< 1 Timoteus 3 >

1 Den Tale er troværdig; dersom nogen begærer en Tilsynsgerning har han Lyst til en skøn Gerning.
ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.
2 En Tilsynsmand bør derfor være ulastelig, een Kvindes Mand, ædruelig, sindig, høvisk, gæstfri, dygtig til at lære andre;
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.
3 ikke hengiven til Vin, ikke til Slagsmål, men mild, ikke kivagtig, ikke pengegridsk;
ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.
4 en Mand, som forestår sit eget Hus vel, som har Børn, der ere lydige med al Ærbarhed;
ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು.
5 (dersom en ikke veed at forestå sit eget Hus, hvorledes vil han da kunne sørge for Guds Menighed?)
ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?
6 ikke ny i Troen, som at han ikke skal blive opblæst og falde ind under Djævelens Dom.
ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.
7 Men han bør også have et godt Vidnesbyrd af dem, som ere udenfor; for at han ikke skal falde i Forhånelse og Djævelens Snare.
ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು.
8 Menighedstjenere bør ligeledes være ærbare, ikke tvetungede, ikke hengivne til megen Vin, ikke til slet Vinding,
ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,
9 bevarende Troens Hemmelighed i en ren Samvittighed.
ನಂಬಿಕೆಯಿಂದ ಪ್ರಕಟವಾಗಿರುವ ಸತ್ಯಾರ್ಥವನ್ನು ಶುದ್ಧ ಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು.
10 Men også disse skulle først prøves, og siden gøre Tjeneste, hvis de ere ustrafelige.
೧೦ಇದಲ್ಲದೆ ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ.
11 Kvinder bør ligeledes være ærbare, ikke bagtaleriske, ædruelige, tro i alle Ting.
೧೧ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.
12 En Menighedstjener skal være een Kvindes Mand og forestå sine Børn og sit eget Hus vel.
೧೨ಸಭಾಸೇವಕರು ಏಕಪತ್ನಿಯುಳ್ಳವರೂ, ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು.
13 Thi de, som have tjent vel i Menigheden, de erhverve sig selv en smuk Stilling og megen Frimodighed i Troen på Kristus Jesus.
೧೩ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿರುವವರು ತಮಗೆ ಒಳ್ಳೆಯ ಪದವಿಯನ್ನೂ, ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹುಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
14 Disse Ting skriver jeg dig til, ihvorvel jeg håber at komme snart til dig;
೧೪ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.
15 men dersom jeg tøver, da skal du heraf vide, hvorledes man bør færdes i Guds Hus, hvilket jo er den levende Guds Menighed, Sandhedens Søjle og Grundvold.
೧೫ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.
16 Og uden Modsigelse stor er den Gudsfrygtens Hemmelighed: Han, som blev åbenbaret i Kød, blev retfærdiggjort i Ånd, set af Engle, prædiket iblandt Hedninger, troet i Verden, optagen i Herlighed.
೧೬ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.

< 1 Timoteus 3 >