< Matthæus 3 >
1 Men i de Dage fremstaar Johannes Døberen og prædiker i Judæas Ørken og siger:
೧ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ,
2 „Omvender eder, thi Himmeriges Rige er kommet nær.‟
೨ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”
3 Thi han er den, om hvem der er talt ved Profeten Esajas, som siger: „Der er en Røst af en, som raaber i Ørkenen: Bereder Herrens Vej, gører hans Stier jævne!‟
೩“‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಮಾರ್ಗವನ್ನು ಸರಾಗ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವಿದೆ” ಎಂಬುದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ.
4 Men han, Johannes, havde sit Klædebon af Kamelhaar og et Læderbælte om sin Lænd; og hans Føde var Græshopper og vild Honning.
೪ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
5 Da drog Jerusalem ud til ham og hele Judæa og hele Omegnen om Jordan.
೫ಆಗ ಯೆರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು,
6 Og de bleve døbte af ham i Floden Jordan, idet de bekendte deres Synder.
೬ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
7 Men da han saa mange af Farisæerne og Saddukæerne komme til hans Daab, sagde han til dem: „I Øgleunger! hvem har lært eder at fly fra den kommende Vrede?
೭ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?
8 Bærer da Frugt, som er Omvendelsen værdig,
೮ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.
9 og mener ikke at kunne sige ved eder selv: Vi have Abraham til Fader; thi jeg siger eder, at Gud kan opvække Abraham Børn af disse Stene.
೯ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.
10 Men Øksen ligger allerede ved Roden af Træerne; saa bliver da hvert Træ, som ikke bærer god Frugt, omhugget og kastet i Ilden.
೧೦ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.
11 Jeg døber eder med Vand til Omvendelse, men den, som kommer efter mig, er stærkere end jeg, han, hvis Sko jeg ikke er værdig at bære; han skal døbe eder med den Helligaand og Ild.
೧೧ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.
12 Hans Kasteskovl er i hans Haand, og han skal gennemrense sin Lo og samle sin Hvede i Laden; men Avnerne skal han opbrænde med uslukkelig Ild.‟
೧೨ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.
13 Da kommer Jesus fra Galilæa til Jordan til Johannes for at døbes af ham.
೧೩ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು.
14 Men Johannes vilde formene ham det og sagde: „Jeg trænger til at døbes af dig, og du kommer til mig!‟
೧೪ಆತನಿಗೆ ಯೋಹಾನನು ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ,
15 Men Jesus svarede og sagde til ham: „Tilsted det nu; thi saaledes sømmer det sig for os at fuldkomme al Retfærdighed.‟ Da tilsteder han ham det.
೧೫ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.
16 Men da Jesus var bleven døbt, steg han straks op af Vandet, og se, Himlene aabnedes for ham, og han saa Guds Aand dale ned som en Due og komme over ham.
೧೬ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.
17 Og se, der kom en Røst fra Himlene, som sagde: „Denne er min Søn, den elskede, i hvem jeg har Velbehag.‟
೧೭ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.