< Salme 4 >

1 Til Sangmesteren. Med Strengespil. En Salme af David.
ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು.
2 Svar, naar jeg raaber, min Retfærds Gud! I Trængsel skaffede du mig Rum. Vær naadig og hør min Bøn!
ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ, ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ? ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? (ಸೆಲಾ)
3 Hvor længe, I Mænd, skal min Ære skændes? Hvor længe vil I elske Tomhed, søge Løgn? (Sela)
ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.
4 Vid dog, at HERREN er mig underfuldt god; naar jeg paakalder HERREN, hører han mig.
ಭಯಪಡಿರಿ, ಪಾಪಮಾಡಬೇಡಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. (ಸೆಲಾ)
5 Vredes kun, men forsynd eder ikke, tænk efter paa eders Leje og ti! (Sela)
ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; ಯೆಹೋವನಲ್ಲಿಯೇ ಭರವಸವಿಡಿರಿ.
6 Bring rette Ofre og stol paa HERREN!
“ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.
7 Mange siger: »Hvo bringer os Lykke?« Opløft paa os dit Aasyns Lys!
ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.
8 HERRE, du skænked mit Hjerte en Glæde, større end deres, da Korn og Most flød over. I Fred gaar jeg til Hvile og slumrer straks, thi, HERRE, du lader mig bo alene i Tryghed.
ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.

< Salme 4 >