< Galaterne 6 >
1 Brødre! om også et Menneske bliver overrasket af nogen Forsyndelse, da hjælper en sådan til Rette, I åndelige! med Sagtmodigheds Ånd, og se til dig selv, at ikke også du bliver fristet!
೧ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.
2 Bærer hverandres Byrder og opfylder således Kristi Lov!
೨ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
3 Thi når nogen mener, at han er noget, skønt han intet er, da bedrager han sig selv.
೩ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ.
4 Men hver prøve sin egen Gerning, og da skal han have sin Ros i Forhold til sig selv alene, og ikke til Næsten;
೪ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ.
5 thi hver skal bære sin egen Byrde.
೫ಏಕೆಂದರೆ ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು.
6 Men den, som undervises i Ordet skal dele alt godt med den, som underviser ham.
೬ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.
7 Farer ikke vild; Gud lader sig ikke spotte; thi hvad et Menneske sår, det skal han også høste.
೭ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
8 Thi den, som sår i sit Kød, skal høste Fordærvelse af Kødet; men den, som sår i Ånden, skal høste evigt Liv af Ånden. (aiōnios )
೮ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. (aiōnios )
9 Men når vi gøre det gode, da lader os ikke blive trætte; thi i sin Tid skulle vi høste, såfremt vi ikke give tabt.
೯ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.
10 Så lader os altså, efter som vi have Lejlighed, gøre det gode imod alle, men mest imod Troens egne!
೧೦ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.
11 Ser nu, med hvor store Bogstaver jeg skriver til eder med min egen Hånd!
೧೧ಇಗೋ ನೋಡಿರಿ, ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರಗಳಲ್ಲಿ ನಿಮಗೆ ಬರೆಯುತ್ತಾ ಇದ್ದೇನೆ.
12 Alle de, som ville tage sig godt ud i Kødet, de tvinge eder til at lade eder omskære, alene for at de ikke skulle forfølges for Kristi Kors's Skyld.
೧೨ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.
13 Thi ikke engang de, som lade sig omskære, holde selv Loven; men de ville, at I skulle lade eder omskære, for at de kunne rose sig af eders Kød.
೧೩ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.
14 Men det være langt fra mig at rose mig uden af vor Herres Jesu Kristi Kors, ved hvem Verden er korsfæstet for mig, og jeg for Verden.
೧೪ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.
15 Thi hverken Omskærelse eller Forhud er noget, men en ny Skabning.
೧೫ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು.
16 Og så mange, som vandre efter denne Rettesnor, over dem være Fred og Barmhjertighed, og over Guds Israel!
೧೬ಈ ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ.
17 Herefter volde ingen mig Besvær; thi jeg bærer Jesu Mærketegn på mit Legeme:
೧೭ಇನ್ನು ಮೇಲೆ ಯಾರೂ ನನಗೆ ತೊಂದರೆಪಡಿಸಬಾರದು, ನನ್ನ ದೇಹದಲ್ಲಿ ಯೇಸುಕ್ರಿಸ್ತನ ಗುರುತುಗಳನ್ನು ಮುದ್ರಿಸಿಕೊಂಡಿದ್ದೇನೆ.
18 Vor Herres Jesu Kristi Nåde være med eders Ånd, Brødre! Amen.
೧೮ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.