< Hebræerne 3 >
1 Derfor, hellige Brødre, delagtige i en himmelsk Kaldelse! ser hen til vor Bekendelses Udsending og Ypperstepræst, Jesus,
೧ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.
2 der var tro imod den, som beskikkede ham, ligesom også Moses var det i hele hans Hus.
೨ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ.
3 Thi han er kendt værdig til større Herlighed end Moses, i samme Mål som den, der har indrettet et Hus, har større Ære end Huset selv.
೩ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ ಮೋಶೆಗಿಂತ ಯೇಸು ಹೆಚ್ಚಾದ ಗೌರವಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ.
4 Thi hvert Hus indrettes af nogen; men den, som har indrettet alt, er Gud.
೪ಪ್ರತಿಯೊಂದು ಮನೆಯನ್ನು ಯಾರೊಬ್ಬನು ಕಟ್ಟಿರುವನು, ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ.
5 Og Moses var vel tro i hele hans Hus, som en Tjener, til Vidnesbyrd om, hvad der skulde tales;
೫ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ ಸಾಕ್ಷಿಕೊಟ್ಟಿದ್ದಾನೇ.
6 men Kristus er det som en Søn over hans Hus; og hans Hus ere vi, såfremt vi fastholde Håbets Frimodighed og Ros urokket indtil Enden.
೬ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.
7 Derfor, som den Helligånd siger: "I Dag, når I høre hans Røst,
೭ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ,
8 da forhærder ikke eders Hjerter, som det skete i Forbitrelsen, på Fristelsens Dag i Ørkenen,
೮ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
9 hvor eders Fædre fristede mig ved at sætte mig på Prøve, og de så dog mine Gerninger i fyrretyve År.
೯ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು.
10 Derfor harmedes jeg på denne Slægt og sagde: De fare altid vild i Hjertet; men de kendte ikke mine Veje,
೧೦ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ.
11 så jeg svor i min Vrede: Sandelig, de skulle ikke gå ind til min Hvile" -
೧೧ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.’”
12 så ser til, Brødre! at der ikke nogen Sinde i nogen af eder skal findes et ondt, vantro Hjerte, så at han falder fra den levende Gud.
೧೨ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.
13 Men formaner hverandre hver Dag, så længe det hedder "i Dag", for at ikke nogen af eder skal forhærdes ved Syndens Bedrag.
೧೩ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.
14 Thi vi ere blevne delagtige i Kristus, såfremt vi fastholde vor første Fortrøstning urokket indtil Enden.
೧೪ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.
15 Når der sigs: "I Dag, - når I høre hans Røst, da forhærder ikke eders Hjerter som i Forbitrelsen":
೧೫“ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.”
16 hvem vare da vel de, som hørte og dog voldte Forbitrelse? Mon ikke alle, som gik ud af Ægypten ved Moses?
೧೬ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?
17 Men på hvem harmedes han i fyrretyve År? Mon ikke på dem, som syndede, hvis døde Kroppe faldt i Ørkenen?
೧೭ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.
18 Og over for hvem tilsvor han, at de ikke skulde gå ind til hans Hvile, uden dem, som vare blevne genstridige?
೧೮ನನ್ನ ವಿಶ್ರಾಂತಿಯಲ್ಲಿ ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ?
19 Og vi se, at de ikke kunde gå ind på Grund af Vantro.
೧೯ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ.