< Salme 36 >
1 (Til sangmesteren. Af HERRENs tjener David.) Synden taler til den Gudløse inde i hans Hjerte; Gudsfrygt har han ikke for Øje;
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆಹೋವನ ಸೇವಕನಾದ ದಾವೀದನ ಕೀರ್ತನೆ. ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.
2 thi den smigrer ham frækt og siger, at ingen skal finde hans Brøde og hade ham.
೨ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ.
3 Hans Munds Ord er Uret og Svig, han har ophørt at handle klogt og godt;
೩ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.
4 på sit Leje udtænker han Uret, han træder en Vej, som ikke er god; det onde afskyr han ikke.
೪ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.
5 HERRE, din Miskundhed rækker til Himlen, din Trofasthed når til Skyerne,
೫ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.
6 din Retfærd er som Guds Bjerge, dine Domme som det store Dyb; HERRE, du frelser Folk og Fæ,
೬ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.
7 hvor dyrebar er dog din Miskundhed, Gud! Og Menneskebørnene skjuler sig i dine Vingers Skygge;
೭ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.
8 de kvæges ved dit Huses Fedme, du læsker dem af din Lifligheds Strøm;
೮ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.
9 thi hos dig er Livets Kilde, i dit Lys skuer vi Lys!
೯ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.
10 Lad din Miskundhed blive over dem, der kender dig, din Retfærd over de oprigtige af Hjertet.
೧೦ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.
11 Lad Hovmods Fod ej træde mig ned, gudløses Hånd ej jage mig bort.
೧೧ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ; ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು.
12 Se, Udådsmændene falder, slås ned, så de ikke kan rejse sig.
೧೨ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ.