< Lukas 5 >
1 Men det skete, da Folkeskaren trængte sig sammen om ham og hørte Guds Ord, og han stod ved Genezareths Sø,
೧ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.
2 da så han to Skibe stå ved Søen; men Fiskerne vare gåede fra dem og toede Garnene.
೨ಯೇಸು ಆ ಸರೋವರದ ದಡದಲ್ಲಿದ್ದ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
3 Og han gik om Bord i et af Skibene, som var Simons, og bad ham at lægge lidt fra Land; og han satte sig og lærte Skarerne fra Skibet.
೩ಆ ದೋಣಿಗಳಲ್ಲಿ, ಸೀಮೋನನ ದೋಣಿಯನ್ನು ಯೇಸು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು.
4 Men da han holdt op med at tale, sagde han til Simon: "Far ud på Dybet, og kaster eders Garn ud til en Dræt!"
೪ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿರಿ” ಎಂದು ಹೇಳಿದನು.
5 Og Simon svarede og sagde til ham: "Mester! vi have arbejdet hele Natten og fik intet; men på dit Ord vil jeg kaste Garnene ud."
೫ಅದಕ್ಕೆ ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯತ್ನಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಬೀಸುತ್ತೇವೆ” ಅಂದನು.
6 Og da de gjorde det, fangede de en stor Mængde Fisk, og deres Garn sønderreves.
೬ಅವರು ಬಲೆಗಳನ್ನು ಬೀಸಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಬಲೆಗೆ ಸಿಕ್ಕಿಕೊಂಡಿದ್ದರ ಪರಿಣಾಮ ಬಲೆಗಳು ಹರಿದುಹೋಗುವಂತ್ತಿದವು.
7 Og de vinkede ad deres Staldbrødre i det andet Skib, at de skulde komme og hjælpe dem; og de kom og de fyldte begge Skibene, så at de var nær ved at synke.
೭ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು, ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು, ಅವು ಮುಳುಗುವ ಹಾಗಾದವು.
8 Men da Simon Peter så det, faldt han ned for Jesu Knæ og sagde: "Gå bort fra mig, thi jeg er en syndig Mand, Herre!"
೮ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.
9 Thi en Rædsel var påkommen ham og alle dem, som vare med ham, over den Fiskedræt, som de havde fået;
೯ಏಕೆಂದರೆ ಅವನಿಗೂ ಅವನ ಸಂಗಡ ಇದ್ದವರೆಲ್ಲರಿಗೂ ತಾವು ಹಿಡಿದ ಮೀನುಗಳ ನಿಮಿತ್ತ ಆಶ್ಚರ್ಯಪಟ್ಟಿದ್ದರು.
10 ligeledes også Jakob og Johannes, Zebedæus's Sønner, som vare Simons Staldbrødre. Og Jesus sagde til Simon: "Frygt ikke, fra nu af skal du fange Mennesker."
೧೦ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಆಶ್ಚರ್ಯಪಟ್ಟರು. ಯೇಸು ಸೀಮೋನನಿಗೆ, “ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವ ಬೆಸ್ತನಾಗಿರುವಿ” ಎಂದು ಹೇಳಿದನು.
11 Og de lagde Skibene til Land og forlode alle Ting og fulgte ham.
೧೧ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಮತ್ತು ಎಲ್ಲವನ್ನು ಬಿಟ್ಟು ಅಂದಿನಿಂದ ಯೇಸುವನ್ನು ಹಿಂಬಾಲಿಸಿದರು.
12 Og det skete, medens han var i en af Byerne, se, da var der en Mand fuld af Spedalskhed; og da han så Jesus, faldt han på sit Ansigt, bad ham og sagde: "Herre! om du vil, kan du rense mig."
೧೨ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
13 Og han udrakte Hånden og rørte ved ham og sagde: "Jeg vil; bliv ren!" Og straks forlod Spedalskheden ham.
೧೩ಆತನು ಕೈನೀಡಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು, ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.
14 Og han bød ham, at han skulde ikke sige det til nogen, men "gå bort, og fremstil dig for Præsten, og offer for din Renselse, således som Moses har befalet, til Vidnesbyrd for dem!"
೧೪ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು.
15 Men Rygtet om ham udbredte sig end mere, og store Skarer kom sammen for at høre og for at helbredes for deres Sygdomme.
೧೫ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ, ತಮ್ಮ ತಮ್ಮ ರೋಗರುಜಿನಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ, ಗುಂಪುಗುಂಪಾಗಿ ಬಂದು ಸೇರಿದರು.
16 Men han gik bort til Ørkenerne og bad.
೧೬ಆದರೆ ಯೇಸು ಜನರಿಂದ ಪ್ರತ್ಯೇಕಿಸಿಕೊಂಡು ನಿರ್ಜನ ಪ್ರದೇಶಗಳಿಗೆ ಹೋಗಿ ಪ್ರಾರ್ಥನೆಯನ್ನು ಮಾಡುತ್ತಿದ್ದನು.
17 Og det skete en af de Dage, at han lærte, og der sad Farisæere og Lovlærere, som vare komne fra enhver Landsby i Galilæa og Judæa og fra Jerusalem; og Herrens Kraft var hos ham til at helbrede.
೧೭ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.
18 Og se, nogle Mænd bare på en Seng en Mand, som var værkbruden, og de søgte at bære ham ind og lægge ham foran ham.
೧೮ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗಿಯನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು. ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರು.
19 Og da de ikke fandt nogen Vej til at bære ham ind for Skarens Skyld, stege de op oven på Taget og firede ham tillige med Sengen ned imellem Tagstenene midt iblandt dem foran Jesus.
೧೯ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು.
20 Og da han så deres Tro, sagde han: "Menneske! dine Synder ere dig forladte."
೨೦ಯೇಸು ಅವರ ನಂಬಿಕೆಯನ್ನು ನೋಡಿ, “ಸ್ನೇಹಿತನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಅಂದನು.
21 Og de skriftkloge og Farisæerne begyndte at tænke således ved sig selv: "Hvem er denne, som taler Gudsbespottelser? Hvem kan forlade Synder, uden Gud alene?"
೨೧ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು.
22 Men da Jesus kendte deres Tanker, svarede han og sagde til dem: "Hvad tænke I på i eders Hjerter?
೨೨ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು?
23 Hvilket er lettest at sige: Dine Synder ere dig forladte? eller at sige: Stå op og gå?
೨೩ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ? ಎದ್ದು ನಡೆ ಅನ್ನುವುದೋ?
24 Men for at I skulle vide, at Menneskesønnen har Magt på Jorden til at forlade Synder," så sagde han til den værkbrudne: "Jeg siger dig, stå op, og tag din Seng, og gå til dit Hus!"
೨೪ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದು ಹೇಳಿದನು.
25 Og han stod straks op for deres Øjne og tog det, som han lå på, og gik hen til sit Hus og priste Gud.
೨೫ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು.
26 Og Forfærdelse betog alle, og de priste Gud; og de bleve fulde af Frygt og sagde: "Vi have i Dag set utrolige Ting."
೨೬ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು.
27 Og derefter gik han ud og så en Tolder ved Navn Levi sidde ved Toldboden, og han sagde til ham: "Følg mig!"
೨೭ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು,
28 Og han forlod alle Ting og stod op og fulgte ham.
೨೮ಅವನು ಎಲ್ಲವನ್ನೂ ಬಿಟ್ಟು ಎದ್ದು ಆತನ ಹಿಂದೆ ಹೋದನು.
29 Og Levi gjorde et stort Gæstebud for ham i sit Hus; og der var en stor Skare af Toldere og andre, som sade til Bords med dem.
೨೯ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.
30 Og Farisæerne og deres Skriftkloge knurrede imod hans Disciple og sagde: "Hvorfor spise og drikke I med Toldere og Syndere?"
೩೦ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು.
31 Og Jesus svarede og sagde til dem: "De raske trænge ikke til Læge, men de syge.
೩೧ಅದಕ್ಕೆ ಯೇಸು, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು;
32 Jeg er ikke kommen for at kalde retfærdige, men Syndere til Omvendelse."
೩೨ನಾನು ನೀತಿವಂತರನ್ನಲ್ಲ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ” ಎಂದು ಅವರಿಗೆ ಉತ್ತರಕೊಟ್ಟನು.
33 Men de sagde til ham: "Johannes's Disciple faste ofte og holde Bønner og Farisæernes ligeså; men dine spise og drikke?"
೩೩ಅವರು ಆತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು,
34 Men Jesus sagde til dem: "Kunne I vel få Brudesvendene til at faste, så længe Brudgommen er hos dem?
೩೪ಯೇಸು ಅವರಿಗೆ, “ಮದಲಿಂಗನು ಮದುವೆಯ ಅತಿಥಿಗಳ ಸಂಗಡ ಇರುವಲ್ಲಿ ಅವರಿಗೆ ಉಪವಾಸವಿರಿಸುವುದಕ್ಕೆ ನಿಮ್ಮಿಂದಾದೀತೇ?
35 Men der skal komme Dage, da Brudgommen bliver tagen fra dem; da skulle de faste i de Dage."
೩೫ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು” ಎಂದು ಉತ್ತರಕೊಟ್ಟನು.
36 Men han sagde også en Lignelse til dem: "Ingen river en Lap af et nyt Klædebon og sætter den på et gammelt Klædebon; ellers river han både det nye sønder, og Lappen fra det nye vil ikke passe til det gamle.
೩೬ಯೇಸು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನೆಂದರೆ, “ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ, ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ, ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ.
37 Og ingen kommer ung Vin på gammle Læderflasker; ellers sprænger den unge Vin Læderflaskerne, og den spildes, og Læderflaskerne ødelægges.
೩೭ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು.
38 Men man skal komme ung Vin på nye Læderflasker, så blive de begge bevarede.
೩೮ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.
39 Og ingen, som har drukket den gamle, vil have den unge; thi han siger: Den gamle er god."
೩೯ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವುದಿಲ್ಲ, ‘ಹಳೆಯದೇ ಉತ್ತಮ’ ಅನ್ನುವನು.”