< 1 Tessalonikerne 5 >
1 Men om Tid og Time, Brødre! have I ikke nødig, at der skrives til eder;
೧ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ.
2 thi I vide selv grant, at Herrens Dag kommer som en Tyv om Natten.
೨ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
3 Når de sige: "Fred og ingen Fare!" da kommer Undergang pludselig, over dem ligesom Veerne over den frugtsommelige, og de skulle ingenlunde undfly.
೩“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.
4 Men I, Brødre! I ere ikke i Mørke, så at Dagen skulde overraske eder som en Tyv.
೪ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ.
5 Thi I ere alle Lysets Børn og Dagens Børn, vi ere ikke Nattens eller Mørkets Børn.
೫ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
6 Så lader os da ikke sove ligesom de andre, men lader os våge og være ædrue!
೬ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.
7 Thi de, som sove, sove om Natten, og de, som beruse sig, ere berusede om Natten.
೭ನಿದ್ರೆಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ.
8 Men da vi høre Dagen til, så lader os være ædrue, iførte Troens og Kærlighedens Panser og Frelsens Håb som Hjelm!
೮ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.
9 Thi Gud bestemte os ikke til Vrede, men til at vinde Frelse ved vor Herre Jesus Kristus,
೯ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.
10 som døde for os, for at vi, hvad enten vi våge eller sove, skulle leve sammen med ham.
೧೦ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು.
11 Formaner derfor hverandre og opbygger den ene den anden, ligesom I også gøre.
೧೧ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.
12 Men vi bede eder, Brødre! at I skønne på dem, som arbejde iblandt eder og ere eders Forstandere i Herren og påminde eder,
೧೨ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ,
13 og agte dem højlig i Kærlighed for deres Gernings Skyld. Holder Fred med hverandre!
೧೩ಅವರನ್ನು ಲಕ್ಷಿಸಿ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಗೌರವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ.
14 Og vi formane eder, Brødre! påminder de uskikkelige, trøster de modfaldne, tager eder af de skrøbelige, værer langmodige imod alle!
೧೪ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
15 Ser til, at ingen gengælder nogen ondt med ondt; men stræber altid efter det gode, både imod hverandre og imod alle.
೧೫ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.
೧೭ಎಡೆಬಿಡದೆ ಪ್ರಾರ್ಥನೆಮಾಡಿರಿ,
18 takker i alle Forhold; thi dette er Guds Villie med eder i Kristus Jesus.
೧೮ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
೧೯ಪವಿತ್ರಾತ್ಮನನ್ನು ನಂದಿಸಬೇಡಿ,
20 ringeagter ikke Profetier,
೨೦ಪ್ರವಾದನೆಗಳನ್ನು ಹಿನೈಸಬೇಡಿರಿ.
21 prøver alt, beholder det gode!
೨೧ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
22 Holder eder fra det onde under alle Skikkelser!
೨೨ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.
23 Men han selv, Fredens Gud, helliggøre eder ganske og aldeles, og gid eders Ånd og Sjæl og Legeme må bevares helt og holdent, uden Dadel i vor Herres Jesu Kristi Tilkommelse!
೨೩ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.
24 Trofast er han, som kaldte eder, han skal også gøre det.
೨೪ನಿಮ್ಮನ್ನು ಕರೆದವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು.
೨೫ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
26 Hilser alle Brødrene med et helligt Kys!
೨೬ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನೂ ವಂದಿಸಿರಿ.
27 Jeg besværger eder ved Herren, at dette Brev må blive oplæst for alle de hellige Brødre.
೨೭ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಲ್ಲಿ ಆಜ್ಞಾಪಿಸುತ್ತೇನೆ.
28 Vor Herres Jesu Kristi Nåde være med eder!
೨೮ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.