vi satte os og talte til de Kvinder, som kom sammen.
೧೩ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು.
14 Og en Kvinde ved Navn Lydia, en Purpurkræmmerske fra Byen Thyatira, en Kvinde, som frygtede Gud, hørte til, og hendes Hjerte oplod Herren til at give Agt paa det, som blev talt af Paulus.
೧೪ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.
15 Men da hun og hendes Hus var blevet døbt, bad hun og sagde: „Dersom I agte mig for at være Herren tro, da kommer ind i mit Hus og bliver der!” Og hun nødte os.
೧೫ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.
16 Men det skete, da vi gik til Bedestedet, at en Pige mødte os, som havde en Spaadomsaand og skaffede sine Herrer megen Vinding ved at spaa.
೧೬ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.
17 Hun fulgte efter Paulus og os, raabte og sagde: „Disse Mennesker ere den højeste Guds Tjenere, som forkynde eder Frelsens Vej.”
೧೭ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.
18 Og dette gjorde hun i mange Dage. Men Paulus blev fortrydelig derover, og han vendte sig og sagde til Aanden: „Jeg byder dig i Jesu Kristi Navn at fare ud af hende.” Og den for ud i den samme Stund.
೧೮ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.
19 Men da hendes Herrer saa, at deres Haab om Vinding var forsvundet, grebe de Paulus og Silas og slæbte dem hen paa Torvet for Øvrigheden.
೧೯ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.
20 Og de førte dem til Høvedsmændene og sagde: „Disse Mennesker, som ere Jøder, forvirre aldeles vor By,
೨೦ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;
21 og de forkynde Skikke, som det ikke er tilladt os, der ere Romere, at antage eller øve.”
೨೧ಇವರು ಯೆಹೂದ್ಯರಾಗಿದ್ದು ರೋಮನ್ನರಾದ ನಾವು ಅವಲಂಬಿಸಿ ಆಚರಿಸಬಾರದ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ” ಅಂದರು.
22 Og Mængden rejste sig imod dem, og Høvedsmændene lode Klæderne rive af dem og befalede at piske dem.
೨೨ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು.
23 Og da de havde givet dem mange Slag, kastede de dem i Fængsel og befalede Fangevogteren at holde dem sikkert bevogtede.
೨೩ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.
24 Da han havde faaet saadan Befaling, kastede han dem i det inderste Fængsel og sluttede deres Fødder i Blokken.
೨೪ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
25 Men ved Midnat bade Paulus og Silas og sang Lovsange til Gud; og Fangerne lyttede paa dem.
೨೫ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.
26 Men pludseligt kom der et stort Jordskælv, saa at Fængselets Grundvolde rystede, og straks aabnedes alle Dørene, og alles Lænker løstes.
೨೬ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
27 Men Fangevogteren for op af Søvne, og da han saa Fængselets Døre aabne, drog han et Sværd og vilde dræbe sig selv, da han mente, at Fangerne vare flygtede.
೨೭ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.
28 Men Paulus raabte med høj Røst og sagde: „Gør ikke dig selv noget ondt; thi vi ere her alle.”
೨೮ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು.
29 Men han forlangte Lys og sprang ind og faldt skælvende ned for Paulus og Silas.
೨೯ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡ್ಡಬಿದ್ದನು.
30 Og han førte dem udenfor og sagde: „Herrer! hvad skal jeg gøre, for at jeg kan blive frelst?”
೩೦ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು,
31 Men de sagde: „Tro paa den Herre Jesus Kristus, saa skal du blive frelst, du og dit Hus.”
೩೧ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ,
32 Og de talte Herrens Ord til ham og til alle dem, som vare i hans Hus.
೩೨ಅವನಿಗೂ, ಅವನ ಮನೆಯಲ್ಲಿದ್ದವರೆಲ್ಲರಿಗೂ ದೇವರ ವಾಕ್ಯವನ್ನು ತಿಳಿಸಿದರು.
33 Og han tog dem til sig i den samme Stund om Natten og aftoede deres Saar; og han selv og alle hans bleve straks døbte.
೩೩ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.
34 Og han førte dem op i sit Hus og satte et Bord for dem og frydede sig over, at han med hele sit Hus var kommen til Troen paa Gud.
೩೪ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.
35 Men da det var blevet Dag, sendte Høvedsmændene Bysvendene hen og sagde: „Løslad de Mænd!”
೩೫ಬೆಳಗಾದ ಮೇಲೆ ಅಧಿಕಾರಿಗಳು; “ಆ ಮನುಷ್ಯರನ್ನು ಬಿಟ್ಟುಬಿಡು” ಎಂದು ಸಿಪಾಯಿಗಳ ಮೂಲಕ ಹೇಳಿ ಕಳುಹಿಸಿದರು.
36 Men Fangevogteren meldte Paulus disse Ord: „Høvedsmændene have sendt Bud, at I skulle løslades; saa drager nu ud og gaar bort med Fred!”
೩೬ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.
37 Men Paulus sagde til dem: „De have ladet os piske offentligt og uden Dom, os, som dog ere romerske Mænd, og kastet os i Fængsel, og nu jage de os hemmeligt bort! Nej, lad dem selv komme og føre os ud!”
೩೭ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.
38 Men Bysvendene meldte disse Ord til Høvedsmændene; og de bleve bange, da de hørte, at de vare Romere.
೩೮ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು.
39 Og de kom og gave dem gode Ord, og de førte dem ud og bade dem at drage bort fra Byen.
೩೯ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
40 Og de gik ud af Fængselet og gik ind til Lydia; og da de havde set Brødrene, formanede de dem og droge bort.
೪೦ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು.