< Filipperne 1 >
1 Paulus og Timotheus, Kristi Jesu Tjenere, til alle de hellige i Kristus Jesus, som ere i Filippi, med Tilsynsmænd og Menighedstjenere.
೧ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ,
2 Naade være med eder og Fred fra Gud vor Fader og den Herre Jesus Kristus!
೨ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಲಭಿಸಲಿ.
3 Jeg takker min Gud, saa ofte jeg kommer eder i Hu,
೩ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ.
4 idet jeg altid, i hver min Bøn, beder for eder alle med Glæde,
೪
5 for eders Deltagelse i Evangeliet fra den første Dag indtil nu;
೫ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ.
6 forvisset om dette, at han, som begyndte en god Gerning i eder, vil fuldføre den indtil Jesu Kristi Dag,
೬ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.
7 saaledes som det jo er ret for mig at mene dette om eder alle, efterdi jeg har eder i Hjertet baade under mine Lænker og under Evangeliets Forsvar og Stadfæstelse, fælles som I jo alle ere med mig om Naaden.
೭ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.
8 Thi Gud er mit Vidne, hvorledes jeg længes efter eder alle med Kristi Jesu inderlige Kærlighed.
೮ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.
9 Og derom beder jeg, at eders Kærlighed fremdeles maa blive mere og mere rig paa Erkendelse og al Skønsomhed,
೯ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.
10 saa I kunne værdsætte de forskellige Ting, for at I maa være rene og uden Anstød til Kristi Dag,
೧೦ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,
11 fyldte med Retfærdigheds Frugt, som virkes ved Jesus Kristus, Gud til Ære og Pris.
೧೧ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.
12 Men jeg vil, I skulle vide, Brødre! at mine Forhold snarere have tjent til Evangeliets Fremme,
೧೨ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ.
13 saa at det er blevet aabenbart for hele Livvagten og for alle de øvrige, at mine Lænker bæres for Kristi Skyld,
೧೩ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು.
14 og de fleste af Brødrene fik i Tillid til Herren ved mine Lænker end mere Dristighed til at tale Guds Ord uden Frygt.
೧೪ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.
15 Nogle prædike vel ogsaa Kristus for Avinds og Kivs Skyld, men nogle ogsaa i en god Mening.
೧೫ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
16 Disse gøre det af Kærlighed, vidende, at jeg er sat til at forsvare Evangeliet;
೧೬ಇವರಂತೂ ನಾನು ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವುದಕ್ಕಾಗಿ ಇಲ್ಲಿ ಹಾಕಲ್ಪಟ್ಟಿದ್ದೆನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಿದ್ದಾರೆ.
17 men hine forkynde Kristus af Egennytte, ikke ærligt, men i den Tanke at føje Trængsel til mine Lænker.
೧೭ಆ ಬೇರೆ ತರದವರಾದರೋ ನಾನು ಬೇಡಿಯಿಂದ ಬಂಧಿತನಾಗಿರುವಾಗಲೂ ನನಗೆ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ, ಪ್ರಾಮಾಣಿಕವಲ್ಲದ ಸ್ವಾರ್ಥ ಉದ್ದೇಶದಿಂದ ಕ್ರಿಸ್ತನನ್ನು ಪ್ರಸಿದ್ಧಿಪಡಿಸುತ್ತಾರೆ.
18 Hvad saa? Kristus forkyndes dog paa enhver Maade, være sig paa Skrømt eller i Sandhed; og derover glæder jeg mig, og jeg vil ogsaa fremdeles glæde mig.
೧೮ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು.
19 Thi jeg ved, at dette skal blive mig til Frelse ved eders Bøn og Jesu Kristi Aands Hjælp,
೧೯ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.
20 efter min Længsel og mit Haab, at jeg i intet skal blive til Skamme, men at Kristus skal med al Frimodighed, som altid, saa ogsaa nu, forherliges i mit Legeme, være sig ved Liv eller ved Død.
೨೦ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.
21 Thi det at leve er mig Kristus og at dø en Vinding.
೨೧ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ.
22 Men dersom dette at leve i Kødet skaffer mig Frugt af min Gerning, saa ved jeg ikke, hvad jeg skal vælge;
೨೨ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು.
23 men jeg staar tvivlraadig imellem de to Ting, idet jeg har Lysten til at bryde op og være sammen med Kristus; thi dette var saare meget bedre;
೨೩ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.
24 men at forblive i Kødet er mere nødvendigt for eders Skyld.
೨೪ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.
25 Og i Forvisning herom ved jeg, at jeg skal blive i Live og forblive hos eder alle til eders Fremgang og Glæde i Troen,
೨೫ಆದ್ದರಿಂದ ನಿಮಗೆ ಕ್ರಿಸ್ತನಂಬಿಕೆಯಲ್ಲಿ ಅಭಿವೃದ್ಧಿಯೂ ಆನಂದವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ.
26 for at eders Ros ved mig kan blive rig i Kristus Jesus, ved at jeg atter kommer til Stede iblandt eder.
೨೬ಹೀಗೆ ನಾನು ತಿರುಗಿ ನಿಮ್ಮ ಬಳಿಗೆ ಬರುವುದರಿಂದ ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉಲ್ಲಾಸಪಡುವುದಕ್ಕೆ ನನ್ನಿಂದ ಅಧಿಕ ಆಸ್ಪದವಿರುವುದು.
27 Kun skulle I leve Kristi Evangelium værdigt, for at, hvad enten jeg kommer og ser eder eller er fraværende, jeg dog kan høre om eder, at I staa faste i een Aand, saa at I med een Sjæl stride tilsammen for Troen paa Evangeliet
೨೭ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.
28 og ikke lade eder forfærde i nogen Ting af Modstanderne; thi dette er for dem et Tegn paa Undergang, men for eder paa Frelse, og det fra Gud.
೨೮ನೀವು ಹೀಗಿರುವುದು ವಿರೋಧಿಗಳ ನಾಶನಕ್ಕೂ, ನಿಮ್ಮ ರಕ್ಷಣೆಗೂ ಒಂದು ಗುರುತಾಗಿದೆ. ಅದು ದೇವರಿಂದಾದ ಮುನ್ಸೂಚನೆಯಾಗಿದೆ.
29 Thi eder er det forundt for Kristi Skyld — ikke alene at tro paa ham, men ogsaa at lide for hans Skyld,
೨೯ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.
30 idet I have den samme Kamp, som I have set paa mig og nu høre om mig.
೩೦ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನ ಕುರಿತಾಗಿ ಕೇಳುವಂಥ ಅದೇ ಹೋರಾಟವು ನಿಮಗೂ ಉಂಟು.