< Salme 146 >
1 Halleluja! Pris HERREN, min Sjæl!
೧ಯೆಹೋವನಿಗೆ ಸ್ತೋತ್ರ! ನನ್ನ ಮನವೇ, ಯೆಹೋವನನ್ನು ಸ್ತುತಿಸು.
2 Jeg vil prise HERREN hele mit Liv, lovsynge min Gud, så længe jeg lever.
೨ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.
3 Sæt ikke eders Lid til Fyrster, til et Menneskebarn, der ikke kan hjælpe!
೩ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,
4 Hans Ånd går bort, han bliver til Jord igen, hans Råd er bristet samme Dag.
೪ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ, ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು.
5 Salig den, hvis Hjælp er Jakobs Gud, hvis Håb står til HERREN hans Gud,
೫ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.
6 som skabte Himmel og Jord, Havet og alf, hvad de rummer, som evigt bevarer sin Trofasthed
೬ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,
7 og skaffer de undertrykte Ret, som giver de sultne Brød! HERREN løser de fangne,
೭ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.
8 HERREN åbner de blindes Øjne, HERREN rejser de bøjede, HERREN elsker de retfærdige,
೮ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.
9 HERREN vogter de fremmede, opholder faderløse og Enker, men gudløses Vej gør han kroget.
೯ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.
10 HERREN er Konge for evigt, din Gud, o Zion, fra Slægt til Slægt. Halleluja!
೧೦ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, ಯೆಹೋವನಿಗೆ ಸ್ತೋತ್ರ!