< Salme 28 >

1 (Af David.) Jeg råber til dig, o Herre, min Klippe, vær ikke tavs imod mig, at jeg ej, når du tier, skal blive som de, der synker i Graven.
ದಾವೀದನ ಕೀರ್ತನೆ. ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.
2 Hør min tryglende Røst, når jeg råber til dig, løfter Hænderne op mod dit hellige Tempel.
ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು.
3 Riv mig ej bort med gudløse, Udådsmænd, som har ondt i Sinde mod Næsten trods venlige Ord.
ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು.
4 Løn dem for deres Idræt og onde Gerninger; løn dem for deres Hænders Værk, gengæld dem efter Fortjeneste!
ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.
5 Thi HERRENs Gerning ænser de ikke, ej heller hans Hænders Værk. Han nedbryde dem og opbygge dem ej!
ಅವರು ಯೆಹೋವನ ಕಾರ್ಯಗಳನ್ನೂ ಮತ್ತು ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ.
6 Lovet være HERREN, thi han har hørt min tryglende Røst;
ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ; ಆತನಿಗೆ ಸ್ತೋತ್ರವಾಗಲಿ.
7 min Styrke, mit Skjold er HERREN, mit Hjerte stoler på ham. Jeg fik Hjælp, mit Hjerte jubler, jeg takker ham med min Sang.
ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
8 HERREN er Værn for sit Folk, sin Salvedes Tilflugt og Frelse.
ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.
9 Frels dit Folk og velsign din Arv, røgt dem og bær dem til evig Tid!
ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.

< Salme 28 >